IND vs AFG: ಭಾರತ ವಿರುದ್ಧದ ಟಿ20 ಸರಣಿಗೆ 19 ಸದಸ್ಯರ ಅಫ್ಘಾನಿಸ್ತಾನ ತಂಡ ಪ್ರಕಟ

IND vs AFG: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಜನವರಿ 11 ರಿಂದ ಆರಂಭವಾಗಲಿದೆ. ಸರಣಿ ಆರಂಭಕ್ಕೆ ಐದು ದಿನಗಳ ಮೊದಲು ಅಫ್ಘಾನಿಸ್ತಾನ ತಂಡ ತನ್ನ 19 ಸದಸ್ಯರ ತಂಡವನ್ನು ಇಂದು ಪ್ರಕಟಿಸಿದೆ.

IND vs AFG: ಭಾರತ ವಿರುದ್ಧದ ಟಿ20 ಸರಣಿಗೆ 19 ಸದಸ್ಯರ ಅಫ್ಘಾನಿಸ್ತಾನ ತಂಡ ಪ್ರಕಟ
ಅಫ್ಘಾನಿಸ್ತಾನ ತಂಡ
Follow us
ಪೃಥ್ವಿಶಂಕರ
|

Updated on:Jan 06, 2024 | 6:12 PM

ಭಾರತ ಮತ್ತು ಅಫ್ಘಾನಿಸ್ತಾನ India vs Afghanistan ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಜನವರಿ 11 ರಿಂದ ಆರಂಭವಾಗಲಿದೆ. ಸರಣಿ ಆರಂಭಕ್ಕೆ ಐದು ದಿನಗಳ ಮೊದಲು ಅಫ್ಘಾನಿಸ್ತಾನ ತಂಡ ತನ್ನ 19 ಸದಸ್ಯರ ತಂಡವನ್ನು ಇಂದು ಪ್ರಕಟಿಸಿದೆ. ಅಫ್ಘಾನಿಸ್ತಾನ ತಂಡ ಮೊದಲ ಬಾರಿಗೆ ಟಿ20 ಸರಣಿಗಾಗಿ ಭಾರತಕ್ಕೆ ಭೇಟಿ ನೀಡುತ್ತಿದ್ದು, ತಂಡದ ನಾಯಕತ್ವ ಇಬ್ರಾಹಿಂ ಜರ್ದಾನ್ (Ibrahim Zadran) ಕೈಯಲ್ಲಿದೆ. ಈ ವರ್ಷ ಜೂನ್ ತಿಂಗಳಲ್ಲಿ ಟಿ20 ವಿಶ್ವಕಪ್ (T20 World Cup 2024) ಇರುವುದರಿಂದ ಉಭಯ ತಂಡಗಳಿಗೂ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಟಿ20 ವಿಶ್ವಕಪ್​ಗೂ ಮುನ್ನ ಟೀಂ ಇಂಡಿಯಾದ (Team India) ಸಿದ್ಧತೆಗೆ ಇದು ಕೊನೆಯ ಟಿ20 ಸರಣಿ ಆಗಿರುವುದರಿಂದ ಟೀಂ ಇಂಡಿಯಾ ಈ ಸರಣಿಯನ್ನು ಗಂಭೀರವಾಗಿ ಪರಿಣಮಿಸಿದೆ. ಈ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿಲ್ಲವಾದರೂ, ಇಂದು ಬಿಸಿಸಿಐ (BCCI) ತಂಡವನ್ನು ಪ್ರಕಟಿಸುವ ಸಾಧ್ಯತೆಗಳಿವೆ.

ರಶೀದ್ ಬದಲು ಈತನಿಗೆ ನಾಯಕತ್ವ

ಅಫ್ಘಾನಿಸ್ತಾನ ತಂಡದ ನಿಯಮಿತ ಟಿ20 ನಾಯಕ ರಶೀದ್ ಖಾನ್ ಅವರನ್ನು ಭಾರತ ವಿರುದ್ಧದ ಟಿ20 ಸರಣಿಗೆ ತಂಡದಲ್ಲಿ ಆಯ್ಕೆ ಮಾಡಲಾಗಿದೆ. ಆದರೆ ಅವರು ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಆಡುವುದಿಲ್ಲ. ವಾಸ್ತವವಾಗಿ ರಶೀದ್ ಇತ್ತೀಚಿಗೆ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅದರಿಂದ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಶಾರ್ಜಾದಲ್ಲಿ ಯುಎಇ ವಿರುದ್ಧ 2-1 ಅಂತರದಲ್ಲಿ ಅಫ್ಘಾನಿಸ್ತಾನ ತಂಡವನ್ನು ಗೆಲುವಿಗೆ ಮುನ್ನಡೆಸಿದ ಇಬ್ರಾಹಿಂ ಜದ್ರಾನ್ ಅವರು ಭಾರತದ ವಿರುದ್ಧ ಅಫ್ಘಾನಿಸ್ತಾನವನ್ನು ಮುನ್ನಡೆಸಲಿದ್ದಾರೆ. ಇದೆಲ್ಲದರ ಹೊರತಾಗಿ ಮುಜೀಬ್ ಉರ್ ರೆಹಮಾನ್ ಮತ್ತೊಮ್ಮೆ ತಂಡಕ್ಕೆ ಮರಳಿದ್ದಾರೆ.

ಭಾರತ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ತಂಡ

ಇಬ್ರಾಹಿಂ ಝದ್ರಾನ್ (ನಾಯಕ), ರೆಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾನ್, ಫಜಲ್ ಹಕ್ ಫಾರೂಕಿ, ಫರೀದ್ ಅಹ್ಮದ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಂ, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Sat, 6 January 24

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ