ENG vs AFG: ವಿಶ್ವ ಚಾಂಪಿಯನ್ನರಿಗೆ ಸೋಲುಣಿಸಿದ ಅಫ್ಘಾನಿಸ್ತಾನ್

Afghanistan vs England: ಮೊದಲ ವಿಕೆಟ್​ಗೆ 114 ರನ್​ಗಳ ಜೊತೆಯಾಟವಾಡಿದ ಬಳಿಕ ಇಬ್ರಾಹಿಂ ಝದ್ರಾನ್ (28) ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ರಹಮತ್ ಶಾ (3) ಕೂಡ ಔಟಾದರು. ಆದರೆ ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಗುರ್ಬಾಝ್ ಇಂಗ್ಲೆಂಡ್ ಬೌಲರ್​ಗಳ ಬೆಂಡೆತ್ತಿದರು.

ENG vs AFG: ವಿಶ್ವ ಚಾಂಪಿಯನ್ನರಿಗೆ ಸೋಲುಣಿಸಿದ ಅಫ್ಘಾನಿಸ್ತಾನ್
Afghanistan
Follow us
TV9 Web
| Updated By: ಝಾಹಿರ್ ಯೂಸುಫ್

Updated on:Oct 15, 2023 | 10:03 PM

ಏಕದಿನ ವಿಶ್ವಕಪ್​ನ 13ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಐತಿಹಾಸಿಕ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಆಂಗ್ಲರನ್ನು 69 ರನ್​ಗಳಿಂದ ಸೋಲಿಸಿ ಅಫ್ಘಾನ್ ಪಡೆ ಹೊಸ ಇತಿಹಾಸ ನಿರ್ಮಿಸಿದರು. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಅಫ್ಘಾನಿಸ್ತಾನ್ ತಂಡಕ್ಕೆ ಆರಂಭಿಕರಾದ ರಹಮಾನುಲ್ಲಾ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ ಭರ್ಜರಿ ಆರಂಭ ಒದಗಿಸಿದ್ದರು.

ಮೊದಲ ವಿಕೆಟ್​ಗೆ 114 ರನ್​ಗಳ ಜೊತೆಯಾಟವಾಡಿದ ಬಳಿಕ ಇಬ್ರಾಹಿಂ ಝದ್ರಾನ್ (28) ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ರಹಮತ್ ಶಾ (3) ಕೂಡ ಔಟಾದರು. ಆದರೆ ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಗುರ್ಬಾಝ್ ಇಂಗ್ಲೆಂಡ್ ಬೌಲರ್​ಗಳ ಬೆಂಡೆತ್ತಿದರು.

ಕೇವಲ 57 ಎಸೆತಗಳನ್ನು ಎದುರಿಸಿದ ರಹಮಾನುಲ್ಲಾ ಗುರ್ಬಾಝ್ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 80 ರನ್ ಬಾರಿಸಿ ರನೌಟ್ ಆದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಇಕ್ರಮ್ ಅಲಿಖಿಲ್ 66 ಎಸೆತಗಳಲ್ಲಿ 58 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಅಫ್ಘಾನಿಸ್ತಾನ್ 49.5 ಓವರ್​ಗಳಲ್ಲಿ 284 ರನ್​ಗಳಿಸಿ ಆಲೌಟ್ ಆದರು.

285 ರನ್​​ಗಳ ಸ್ಪರ್ಧಾತ್ಮಕ ಗುರಿ ಪಡೆದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಅಫ್ಘಾನ್ ಬೌಲರ್​ಗಳು ಯಶಸ್ವಿಯಾದರು. 2ನೇ ಓವರ್​ನ ಮೊದಲ ಎಸೆತದಲ್ಲೇ ಜಾನಿ ಬೈರ್​ಸ್ಟೋವ್ (2) ಔಟಾದರೆ, 7ನೇ ಓವರ್​ನಲ್ಲಿ ಜೋ ರೂಟ್ (11) ವಿಕೆಟ್ ಒಪ್ಪಿಸಿದರು. ಇನ್ನು 33 ರನ್ ಬಾರಿಸಿ ಡೇವಿಡ್ ಮಲಾನ್ ಕೂಡ ನಿರ್ಗಮಿಸಿದರು.

ಜೋಸ್ ಬಟ್ಲರ್ (9) ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ (10) ಬಂದ ವೇಗದಲ್ಲೇ ಹಿಂತಿರುಗಿದರು. ಪರಿಣಾಮ 117 ರನ್​ಗಳಿಸುವಷ್ಟರಲ್ಲಿ ಇಂಗ್ಲೆಂಡ್ ತಂಡವು ಅಗ್ರ ಕ್ರಮಾಂಕದ ಐವರ ವಿಕೆಟ್ ಕಳೆದುಕೊಂಡಿತು. ಇದಾಗ್ಯೂ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಹ್ಯಾರಿ ಬ್ರೂಕ್ ಅರ್ಧಶತಕ ಬಾರಿಸಿ ತಂಡಕ್ಕೆ ಆಸರೆಯಾದರು.

ಆದರೆ ಮತ್ತೊಂದೆಡೆ ಸ್ಯಾಮ್ ಕರನ್ (10) ಹಾಗೂ ಕ್ರಿಸ್ ವೋಕ್ಸ್ (9) ಅವರನ್ನು ಕ್ರೀಸ್ ಕಚ್ಚಿ ನಿಲ್ಲಲು ಮೊಹಮ್ಮದ್ ನಬಿ ಹಾಗೂ ಮುಜೀಬ್ ಬಿಡಲಿಲ್ಲ. ಇದರ ಬೆನ್ನಲ್ಲೇ ಹ್ಯಾರಿ ಬ್ರೂಕ್ (66) ವಿಕೆಟ್ ಪಡೆದ ಮುಜೀಬ್ ಉರ್ ರೆಹಮಾನ್ ಅಫ್ಘಾನ್ ತಂಡಕ್ಕೆ ಅಮೂಲ್ಯ ಯಶಸ್ಸು ತಂದುಕೊಟ್ಟರು.

35 ಓವರ್​ಗಳ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡ 173 ರನ್​ ಕಲೆಹಾಕಿದರೆ, ಅಫ್ಘಾನ್ ಬೌಲರ್​ಗಳು 8 ವಿಕೆಟ್​ಗಳನ್ನು ಉರುಳಿಸಿದ್ದರು. ಅಂತಿಮವಾಗಿ ಇಂಗ್ಲೆಂಡ್ ತಂಡವನ್ನು 40.3 ಓವರ್​ಗಳಲ್ಲಿ 215 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಅಫ್ಘಾನಿಸ್ತಾನ್ ತಂಡ 69 ರನ್​ಗಳ ಭರ್ಜರಿ ಜಯ ಸಾಧಿಸಿತು. ಅಫ್ಘಾನ್ ಪರ ಮುಜೀಬ್ ಹಾಗೂ ರಶೀದ್ ಖಾನ್ ತಲಾ 3 ವಿಕೆಟ್ ಕಬಳಿಸಿ ಮಿಂಚಿದರು.

ಏಕದಿನ ವಿಶ್ವಕಪ್​ನಲ್ಲಿ 2ನೇ ಗೆಲುವು:

ಏಕದಿನ ವಿಶ್ವಕಪ್​ನಲ್ಲಿ ಇದು ಅಫ್ಘಾನಿಸ್ತಾನ್ ತಂಡದ 2ನೇ ಗೆಲುವು. ಇದಕ್ಕೂ ಮುನ್ನ 2015ರ ಏಕದಿನ ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್ ವಿರುದ್ಧ ಅಫ್ಘಾನ್ ಪಡೆ 1 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಇದೀಗ ಬಲಿಷ್ಠ ಇಂಗ್ಲೆಂಡ್ ತಂಡಕ್ಕೆ ಸೋಲುಣಿಸುವ ಮೂಲಕ ಅಫ್ಘಾನಿಸ್ತಾನ್ ತಂಡ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

ಇಂಗ್ಲೆಂಡ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಡೇವಿಡ್ ಮಲಾನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ.

ಇದನ್ನೂ ಓದಿ: ಕೆಎಲ್ ರಾಹುಲ್​ಗೆ ಒಲಿದ ಬೆಸ್ಟ್ ಫೀಲ್ಡರ್​ ಪದಕ: ಇಲ್ಲಿದೆ ವಿಡಿಯೋ

ಅಫ್ಘಾನಿಸ್ತಾನ್ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಝಲ್ಹಕ್ ಫಾರೂಖಿ.

Published On - 9:29 pm, Sun, 15 October 23

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ