Afghanistan: ಅಫ್ಘಾನಿಸ್ತಾನ್ ಟೆಸ್ಟ್ ತಂಡ ಪ್ರಕಟ: ರಶೀದ್ ಖಾನ್ ಔಟ್..!

Afghanistan vs Sri Lanka: ಅಫ್ಘಾನಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಪಂದ್ಯವು ಫೆಬ್ರವರಿ 2 ರಿಂದ ಶುರುವಾಗಲಿದೆ. ಲಂಕಾದ ಸಿಂಘಲೀಸ್ ಸ್ಪೋರ್ಟ್ಸ್ ಕ್ಲಬ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಅಫ್ಘಾನಿಸ್ತಾನ್ ತಂಡವನ್ನು ಘೋಷಿಸಲಾಗಿದೆ.

Afghanistan: ಅಫ್ಘಾನಿಸ್ತಾನ್ ಟೆಸ್ಟ್ ತಂಡ ಪ್ರಕಟ: ರಶೀದ್ ಖಾನ್ ಔಟ್..!
Afghanistan
Follow us
| Updated By: ಝಾಹಿರ್ ಯೂಸುಫ್

Updated on: Jan 30, 2024 | 1:58 PM

ಶ್ರೀಲಂಕಾ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಅಫ್ಘಾನಿಸ್ತಾನ್ ತಂಡವನ್ನು (Afghanistan squad) ಪ್ರಕಟಿಸಲಾಗಿದೆ. 16 ಸದಸ್ಯರ ಈ ತಂಡವನ್ನು ಇಬ್ರಾಹಿಂ ಝದ್ರಾನ್ ಮುನ್ನಡೆಸಲಿದ್ದಾರೆ. ಹಾಗೆಯೇ ಉಪನಾಯಕರಾಗಿ ರಹಮತ್ ಶಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಬಳಗದಲ್ಲಿ ಸ್ಟಾರ್ ಆಟಗಾರ ರಶೀದ್ ಖಾನ್ ಕಾಣಿಸಿಕೊಂಡಿಲ್ಲ.

ಬೆನ್ನು ನೋವಿನ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ರಶೀದ್ ಖಾನ್ ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹಾಗೆಯೇ ರಶೀದ್ ಖಾನ್ ಸ್ಥಾನದಲ್ಲಿ ಮತ್ತೋರ್ವ ಸ್ಪಿನ್ನರ್ ಖೈಸ್ ಅಹ್ಮದ್​ಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

ಇನ್ನು ಈ ತಂಡದಲ್ಲಿ ನಾಲ್ವರು ಹೊಸ ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ. ನೂರ್ ಅಲಿ ಝದ್ರಾನ್, ಬಲಗೈ ಸೀಮರ್ ನವೀದ್ ಝದ್ರಾನ್ ಮತ್ತು ಕೀಪರ್-ಬ್ಯಾಟ್ಸ್‌ಮನ್ ಮೊಹಮ್ಮದ್ ಇಶಾಕ್ ಅವರು ಇದೇ ಮೊದಲ ಬಾರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಝಿಯಾ ಉರ್​ ರೆಹಮಾನ್ ಕೂಡ ಅಫ್ಘಾನ್ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Shubman Gill: ಶುಭ್​ಮನ್ ಗಿಲ್, ಅಹಮದಾಬಾದ್​ ಪಿಚ್​ನಲ್ಲಿ ಹುಲಿ, ಇತರೆಡೆ…

ಫೆಬ್ರವರಿ 2 ರಿಂದ ಅಫ್ಘಾನಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಪಂದ್ಯ ಶುರುವಾಗಲಿದ್ದು, ಈ ಪಂದ್ಯಕ್ಕೆ ಲಂಕಾದ ಸಿಂಘಲೀಸ್ ಸ್ಪೋರ್ಟ್ಸ್ ಕ್ಲಬ್ ಕ್ರಿಕೆಟ್ ಮೈದಾನ ಆತಿಥ್ಯವಹಿಸಲಿದೆ. ಈ ಪಂದ್ಯಕ್ಕಾಗಿ ಆಯ್ಕೆಯಾದ ಅಫ್ಘಾನಿಸ್ತಾನ್ ಟೆಸ್ಟ್ ತಂಡ ಈ ಕೆಳಗಿನಂತಿದೆ…

ಅಫ್ಘಾನಿಸ್ತಾನ್ ಟೆಸ್ಟ್ ತಂಡ : ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಶಾ (ಉಪನಾಯಕ), ಇಕ್ರಮ್ ಅಲಿಖೈಲ್ (ವಿಕೆಟ್ ಕೀಪರ್), ಮೊಹಮ್ಮದ್ ಇಶಾಕ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ನೂರ್ ಅಲಿ ಝದ್ರಾನ್, ಅಬ್ದುಲ್ ಮಲಿಕ್, ಬಹೀರ್ ಶಾ, ನಾಸಿರ್ ಜಮಾಲ್, ಖೈಸ್ ಅಹ್ಮದ್, ಝಹೀರ್ ಖಾನ್, ಝಿಯಾ ಉರ್ ರೆಹಮಾನ್ ಅಕ್ಬರ್, ಯಾಮಿನ್ ಅಹ್ಮದ್ಝೈ, ನಿಝತ್ ಮಸೂದ್, ಮೊಹಮ್ಮದ್ ಸಲೀಮ್ ಸಫಿ ಮತ್ತು ನವೀದ್ ಝದ್ರಾನ್.

ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು