AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ನಾಯಕನನ್ನು ಬದಲಿಸಿ ಹೊಸ ದಾಖಲೆ ಬರೆದ ಟೀಮ್ ಇಂಡಿಯಾ..!

Team India: ಈ ವರ್ಷ ಟೀಮ್ ಇಂಡಿಯಾ ಪರ ನಾಯಕರಾಗಿ ರೋಹಿತ್ ಶರ್ಮಾ, ಕೆಎಲ್ ರಾಹುಲ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಪಾದಾರ್ಪಣೆ ಮಾಡಿದ್ದಾರೆ.

Team India: ನಾಯಕನನ್ನು ಬದಲಿಸಿ ಹೊಸ ದಾಖಲೆ ಬರೆದ ಟೀಮ್ ಇಂಡಿಯಾ..!
Team India
TV9 Web
| Updated By: ಝಾಹಿರ್ ಯೂಸುಫ್|

Updated on: Jul 07, 2022 | 11:30 AM

Share

ಬಿಸಿಸಿಐ 6 ಆರು ತಿಂಗಳಲ್ಲಿ 6 ನಾಯಕರಗಳನ್ನು ಕಣಕ್ಕಿಳಿಸಿದೆ. ಅಂದರೆ ಟೀಮ್ ಇಂಡಿಯಾ (Team India) ಪರ ಒಂದೇ ವರ್ಷದಲ್ಲಿ ಆರು ನಾಯಕರುಗಳು ಕಾಣಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿಯ (Virat Kohli) ನಾಯಕತ್ವದ ರಾಜೀನಾಮೆಯ ಬಳಿಕ ಶುರುವಾದ ಈ ಪರ್ವ ಸದ್ಯಕ್ಕಂತು ನಿಲ್ಲುವಂತೆ ಕಾಣುತ್ತಿಲ್ಲ. ಏಕೆಂದರೆ ವೆಸ್ಟ್ ಇಂಡೀಸ್ ಏಕದಿನ​ ಸರಣಿಗಾಗಿ ಆಯ್ಕೆ ಮಾಡಲಾದ ತಂಡದಿಂದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ವಿಂಡೀಸ್ ವಿರುದ್ದ ಟಿ20 ಸರಣಿ ಕೂಡ ಆಡಬೇಕಿದೆ. ಈ ಸರಣಿಗಾಗಿ ಮತ್ತೊಬ್ಬ ನಾಯಕನನ್ನು ಆಯ್ಕೆ ಮಾಡಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಏಕದಿನ ಸರಣಿಯಿಂದ ಹೊರಗುಳಿದಿರುವ ಆಟಗಾರರು ಟಿ20 ಸರಣಿಯಲ್ಲೂ ಕಾಣಿಸಿಕೊಳ್ಳುವುದು ಅನುಮಾನ. ಹೀಗಾಗಿ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಪರ ಮತ್ತೋರ್ವ ನಾಯಕ ಕೂಡ ಪಾದರ್ಪಣೆ ಮಾಡಿದರೂ ಅಚ್ಚರಿಪಡಬೇಕಿಲ್ಲ.

ವಿಶೇಷ ಎಂದರೆ ಒಂದೇ ವರ್ಷದೊಳಗೆ 6 ನಾಯಕರಗಳನ್ನು ಕಣಕ್ಕಿಳಿಸುವ ಮೂಲಕ ಟೀಮ್ ಇಂಡಿಯಾ ಹೊಸ ದಾಖಲೆಯೊಂದನ್ನು ಬರೆದಿದೆ. ಅಂದರೆ ಈ ಹಿಂದೆ ಕೂಡ ಇಂತಹದೊಂದು ಪರ್ವ ಟೀಮ್ ಇಂಡಿಯಾದಲ್ಲಿ ಕಂಡು ಬಂದಿತ್ತು. ಅದು 63 ವರ್ಷಗಳ ಹಿಂದೆ ಎಂಬುದು ವಿಶೇಷ.

1959 ರಲ್ಲಿಯೂ ಭಾರತ ಟೆಸ್ಟ್​ ತಂಡವನ್ನು 5 ಆಟಗಾರರು ಮುನ್ನಡೆಸಿದ್ದರು. ಅಂದು ಟೀಮ್ ಇಂಡಿಯಾದ ನಾಯಕರಾಗಿ ಹೇಮು ಅಧಿಕಾರಿ, ದತ್ತಾ ಗಾಯಕ್ವಾಡ್, ವಿನೂ ಮಂಕಡ್, ಗುಲಾಬ್ರೈ ರಾಮಚಂದ್ ಮತ್ತು ಪಂಕಜ್ ರಾಯ್ ಕಾಣಿಸಿಕೊಂಡಿದ್ದರು. ಇದೀಗ 63 ವರ್ಷಗಳ ಬಳಿಕ ಟೀಮ್ ಇಂಡಿಯಾವನ್ನು ಒಂದೇ ವರ್ಷದಲ್ಲಿ 6 ನಾಯಕರುಗಳು ಮುನ್ನಡೆಸುತ್ತಿರುವುದು ವಿಶೇಷ.

ಇದನ್ನೂ ಓದಿ
Image
IND vs ENG: ಟೀಮ್ ಇಂಡಿಯಾ ಆಟಗಾರರು ವಿಶೇಷ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದು ಯಾಕೆ ಗೊತ್ತಾ?
Image
6,6,6,6,6: ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆ: ಟಿ20 ಬ್ಲಾಸ್ಟ್​ನಲ್ಲಿ ಹೊಸ ದಾಖಲೆ
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!
Image
Test Cricket Records: ಟೆಸ್ಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ್ದು ಯಾರು ಗೊತ್ತಾ?

ಈ ವರ್ಷ ಟೀಮ್ ಇಂಡಿಯಾ ಪರ ನಾಯಕರಾಗಿ ರೋಹಿತ್ ಶರ್ಮಾ, ಕೆಎಲ್ ರಾಹುಲ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಪಾದಾರ್ಪಣೆ ಮಾಡಿದ್ದಾರೆ. ಅಲ್ಲದೆ ವೆಸ್ಟ್ ಇಂಡೀಸ್​ ಸರಣಿಯಲ್ಲಿ ಶಿಖರ್ ಧವನ್ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರೊಂದಿಗೆ ಒಂದೇ ವರ್ಷದಲ್ಲಿ ಟೀಮ್ ಇಂಡಿಯಾವನ್ನು 6 ನಾಯಕರುಗಳು ಮುನ್ನಡೆಸಿದಂತಾಗಲಿದೆ.

ಹಾಗೆಯೇ ಈ ಸಲ ಟೀಮ್ ಇಂಡಿಯಾದ ಉಪನಾಯಕರಾಗಿ ಭುವನೇಶ್ವರ್ ಕುಮಾರ್, ಕೆಎಲ್​ ರಾಹುಲ್, ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ ಕೂಡ ಪಾದರ್ಪಣೆ ಮಾಡಿದ್ದಾರೆ. ಇನ್ನು ವೆಸ್ಟ್ ಇಂಡೀಸ್​ ಸರಣಿಯಲ್ಲಿ ರವೀಂದ್ರ ಜಡೇಜಾ ಉಪನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

ಒಟ್ಟಿನಲ್ಲಿ ಒಂದೇ ವರ್ಷದಲ್ಲಿ 6 ನಾಯಕರನ್ನು ಮತ್ತು 6 ಉಪನಾಯಕರನ್ನು ಕಣಕ್ಕಿಳಿಸುವ ಮೂಲಕ ಬಿಸಿಸಿಐ ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿರುವುದು ವಿಶೇಷ.

ವೆಸ್ಟ್ ಇಂಡೀಸ್ ಏಕದಿನ ಸರಣಿಗೆ ಟೀಮ್ ಇಂಡಿಯಾ ಹೀಗಿದೆ: ಶಿಖರ್ ಧವನ್ (ನಾಯಕ), ರವೀಂದ್ರ ಜಡೇಜಾ (ಉಪನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ ಮತ್ತು ಅರ್ಷದೀಪ್ ಸಿಂಗ್.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ