ಭಾರತ ಮತ್ತು ಅಫ್ಘಾನಿಸ್ತಾನ India vs Afghanistan ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಜನವರಿ 11 ರಿಂದ ಆರಂಭವಾಗಲಿದೆ. ಸರಣಿ ಆರಂಭಕ್ಕೆ ಐದು ದಿನಗಳ ಮೊದಲು ಅಫ್ಘಾನಿಸ್ತಾನ ತಂಡ ತನ್ನ 19 ಸದಸ್ಯರ ತಂಡವನ್ನು ಇಂದು ಪ್ರಕಟಿಸಿದೆ. ಅಫ್ಘಾನಿಸ್ತಾನ ತಂಡ ಮೊದಲ ಬಾರಿಗೆ ಟಿ20 ಸರಣಿಗಾಗಿ ಭಾರತಕ್ಕೆ ಭೇಟಿ ನೀಡುತ್ತಿದ್ದು, ತಂಡದ ನಾಯಕತ್ವ ಇಬ್ರಾಹಿಂ ಜರ್ದಾನ್ (Ibrahim Zadran) ಕೈಯಲ್ಲಿದೆ. ಈ ವರ್ಷ ಜೂನ್ ತಿಂಗಳಲ್ಲಿ ಟಿ20 ವಿಶ್ವಕಪ್ (T20 World Cup 2024) ಇರುವುದರಿಂದ ಉಭಯ ತಂಡಗಳಿಗೂ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಟಿ20 ವಿಶ್ವಕಪ್ಗೂ ಮುನ್ನ ಟೀಂ ಇಂಡಿಯಾದ (Team India) ಸಿದ್ಧತೆಗೆ ಇದು ಕೊನೆಯ ಟಿ20 ಸರಣಿ ಆಗಿರುವುದರಿಂದ ಟೀಂ ಇಂಡಿಯಾ ಈ ಸರಣಿಯನ್ನು ಗಂಭೀರವಾಗಿ ಪರಿಣಮಿಸಿದೆ. ಈ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿಲ್ಲವಾದರೂ, ಇಂದು ಬಿಸಿಸಿಐ (BCCI) ತಂಡವನ್ನು ಪ್ರಕಟಿಸುವ ಸಾಧ್ಯತೆಗಳಿವೆ.
ಅಫ್ಘಾನಿಸ್ತಾನ ತಂಡದ ನಿಯಮಿತ ಟಿ20 ನಾಯಕ ರಶೀದ್ ಖಾನ್ ಅವರನ್ನು ಭಾರತ ವಿರುದ್ಧದ ಟಿ20 ಸರಣಿಗೆ ತಂಡದಲ್ಲಿ ಆಯ್ಕೆ ಮಾಡಲಾಗಿದೆ. ಆದರೆ ಅವರು ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಆಡುವುದಿಲ್ಲ. ವಾಸ್ತವವಾಗಿ ರಶೀದ್ ಇತ್ತೀಚಿಗೆ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅದರಿಂದ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಶಾರ್ಜಾದಲ್ಲಿ ಯುಎಇ ವಿರುದ್ಧ 2-1 ಅಂತರದಲ್ಲಿ ಅಫ್ಘಾನಿಸ್ತಾನ ತಂಡವನ್ನು ಗೆಲುವಿಗೆ ಮುನ್ನಡೆಸಿದ ಇಬ್ರಾಹಿಂ ಜದ್ರಾನ್ ಅವರು ಭಾರತದ ವಿರುದ್ಧ ಅಫ್ಘಾನಿಸ್ತಾನವನ್ನು ಮುನ್ನಡೆಸಲಿದ್ದಾರೆ. ಇದೆಲ್ಲದರ ಹೊರತಾಗಿ ಮುಜೀಬ್ ಉರ್ ರೆಹಮಾನ್ ಮತ್ತೊಮ್ಮೆ ತಂಡಕ್ಕೆ ಮರಳಿದ್ದಾರೆ.
🚨 𝐒𝐐𝐔𝐀𝐃 𝐀𝐋𝐄𝐑𝐓! 🚨
AfghanAtalan Lineup revealed for the three-match T20I series against @BCCI. 🤩
More 👉: https://t.co/hMGh4OY0Pf | #AfghanAtalan | #INDvAFG pic.twitter.com/DqBGmpcIh4
— Afghanistan Cricket Board (@ACBofficials) January 6, 2024
ಇಬ್ರಾಹಿಂ ಝದ್ರಾನ್ (ನಾಯಕ), ರೆಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾನ್, ಫಜಲ್ ಹಕ್ ಫಾರೂಕಿ, ಫರೀದ್ ಅಹ್ಮದ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಂ, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:49 pm, Sat, 6 January 24