Afghanistan vs New Zealand: ಅಫ್ಘಾನ್ vs ನ್ಯೂಜಿಲೆಂಡ್, ಯಾರು ಬಲಿಷ್ಠ? ಇಲ್ಲಿ ಅಂಕಿ ಅಂಶಗಳೇ ಅಚ್ಚರಿ

T20 World Cup 2021: ಅಫ್ಘಾನ್ ತಂಡವು ರಶೀದ್ ಖಾನ್, ಮೊಹಮ್ಮದ್ ನಬಿ ಹಾಗೂ ಮುಜೀಬುರ್ ರೆಹಮಾನ್ ಅವರನ್ನು ಅವಲಂಭಿಸಿದ್ದು, ಇವರ ಸ್ಪಿನ್ ಮೋಡಿ ನಡೆದರೆ ನ್ಯೂಜಿಲೆಂಡ್ ತಂಡವನ್ನು ಕಡಿಮೆ ಮೊತ್ತಕ್ಕೆ ನಿಯಂತ್ರಿಸಬಹುದು.

Afghanistan vs New Zealand: ಅಫ್ಘಾನ್ vs ನ್ಯೂಜಿಲೆಂಡ್, ಯಾರು ಬಲಿಷ್ಠ? ಇಲ್ಲಿ ಅಂಕಿ ಅಂಶಗಳೇ ಅಚ್ಚರಿ
Afghanistan vs New Zealand
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 06, 2021 | 7:13 PM

ಐಸಿಸಿ ಟಿ20 ವಿಶ್ವಕಪ್​ನ 40ನೇ ಪಂದ್ಯವು ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಅಫ್ಘಾನಿಸ್ತಾನ್ ಮುಖಾಮುಖಿಯಾಗುತ್ತಿದ್ದರೂ, ಇದರ ಫಲಿತಾಂಶವನ್ನು ಎದುರು ನೋಡುತ್ತಿರುವುದು ಭಾರತ ತಂಡ ಎಂಬುದು ವಿಶೇಷ. ಅಂದರೆ ಅಫ್ಘಾನ್​ ವಿರುದ್ದ ನ್ಯೂಜಿಲೆಂಡ್ ಸೋತರೆ ಮಾತ್ರ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಹೀಗಾಗಿ ಭಾನುವಾರ ನಡೆಯಲಿರುವ ಈ ಪಂದ್ಯದವು ಇದೀಗ ಇಡೀ ಕ್ರಿಕೆಟ್ ಪ್ರೇಮಿಗಳ ಕೇಂದ್ರ ಬಿಂದುವಾಗಿದೆ.

ಇಲ್ಲಿ ಮತ್ತೊಂದು ಅಚ್ಚರಿಯ ಅಂಶವೆಂದರೆ ಇದುವರೆಗೆ ಉಭಯ ತಂಡಗಳು ಟಿ20 ಕ್ರಿಕೆಟ್​ನಲ್ಲಿ ಮುಖಾಮುಖಿಯಾಗಿಲ್ಲ ಎಂಬುದು. ಅಂದರೆ ಭಾನುವಾರ ಅಬುಧಾಬಿಯಲ್ಲಿ ನಡೆಯಲಿರುವ ಪಂದ್ಯದ ಮೂಲಕ ಎರಡೂ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದೆ. ಹೀಗಾಗಿ ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ ಎಂದು ನಿರ್ಧರಿಸಲಾಗುವುದಿಲ್ಲ.

ಇನ್ನು ನ್ಯೂಜಿಲೆಂಡ್ ಹಾಗೂ ಅಫ್ಘಾನಿಸ್ತಾನ್ ಈ ಮೊದಲು ಎರಡು ಪಂದ್ಯಗಳನ್ನಾಡಿದೆ. ಅದು ಕೂಡ ಏಕದಿನ ವಿಶ್ವಕಪ್​ನಲ್ಲಿ ಎಂಬುದು ವಿಶೇಷ. ಅಂದರೆ 2015 ರಲ್ಲಿ ಹಾಗೂ 2019 ರಲ್ಲಿ ಏಕದಿನ ವಿಶ್ವಕಪ್​ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿತ್ತು. ಈ ಎರಡೂ ಪಂದ್ಯಗಳಲ್ಲೂ ನ್ಯೂಜಿಲೆಂಡ್ ಗೆಲುವು ದಾಖಲಿಸಿತ್ತು. ಆದರೆ ಏಕದಿನ ಪಂದ್ಯಕ್ಕೂ ಟಿ20 ಕ್ರಿಕೆಟ್​ಗೂ ಅಜಗಜಾಂತರ ವ್ಯತ್ಯಾಸವಿದೆ. ಅದರಲ್ಲೂ ಚುಟುಕು ಕ್ರಿಕೆಟ್​ನಲ್ಲಿ ಅಫ್ಘಾನಿಸ್ತಾನ್ ಆಟಗಾರರು ಬಲಿಷ್ಠರು ಎಂದೇ ಹೇಳಬಹುದು.

ಅಫ್ಘಾನ್ ತಂಡವು ರಶೀದ್ ಖಾನ್, ಮೊಹಮ್ಮದ್ ನಬಿ ಹಾಗೂ ಮುಜೀಬುರ್ ರೆಹಮಾನ್ ಅವರನ್ನು ಅವಲಂಭಿಸಿದ್ದು, ಇವರ ಸ್ಪಿನ್ ಮೋಡಿ ನಡೆದರೆ ನ್ಯೂಜಿಲೆಂಡ್ ತಂಡವನ್ನು ಕಡಿಮೆ ಮೊತ್ತಕ್ಕೆ ನಿಯಂತ್ರಿಸಬಹುದು. ಅಷ್ಟೇ ಅಲ್ಲದೆ ಬ್ಯಾಟಿಂಗ್​ನಲ್ಲಿ ಝಝೈ, ನಜೀಬ್, ಶೆಹಝಾದ್ ಹಾಗೂ ನಬಿ ಎಂತಹ ಬೌಲರುಗಳನ್ನು ಎದುರಿಸುವ ಸಾಮರ್ಥ್ಯ ಹೊಂದಿರುವ ಆಟಗಾರರು. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ದ ನ್ಯೂಜಿಲೆಂಡ್​ಗೆ ಗೆಲುವು ಸುಲಭವಲ್ಲ ಎಂದೇ ಹೇಳಬಹುದು.

ಒಟ್ಟಿನಲ್ಲಿ ಇಲ್ಲಿ ನ್ಯೂಜಿಲೆಂಡ್ ತಂಡವೇ ಬಲಿಷ್ಠವಾಗಿದ್ದರೂ, ಯಾವುದೇ ಹಂತದಲ್ಲೂ ತಿರುಗಿ ಬೀಳುವ ಸಾಮರ್ಥ್ಯ ಅಫ್ಘಾನಿಸ್ತಾನ್ ತಂಡಕ್ಕಿದೆ. ಹೀಗಾಗಿ ಅಬುಧಾಬಿಯ ಶೇಖ್​ ಝಾಯೆದ್ ಸ್ಟೇಡಿಯಂನಲ್ಲಿ ಭಾನುವಾರ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: T20 World Cup 2021: ಸೆಹ್ವಾಗ್-ಗಂಭೀರ್ ದಾಖಲೆ ಮುರಿದ ಕೆಎಲ್ ರಾಹುಲ್-ರೋಹಿತ್ ಶರ್ಮಾ

(Afghanistan vs New Zealand Head to Head T20 Records)

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ