Afghanistan Cricket: ಇತಿಹಾಸ ರಚಿಸಿದ ಕ್ರಿಕೆಟ್ ಶಿಶುಗಳು: ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಅರ್ಹತೆ ಪಡೆದ ಅಫ್ಘಾನಿಸ್ತಾನ
Champions Trophy 2025: ಒಟ್ಟು ಎಂಟು ತಂಡಗಳು ಮಾತ್ರ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಬಹುದು. ಆತಿಥೇಯ ರಾಷ್ಟ್ರವಾಗಿರುವುದರಿಂದ ಪಾಕಿಸ್ತಾನ ಸ್ವಯಂಚಾಲಿತವಾಗಿ ಅರ್ಹತೆ ಪಡೆಯುತ್ತದೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವನ್ನು ಹೊರತುಪಡಿಸಿ, ಭಾರತ, ದಕ್ಷಿಣ ಆಫ್ರಿಕಾ, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾಗಳು ಚಾಂಪಿಯನ್ಸ್ ಟ್ರೋಫಿ 2025 ಈವೆಂಟ್‌ನಲ್ಲಿ ಭಾಗವಹಿಸಲಿದೆ.

ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ 2025 ಕ್ಕೆ (Champions Trophy 2025) ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಅರ್ಹತೆ ಪಡೆದುಕೊಂಡಿದೆ. ಐಸಿಸಿ ಏಕದಿನ ವಿಶ್ವಕಪ್ 2023ರಲ್ಲಿ ಬಾಂಗ್ಲಾದೇಶದ ವಿರುದ್ಧ ಶ್ರೀಲಂಕಾ ಸೋತ ನಂತರ ಅಫ್ಘಾನಿಸ್ತಾನ ಚಾಂಪಿಯನ್ಸ್ ಟ್ರೋಫಿ ಈವೆಂಟ್‌ನಲ್ಲಿ ಭಾಗವಹಿಸುವುದು ಖಚಿತವಾಯಿತು. ಅಫ್ಘಾನ್ ತಂಡ ಇದುವರೆಗೆ ಚಾಂಪಿಯನ್ಸ್ ಟ್ರೋಫಿ ಆಡಿಲ್ಲ. ಚೊಚ್ಚಲ ಬಾರಿಗೆ ಪ್ರವೇಶ ಪಡೆದಿರುವ ಅಫ್ಘಾನಿಸ್ತಾನ ಸದ್ಯ ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಂದ್ಯವನ್ನು ಆಡುತ್ತಿದೆ.
ಒಟ್ಟು ಎಂಟು ತಂಡಗಳು ಮಾತ್ರ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಬಹುದು. ಆತಿಥೇಯ ರಾಷ್ಟ್ರವಾಗಿರುವುದರಿಂದ ಪಾಕಿಸ್ತಾನ ಸ್ವಯಂಚಾಲಿತವಾಗಿ ಆಯ್ಕೆ ಆಗುತ್ತದೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವನ್ನು ಹೊರತುಪಡಿಸಿ, ಭಾರತ, ದಕ್ಷಿಣ ಆಫ್ರಿಕಾ, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಚಾಂಪಿಯನ್ಸ್ ಟ್ರೋಫಿ 2025 ಈವೆಂಟ್‌ನಲ್ಲಿ ಭಾಗವಹಿಸಲಿದೆ. ಇನ್ನೂ ಎರಡು ಸ್ಥಾನಗಳು ಯಾವುದು ಎಂಬುದು ಫೈನಲ್ ಆಗಬೇಕಿದೆ.
ಇಂಗ್ಲೆಂಡ್, ನೆದರ್ಲೆಂಡ್ಸ್, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಇನ್ನೂ ಚಾಂಪಿಯನ್ಸ್ ಟ್ರೋಫಿ ಆಡಲು ಸ್ಪರ್ಧೆಯಲ್ಲಿದೆ. ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಎಂಟು ಸ್ಥಾನ ಪಡೆದಿರುವ ತಂಡ ಚಾಂಪಿಯನ್ಸ್ ಟ್ರೋಫಿ 2025 ಅನ್ನು ಆಡುತ್ತವೆ.
IND vs NED, ICC World Cup: ಬೆಂಗಳೂರಿಗೆ ಆಗಮಿಸಿದ ಟೀಮ್ ಇಂಡಿಯಾ ಆಟಗಾರರು: ರೋಹಿತ್ ಪಡೆಗೆ ಅದ್ಧೂರಿ ಸ್ವಾಗತ
ಅಫ್ಘಾನಿಸ್ತಾನ ಈ ಬಾರಿಯ ವಿಶ್ವಕಪ್ನಲ್ಲಿ ನಿರೀಕ್ಷೆಗೂ ಮೀರಿದ ಪ್ರದರ್ಶನ ತೋರಿದೆ. ಹಶ್ಮತುಲ್ಲಾ ಶಾಹಿದಿ ನೇತೃತ್ವದ ತಂಡವು ವಿಶ್ವಕಪ್‌ನ 2015 ಮತ್ತು 2019 ಆವೃತ್ತಿಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿತ್ತು. ಆದರೆ, ಈ ಬಾರಿ ಅಫ್ಘನ್ನರು ಇಂಗ್ಲೆಂಡ್, ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್ ತಂಡಗಳನ್ನು ಸೋಲಿಸಿ ವಿಶ್ವಕಪ್ ಸೆಮಿ ಫೈನಲ್ ರೇಸ್ನಲ್ಲಿ ಕಾಣಿಸಿಕೊಂಡಿದೆ.
ಅಫ್ಘಾನಿಸ್ತಾನ ತಂಡ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಇನ್ನೂ ಎರಡು ಪಂದ್ಯಗಳನ್ನು ಆಡಲಿದೆ. ಈ ಪೈಕಿ ಇಂದು ಆಸೀಸ್ ವಿರುದ್ಧ ಪಂದ್ಯವನ್ನು ಆಡುತ್ತಿದೆ. ಸೆಮೀಸ್ ಸ್ಥಾನ ಖಚಿತಪಡಿಸಿಕೊಳ್ಳಲು ಈ ಎರಡೂ ಪಂದ್ಯಗಳನ್ನು ಗೆಲ್ಲಬೇಕಾಗಿದೆ. 8 ಅಂಕಗಳೊಂದಿಗೆ ಅಫ್ಘಾನಿಸ್ತಾನವು ಪ್ರಸ್ತುತ ಆರನೇ ಸ್ಥಾನದಲ್ಲಿದ್ದು, ಮುಂದಿನ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾವನ್ನು ಮಣಿಸಿದರೆ ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯಲಿದೆ. ಆದರೆ ಅಫ್ಘಾನಿಸ್ತಾನ ತನ್ನ ಒಂದು ಅಥವಾ ಎರಡರ ಪಂದ್ಯಗಳಲ್ಲಿ ಸೋತರೆ, ನ್ಯೂಝಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಮುಂದಿನ ಪಂದ್ಯಗಳನ್ನು ಭಾರೀ ಅಂತರದಿಂದ ಸೋಲಬೇಕು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ