Virat Kohli: ಮಡದಿ, ಮಗಳೊಂದಿಗೆ ರಜೆ ಮುಗಿಸಿ ಬಂದ ಕೊಹ್ಲಿ ಸೀದಾ ಹೋಗಿದ್ದು ಆಸ್ಪತ್ರೆಗೆ..! ಕಾರಣವೇನು?

Virat Kohli: ಐಪಿಎಲ್ 2022 ರಲ್ಲಿ ವಿರಾಟ್ ಕೊಹ್ಲಿ ಅವರ ಪ್ರದರ್ಶನ ಉತ್ತಮವಾಗಿಲ್ಲ. ಪಂದ್ಯಾವಳಿಯುದ್ದಕ್ಕೂ ಅವರ ಕಳಪೆ ಫಾರ್ಮ್ ಮುಂದುವರೆಯಿತು. ಆದರೆ, ಈ ಟೆನ್ಷನ್ ನಂತರ ವಿರಾಟ್ ಕೊಹ್ಲಿ ವಿಶ್ರಾಂತಿಗಾಗಿ ರಜೆಯ ಮೇಲೆ ತೆರಳಿದ್ದರು.

Virat Kohli: ಮಡದಿ, ಮಗಳೊಂದಿಗೆ ರಜೆ ಮುಗಿಸಿ ಬಂದ ಕೊಹ್ಲಿ ಸೀದಾ ಹೋಗಿದ್ದು ಆಸ್ಪತ್ರೆಗೆ..! ಕಾರಣವೇನು?
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ
Follow us
TV9 Web
| Updated By: ಪೃಥ್ವಿಶಂಕರ

Updated on:Jun 15, 2022 | 2:57 PM

ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್‌ಮನ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಶೀಘ್ರದಲ್ಲೇ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದಾರೆ. ಆದರೆ ಅದಕ್ಕೂ ಮೊದಲು ಕಿಂಗ್ ಕೊಹ್ಲಿ ಟೀಂ ಇಂಡಿಯಾದಿಂದ ರಜೆ ಪಡೆದಿದ್ದು ಕುಟುಂಬದೊಂದಿಗೆ ಮೋಜು ಮಸ್ತಿಯಲ್ಲಿ ತೊಡಗಿದ್ದರು. ಪತ್ನಿ ಅನುಷ್ಕಾ ಹಾಗೂ ಮಗಳು ವಾಮಿಕಾ (wife Anushka and daughter Vamika) ಜೊತೆ ವಿರಾಟ್ ವಿದೇಶಿ ಪ್ರಯಾಣ ಬೆಳೆಸಿದ್ದರು. ಇದೀಗ ವಿರಾಟ್ ಕೊಹ್ಲಿ ರಿಫ್ರೆಶ್ ಆಗಿ ವಾಪಸ್ ಬಂದಿದ್ದಾರೆ ಆದರೆ ಮುಂಬೈಗೆ ಹಿಂತಿರುಗಿದ ತಕ್ಷಣ ಅವರು ಸೀದಾ ಮನೆಗೆ ಹೋಗದೆ, ಆಸ್ಪತ್ರೆಗೆ ಹೋಗುತ್ತಿರುವುದು ಕಂಡುಬಂತು. ವಿರಾಟ್ ಕೊಹ್ಲಿ ಸೋಮವಾರ ಪತ್ನಿ ಅನುಷ್ಕಾ ಶರ್ಮಾ ಜೊತೆ ಆಸ್ಪತ್ರೆಗೆ ತೆರಳಿದ್ದರು. ಇದಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ವಿರಾಟ್ ಕೊಹ್ಲಿ ಆಸ್ಪತ್ರೆಗೆ ಹೋಗುತ್ತಿರುವ ಫೋಟೋ ಮತ್ತು ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಐಪಿಎಲ್ ನಂತರ ಕೊಹ್ಲಿಗೆ ಹೆಚ್ಚು ವಿಶ್ರಾಂತಿ

ಇದನ್ನೂ ಓದಿ
Image
ICC Rankings: ಕೊಹ್ಲಿಯನ್ನು ಹಿಂದಿಕ್ಕಿದ ಪಾಕ್ ಕ್ರಿಕೆಟಿಗ! ಆಲ್​ರೌಂಡರ್ ಕೋಟಾದಲ್ಲಿ ಜಡೇಜಾ ನಂ.1
Image
Ishan Kishan: ಕೆಣಕಿದ ಶಮ್ಸಿಗೆ ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ನೀಡಿದ ಇಶಾನ್ ಕಿಶನ್

ಐಪಿಎಲ್ 2022 ರಲ್ಲಿ ವಿರಾಟ್ ಕೊಹ್ಲಿ ಅವರ ಪ್ರದರ್ಶನ ಉತ್ತಮವಾಗಿಲ್ಲ. ಪಂದ್ಯಾವಳಿಯುದ್ದಕ್ಕೂ ಅವರ ಕಳಪೆ ಫಾರ್ಮ್ ಮುಂದುವರೆಯಿತು. ಆದರೆ, ಈ ಟೆನ್ಷನ್ ನಂತರ ವಿರಾಟ್ ಕೊಹ್ಲಿ ವಿಶ್ರಾಂತಿಗಾಗಿ ರಜೆಯ ಮೇಲೆ ತೆರಳಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ವಿರಾಟ್ ಕೊಹ್ಲಿ ರಜೆಯಲ್ಲಿ ಕುಟುಂಬದೊಂದಿಗೆ ಸಮಯ ಕಳೆದರು. ಕುಟುಂಬದೊಂದಿಗಿನ ಮೋಜು ಮಸ್ತಿಯ ಫೋಟೋಗಳನ್ನು ಕೊಹ್ಲಿ ಹಾಗೂ ಮಡದಿ ಅನುಷ್ಕಾ ತಮ್ಮ ಸೋಶಿಯಲ್ ಅಕೌಂಟ್​ನಲ್ಲಿ ಹರಿಬಿಟ್ಟಿದ್ದರು. ಕೊಹ್ಲಿ ತಮ್ಮ ಶರ್ಟ್ ಇಲ್ಲದ ಫೋಟೋವನ್ನು ಹಂಚಿಕೊಂಡಿದ್ದರೆ ಅವರ ಪತ್ನಿ ಅನುಷ್ಕಾ ಕೂಡ ಬಿಕಿನಿಯಲ್ಲಿರುವ ಫೋಟೋವನ್ನು ಹಂಚಿಕೊಂಡಿದ್ದರು.

ಕೊಹ್ಲಿಗೆ ಅಗ್ನಿ ಪರೀಕ್ಷೆ

ಕೊಹ್ಲಿಯ ರಜಾ ಮುಗಿದು ಇದೀಗ ಅವರ ಮುಂದೆ ದೊಡ್ಡ ಸವಾಲು ಎದುರಾಗಿದೆ. ಭಾರತ ತಂಡ ಗುರುವಾರ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದು, ಅಲ್ಲಿ ಒಂದು ಟೆಸ್ಟ್, 3 ಏಕದಿನ ಮತ್ತು 3 ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ, ಅಪೂರ್ಣ ಟೆಸ್ಟ್ ಸರಣಿಯ 4 ಟೆಸ್ಟ್‌ಗಳಲ್ಲಿ 2 ರಲ್ಲಿ ಟೀಂ ಇಂಡಿಯಾ ಗೆದ್ದಿದೆ ಮತ್ತು ತಂಡವು ಒಂದು ಟೆಸ್ಟ್‌ನಲ್ಲಿ ಸೋತಿದೆ. ಇದೀಗ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಟಗಾರನಾಗಿ ಮೈದಾನಕ್ಕಿಳಿಯಲಿದ್ದು, ಈ ಪಂದ್ಯದಲ್ಲಿ ರನ್ ಗಳಿಸುವ ಮೂಲಕ ಲಯಕ್ಕೆ ಮರಳುವುದು ಅವರ ಗುರಿಯಾಗಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ವಿರಾಟ್ ಕೊಹ್ಲಿ ಬ್ಯಾಟ್ ಸದ್ದು ಮಾಡಲಿಲ್ಲ. ವಿರಾಟ್ 7 ಇನ್ನಿಂಗ್ಸ್‌ಗಳಲ್ಲಿ 31.14 ಸರಾಸರಿಯಲ್ಲಿ 218 ರನ್ ಗಳಿಸಿದರು. ಈ ಸಮಯದಲ್ಲಿ ಅವರು ತಮ್ಮ ಬ್ಯಾಟ್‌ನಿಂದ 2 ಅರ್ಧ ಶತಕಗಳನ್ನು ಬಾರಿಸಿ, ಒಮ್ಮೆ ಅವರು ಶೂನ್ಯಕ್ಕೆ ಔಟಾಗಿದ್ದರು. ಆ ಸರಣಿಯಲ್ಲಿ, ರೋಹಿತ್ ಶರ್ಮಾ 50 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 368 ರನ್ ಗಳಿಸಿದ್ದಾರೆ. ಹೀಗಾಗಿ ಕೊನೆಯ ಟೆಸ್ಟ್‌ನಲ್ಲೂ ಅವರು ಮತ್ತು ವಿರಾಟ್ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್ ಯಾದವ್ ಮತ್ತು ಪ್ರಸಿದ್ಧ್ ಕೃಷ್ಣ.

Published On - 2:57 pm, Wed, 15 June 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ