ಭಾರತದಲ್ಲಿ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಲಿದೆ ಅಫ್ಘಾನ್; ಎದುರಾಳಿ ಟೀಂ ಇಂಡಿಯಾ ಅಲ್ಲ
AFG vs NZ: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಾಗಿನಿಂದ, ಅಫ್ಘಾನಿಸ್ತಾನ ತಂಡ ತವರಿನಲ್ಲಿ ಯಾವುದೇ ದ್ವಿಪಕ್ಷೀಯ ಸರಣಿಗಳನ್ನು ಆಡುತಿಲ್ಲ. ಇದರಿಂದಾಗಿ ಅಫ್ಘಾನಿಸ್ತಾನ ತಂಡ ಭಾರತದ ನೆಲದಲ್ಲಿ ನ್ಯೂಜಿಲೆಂಡ್ ವಿರುದ್ಧ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡಲು ತಯಾರಿ ನಡೆಸಿದೆ.
ತನ್ನ ಅಮೋಘ ಪ್ರದರ್ಶನದ ಮೂಲಕ ಬಲಾಢ್ಯ ತಂಡಗಳನ್ನೇ ಮಣಿಸಿ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ನಲ್ಲಿ ಸೆಮಿಫೈನಲ್ ಪ್ರವೇಶಿದ್ದ ಅಫ್ಘಾನಿಸ್ತಾನ ತಂಡ, ಇದೀಗ ನ್ಯೂಜಿಲೆಂಡ್ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಲು ಸಜ್ಜಾಗಿದೆ. ವರದಿಯ ಪ್ರಕಾರ ಅಫ್ಘಾನ್ ಪಡೆ ಮುಂಬರುವ ಸೆಪ್ಟಂಬರ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ಭಾರತದ ಗ್ರೇಟರ್ ನೋಯ್ಡಾದ ಶಹೀದ್ ವಿಜಯ್ ಸಿಂಗ್ ಪಥಿಕ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಆತಿಥ್ಯವಹಿಸಲಿದೆ ಎಂದು ವರದಿಯಾಗಿದೆ. ವಾಸ್ತವವಾಗಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಾಗಿನಿಂದ, ಅಫ್ಘಾನಿಸ್ತಾನ ತಂಡ ತವರಿನಲ್ಲಿ ಯಾವುದೇ ದ್ವಿಪಕ್ಷೀಯ ಸರಣಿಗಳನ್ನು ಆಡುತಿಲ್ಲ. ಇದರಿಂದಾಗಿ ಅಫ್ಘಾನಿಸ್ತಾನ ತಂಡ ಭಾರತದ ನೆಲದಲ್ಲಿ ನ್ಯೂಜಿಲೆಂಡ್ ವಿರುದ್ಧ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡಲು ತಯಾರಿ ನಡೆಸಿದೆ.
ಗ್ರೇಟರ್ ನೋಯ್ಡಾದಲ್ಲಿ ಪಂದ್ಯ
ತಾಲಿಬಾನ್, ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಅಫ್ಘಾನಿಸ್ತಾನಕ್ಕೆ ಸಹಾಯ ಮಾಡುತ್ತಿರುವ ಏಕೈಕ ಕ್ರಿಕೆಟ್ ಮಂಡಳಿ ಬಿಸಿಸಿಐ ಆಗಿದೆ. ಹೀಗಾಗಿ ಅಫ್ಘಾನ್ ತಂಡದ ಏಕೈಕ ಟೆಸ್ಟ್ ಪಂದ್ಯವನ್ನು ಆಯೋಜಿಸಲು ಭಾರತದಲ್ಲಿ ಅವಕಾಶ ಮಾಡಿಕೊಡಲು ಬಿಸಿಸಿಐ ಗ್ರೀನ್ ಸಿಗ್ನಲ್ ನೀಡಿದೆ ಎಂದು ವರದಿಯಾಗಿದೆ. ಮೇಲೆ ಹೇಳಿದಂತೆ ಈ ಪಂದ್ಯ ಸೆಪ್ಟೆಂಬರ್‌ನಲ್ಲಿ ನಡೆಯುವ ನಿರೀಕ್ಷೆಯಿದೆ. ಇದಾದ ಬಳಿಕ ನ್ಯೂಜಿಲೆಂಡ್ ಟೀಂ ಇಂಡಿಯಾದೊಂದಿಗೆ ಭಾರತದಲ್ಲಿಯೇ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಬೇಕಿದೆ. ಈ ಸರಣಿ ಕೂಡ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಆಯೋಜಿಸುವ ಸಾಧ್ಯತೆಗಳಿವೆ.
TEST CRICKET IN GREATER NOIDA…!!!! 🔥
– Afghanistan will host a Test match against New Zealand in Greater Noida in September. [Gaurav Gupta from TOI] pic.twitter.com/Tk694RwM0K
— Malik Hammad (@Hammad_Iqbal786) July 23, 2024
ಗ್ರೀನ್ ಸಿಗ್ನಲ್ ನೀಡಿದ ಬಿಸಿಸಿಐ
ವರದಿಗಳ ಪ್ರಕಾರ, ಬಿಸಿಸಿಐ ತನ್ನ ಪಂದ್ಯಗಳನ್ನು ಆಯೋಜಿಸಲು ಅಫ್ಘಾನಿಸ್ತಾನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಅಫ್ಘಾನಿಸ್ತಾನ ಜುಲೈನಲ್ಲಿ ಬಾಂಗ್ಲಾದೇಶದೊಂದಿಗೆ ಏಕದಿನ ಮತ್ತು ಟೆಸ್ಟ್ ಸರಣಿಯನ್ನು ಆಡಬೇಕಿತ್ತು ಆದರೆ ಈ ಸರಣಿಯು ನಡೆಯಲು ಸಾಧ್ಯವಾಗಲಿಲ್ಲ. ಇಲ್ಲಿಯವರೆಗೆ, ಅಫ್ಘಾನಿಸ್ತಾನ ಕ್ರಿಕೆಟ್ ತಂಡವು ಕೇವಲ 9 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ತಂಡವು ಕೇವಲ 3 ಪಂದ್ಯಗಳನ್ನು ಗೆದ್ದು 6 ಪಂದ್ಯಗಳಲ್ಲಿ ಸೋತಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:31 pm, Tue, 23 July 24