ಈ ದೇಶದ ವಿರುದ್ಧ ಇದೇ ಮೊದಲ ಬಾರಿಗೆ ಟಿ20 ಸರಣಿ ಆಡಲಿದೆ ಟೀಂ ಇಂಡಿಯಾ; ವೇಳಾಪಟ್ಟಿ ಪ್ರಕಟ

|

Updated on: Nov 22, 2023 | 7:32 AM

IND vs AFG: ಟೀಂ ಇಂಡಿಯಾ, ಜನವರಿಯಲ್ಲಿ ಅಂದರೆ 2024 ರ ಮೊದಲ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನದ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಈ ಬಗ್ಗೆ ಅಫ್ಘಾನಿಸ್ತಾನ ಕ್ರಿಕೆಟ್​ ಮಂಡಳಿ ಮಾಹಿತಿ ನೀಡಿದ್ದು, ಉಭಯ ತಂಡಗಳ ನಡುವೆ 3 ಪಂದ್ಯಗಳ ಟಿ20 ಸರಣಿ ನಡೆಯಲ್ಲಿದೆ. ಈ ಸರಣಿಗಾಗಿ ಅಫ್ಘಾನ್ ತಂಡ ಭಾರತಕ್ಕೆ ಬರಲಿದೆ.

ಈ ದೇಶದ ವಿರುದ್ಧ ಇದೇ ಮೊದಲ ಬಾರಿಗೆ ಟಿ20 ಸರಣಿ ಆಡಲಿದೆ ಟೀಂ ಇಂಡಿಯಾ; ವೇಳಾಪಟ್ಟಿ ಪ್ರಕಟ
ಟೀಂ ಇಂಡಿಯಾ
Follow us on

2023ರ ಏಕದಿನ ವಿಶ್ವಕಪ್ (ICC World Cup 2023) ಬಳಿಕ ಟೀಂ ಇಂಡಿಯಾ, ಆಸ್ಟ್ರೇಲಿಯಾ (India Vs Australia) ವಿರುದ್ಧ ಐದು ಪಂದ್ಯಗಳ ಟಿ20 ಸರಣಿ ಆಡಲು ಸಜ್ಜಾಗಿದೆ. ಈಗಾಗಲೇ ಈ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ತಂಡದ ಸಾರಥ್ಯವನ್ನು ಸೂರ್ಯಕುಮಾರ್ ಯಾದವ್​ಗೆ ನೀಡಲಾಗಿದೆ. ನವೆಂಬರ್ 23 ರಿಂದ ಈ ಟಿ20 ಸರಣಿ ಆರಂಭವಾಗಲಿದೆ. ಆ ಬಳಿಕ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿರುವ ಟೀಂ ಇಂಡಿಯಾ, ಜನವರಿಯಲ್ಲಿ ಅಂದರೆ 2024 ರ ಮೊದಲ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನದ (India Vs Afghanistan) ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಈ ಬಗ್ಗೆ ಅಫ್ಘಾನಿಸ್ತಾನ ಕ್ರಿಕೆಟ್​ ಮಂಡಳಿ ಮಾಹಿತಿ ನೀಡಿದ್ದು, ಉಭಯ ತಂಡಗಳ ನಡುವೆ 3 ಪಂದ್ಯಗಳ ಟಿ20 ಸರಣಿ ನಡೆಯಲ್ಲಿದೆ. ಈ ಸರಣಿಗಾಗಿ ಅಫ್ಘಾನ್ ತಂಡ ಭಾರತಕ್ಕೆ ಬರಲಿದೆ.

ಮೇಲೆ ಹೇಳಿದಂತೆ ಟೀಂ ಇಂಡಿಯಾ 2024ರ ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾ ಟಿ20 ಸರಣಿ ಆಡುತ್ತಿರುವುದು ಇದೇ ಮೊದಲು. ಈ ಸರಣಿಯ ವೇಳಾಪಟ್ಟಿ ಕೂಡ ಈಗ ಹೊರಬಿದ್ದಿದ್ದು, ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಅಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದೆ.

IND vs AUS ಟಿ20 ಸರಣಿಯಿಂದಲೂ ಔಟ್: ಚಹಲ್ ಟ್ವೀಟ್ ವೈರಲ್

ಪಂದ್ಯ ಎಷ್ಟು ಗಂಟೆಗೆ ಆರಂಭ

ಈ ಸರಣಿಯ ಮೂರು ಪಂದ್ಯಗಳು ಕ್ರಮವಾಗಿ ಮೊಹಾಲಿ, ಇಂದೋರ್ ಮತ್ತು ಬೆಂಗಳೂರಿನಲ್ಲಿ ನಡೆಯಲಿವೆ. ಮೊದಲ ಪಂದ್ಯ ಜನವರಿ 11 ರಂದು ನಡೆದರೆ, ಕೊನೆಯ ಪಂದ್ಯ ಜನವರಿ 17 ರಂದು ನಡೆಯಲಿದೆ. ಈ ಮೂರು ಪಂದ್ಯಗಳು ಮಧ್ಯಾಹ್ನ 1.30ಕ್ಕೆ ಆರಂಭವಾಗಲಿವೆ. ಇಲ್ಲಿಯವರೆಗೆ ಟೀಂ ಇಂಡಿಯಾ ಮತ್ತು ಅಫ್ಘಾನಿಸ್ತಾನ ವಿಶ್ವಕಪ್ ಮತ್ತು ಏಷ್ಯಾಕಪ್‌ನಲ್ಲಿ ಮುಖಾಮುಖಿಯಾಗಿವೆ. ಹಾಗೆಯೇ ಎರಡೂ ತಂಡಗಳ ನಡುವೆ ಒಂದು ಟೆಸ್ಟ್ ಪಂದ್ಯ ಕೂಡ ನಡೆದಿದೆ. ಆದರೆ ಇದು ಮೊದಲ ಬಾರಿಗೆ ಉಭಯ ತಂಡಗಳು ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿವೆ.

ಭಾರತ-ಅಫ್ಘಾನಿಸ್ತಾನ ಮುಖಾಮುಖಿ ವರದಿ

ಏತನ್ಮಧ್ಯೆ, ಟೀಂ ಇಂಡಿಯಾ ಮತ್ತು ಅಫ್ಘಾನಿಸ್ತಾನ ನಡುವೆ ಇದುವರೆಗೆ 4 ಏಕದಿನ ಪಂದ್ಯಗಳು ನಡೆದಿವೆ. ಇದರಲ್ಲಿ ಅಫ್ಘಾನಿಸ್ತಾನದ ಮೇಲೆ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಟೀಂ ಇಂಡಿಯಾ ಆಡಿರುವ 4 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ 1 ಪಂದ್ಯ ಟೈ ಆಗಿದೆ. ಹಾಗೆಯೇ ಇದುವರೆಗೆ ಆಡಿರುವ 5 ಟಿ20 ಪಂದ್ಯಗಳ ಪೈಕಿ ಟೀಂ ಇಂಡಿಯಾ 4 ಪಂದ್ಯಗಳನ್ನು ಗೆದ್ದಿದ್ದರೆ, 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಇದರರ್ಥ ಟೀಂ ಇಂಡಿಯಾ ವಿರುದ್ಧ ಅಫ್ಘಾನಿಸ್ತಾನ ಒಂದು ಪಂದ್ಯವನ್ನು ಗೆದ್ದಿಲ್ಲ. ಆದರೆ 2023ರ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ಅದ್ಭುತ ಪ್ರದರ್ಶನ ನೀಡಿದೆ. ಹೀಗಾಗಿ ಮುಂಬರುವ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಹಾಗೂ ಅಫ್ಘಾನಿಸ್ತಾನ ನಡುವೆ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಬಹುದಾಗಿದೆ.

ಟಿ20 ಸರಣಿ ವೇಳಾಪಟ್ಟಿ

  • ಮೊದಲ ಪಂದ್ಯ, ಜನವರಿ 11, ಮೊಹಾಲಿ.
  • ಎರಡನೇ ಪಂದ್ಯ, ಜನವರಿ 14, ಇಂದೋರ್.
  • ಮೂರನೇ ಪಂದ್ಯ, ಜನವರಿ 17, ಬೆಂಗಳೂರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:28 am, Wed, 22 November 23