AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Point Table: ಐಪಿಎಲ್ 2022 ಪಾಯಿಂಟ್ ಟೇಬಲ್ ಹೇಗಿದೆ?: ಪರ್ಪಲ್, ಆರೆಂಜ್ ಕ್ಯಾಪ್ ಯಾರ ಕೈಯಲ್ಲಿದೆ?

IPL 2022 Orange and Purple Cap List: ಸಾಕಷ್ಟು ರೋಚಕತೆ ಪಡೆಯುತ್ತಿರುವ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

IPL 2022 Point Table: ಐಪಿಎಲ್ 2022 ಪಾಯಿಂಟ್ ಟೇಬಲ್ ಹೇಗಿದೆ?: ಪರ್ಪಲ್, ಆರೆಂಜ್ ಕ್ಯಾಪ್ ಯಾರ ಕೈಯಲ್ಲಿದೆ?
IPL 2022
TV9 Web
| Edited By: |

Updated on:Apr 05, 2022 | 9:28 AM

Share

15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ಟೂರ್ನಿ ಇದೀಗ ರೋಚಕತೆ ಪಡೆಯುತ್ತಿದೆ. ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಈ ಬಾರಿ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಗೆಲುವಿಗಾಗಿ ಹಾತೊರೆಯುತ್ತಿದೆ. ಕಳೆದ ಬಾರಿಯ ವಿನ್ನರ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿದ ಮೂರೂ ಪಂದ್ಯಗಳಲ್ಲಿ ಸೋಲುಂಡು ಕಟ್ಟ ದಾಖಲೆ ಬರೆದಿದೆ. ಎರಡು ಹೊಸ ತಂಡಗಳಾದ ಲಖನೌ ಸೂಪರ್ ಜೇಂಟ್ಸ್ ಮತ್ತು ಗುಜರಾತ್ ಟೈಟನ್ಸ್ ಟೀಮ್ ಕೂಡ ನಿರೀಕ್ಷೆಗೆ ತಕ್ಕ ಆಟವಾಡುತ್ತಿದೆ. ಇಂದು ರಾಯಸ್ಥಾನ್ ರಾಯಲ್ಸ್ ಹಾಗೂ ಆರ್​ಸಿಬಿ ಮುಖಾಮುಖಿ ಆಗಲಿದೆ. ಲೀಗ್ ಪಂದ್ಯಗಳು ಮುಕ್ತಾಯಗೊಂಡ ಬಳಿಕ ಪಾಯಿಂಟ್ ಪಟ್ಟಿಯಲ್ಲಿರುವ ಮೊದಲ ನಾಲ್ಕು ತಂಡಗಳು ಟೂರ್ನಿಯ ಪ್ಲೇ-ಆಫ್‌ನಲ್ಲಿ ಆಡುವ ಅವಕಾಶವನ್ನು ಪಡೆಯುತ್ತವೆ. ಅದರ ನಂತರ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯ ಇರುತ್ತದೆ. ವಿಜೇತ ತಂಡವು ಪ್ರತಿ ಪಂದ್ಯದಲ್ಲಿ 2 ಅಂಕಗಳನ್ನು ಪಡೆಯುತ್ತದೆ. ಇದರ ಜೊತೆಗೆ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಪಾಯಿಂಟ್ ಟೇಬಲ್:

  1. ಎರಡನೇ ಸ್ಥಾನದಲ್ಲಿದ್ದ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಅಮೋಘ ಗೆಲುವಿನ ಬಳಿಕ ಇದೀಗ ನಂಬರ್ ಒನ್ ಸ್ಥಾನಕ್ಕೇರಿದೆ. ಆಡಿದ ಎರಡು ಪಂದ್ಯಗಳ ಪೈಕಿ ಎರಡರಲ್ಲೂ ಗೆಲುವು ಸಾಧಿಸಿ ಒಟ್ಟು 4 ಅಂಕದೊಂದಿಗೆ +2.100 ರನ್​​ರೇಟ್​ನೊಂದಿಗೆ ಟಾಪ್​ನಲ್ಲಿದೆ.
  2. ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎರಡನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಗೆಲುವು, ಒಂದರಲ್ಲಿ ಸೋಲು ಕಂಡು ಒಟ್ಟು 4 ಅಂಕದೊಂದಿಗೆ +0.843 ರನ್​​ರೇಟ್​ನೊಂದಿಗೆ ಟಾಪ್​ನಲ್ಲಿದೆ.
  3. ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಪಾಯಿಂಟ್ ಪಟ್ಟಿಯಲ್ಲಿ ಮೇಲಕ್ಕೇರಿ ನಾಲ್ಕನೇ ಸ್ಥಾನದಲ್ಲಿದೆ. ಆಡಿದ ಎರಡು ಪಂದ್ಯದಲ್ಲಿ ಎರಡರಲ್ಲೂ ಗೆದ್ದು ಬೀಗಿದೆ. ಗುಜರಾತ್ ನಿವ್ವಳ ರನ್ ರೇಟ್ +0.495.
  4. ಸಿಎಸ್​​ಕೆ ವಿರುದ್ಧದ ಗೆಲುವಿನ ಬಳಿಕ ಏಳನೇ ಸ್ಥಾನದಲ್ಲಿದ್ದ ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಪಂಜಾಬ್ ನಿವ್ವಳ ರನ್ ರೇಟ್ 0.238 ಆಗಿದೆ.
  5. ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡ ಹೈದರಾಬಾದ್ ವಿರುದ್ಧದ ಗೆಲುವಿನ ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಒಂದು ಸ್ಥಾನ ಮೇಲಕ್ಕೇರಿದೆ. ಒಟ್ಟು 4 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ -0.0193.
  6. ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಲೀಗ್ ಪಟ್ಟಿಯಲ್ಲಿ ಐದನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಕುಸಿದಿದೆ. ಡೆಲ್ಲಿಯ ನಿವ್ವಳ ರನ್ ರೇಟ್ +0.65 ಆಗಿದೆ.
  7. ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಳನೇ ಸ್ಥಾನದಲ್ಲಿದೆ. ಎರಡು ಅಂಕದೊಂದಿಗೆ RCB ನಿವ್ವಳ ರನ್ ರೇಟ್ -0.048.
  8. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಆಡಿದ ಎರಡೂ ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ನಿವ್ವಳ ರನ್ ರೇಟ್ -1.029.
  9. ಇತ್ತ ಆಡಿದ ಮೂರೂ ಪಂದ್ಯಗಳಲ್ಲಿ ಸೋಲು ಕಂಡು ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ -1.251 ರನ್​ರೇಟ್​​ನೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ.
  10. ಕೆನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ಸದ್ಯಕ್ಕೆ ಲೀಗ್ ಟೇಬಲ್‌ನಲ್ಲಿ ಕೊನೆಯ ಸ್ಥಾನದಲ್ಲಿದೆ. ಆಡಿದ ಎರಡೂ ಪಂದ್ಯದಲ್ಲಿ ಸೋಲುಂಡಿರುವ ಹೈದರಾಬಾದ್ ನಿವ್ವಳ ರನ್ ರೇಟ್ – 1.825.

ಆರೆಂಜ್ ಕ್ಯಾಪ್:

ಆಡಿದ ಎರಡೂ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ತೋರಿರುವ ಮುಂಬೈ ಇಂಡಿಯನ್ಸ್ ಬ್ಯಾಟರ್ ಇಶಾನ್ ಕಿಶನ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಒಟ್ಟು 135 ರನ್ ಸಿಡಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಆಕರ್ಷಕ ಶತಕ ಸಿಡಿಸಿದ ಜೋಸ್ ಬಟ್ಲರ್ ಇದ್ದು ಇವರು ಕೂಡ 2 ಪಂದ್ಯಗಳಿಂದ 135 ರನ್ ಕಲೆಹಾಕಿದ್ದಾರೆ. ಮೂರನೇ ಸ್ಥಾನದಲ್ಲಿ ಲಖನೌ ತಂಡದ ದೀಪಕ್ ಹೂಡ ಅವರಿದ್ದು 119 ರನ್ ಗಳಿಸಿದ್ದಾರೆ. ಸಿಎಸ್​ಕೆ ತಂಡದ ಶಿವಂ ದುಬೆ 109 ರನ್ ಬಾರಿಸಿ 4ನೇ ಸ್ಥಾನದಲ್ಲಿದ್ದರೆ, ಕೆಎಲ್ ರಾಹುಲ್ 108 ರನ್​ನೊಂದಿಗೆ ಐದನೇ ಸ್ಥಾನಕ್ಕೇರಿದ್ದಾರೆ.

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಉಮೇಶ್ ಯಾದವ್ ಅಗ್ರಸ್ಥಾನದಲ್ಲಿ ಭದ್ರವಾಗಿದ್ದಾರೆ. ಆಡಿದ ಮೂರು ಪಂದ್ಯಗಳಲ್ಲಿ ಇವರು ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 8 ವಿಕೆಟ್ ಕಬಳಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಲಖನೌ ತಂಡದ ಆವೇಶ್ ಖಾನ್ ಅವರಿದ್ದು 3 ಪಂದ್ಯಗಳಿಂದ 7 ವಿಕೆಟ್ ಕಿತ್ತಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ರಾಹುಲ್ ಚಹಾರ್ ಮೂರನೇ ಸ್ಥಾನದಲ್ಲಿದ್ದು ಮೂರು ಪಂದ್ಯಗಳಿಂದ 6 ವಿಕೆಟ್ ಕಬಳಿಸಿದ್ದಾರೆ. ರಾಜಸ್ಥಾನ್ ತಂಡದ ಯುಜ್ವೇಂದ್ರ ಚಹಲ್ 5 ವಿಕೆಟ್ ಪಡೆದು ನಾಲ್ಕನೇ ಸ್ಥಾನದಲ್ಲಿದ್ದಾರೆ. ಇವರ ಜೊತೆಗೆ ಮೊಹಮ್ಮದ್ ಶಮಿ ಕೂಡ ಐದನೇ ನಂತರದ ಸ್ಥಾನದಲ್ಲಿದ್ದಾರೆ.

RR vs RCB, IPL 2022: ರಾಜಸ್ಥಾನ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ಮಾಡಿದ ಆರ್​ಸಿಬಿ: ಏನದು?

SRH vs LSG, IPL 2022: ಹೈದರಾಬಾದ್​ಗೆ ಎರಡನೇ ಸೋಲು: ರಾಹುಲ್ ಬಳಗಕ್ಕೆ ಎರಡನೇ ಗೆಲುವು

Published On - 9:27 am, Tue, 5 April 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?