ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಕ್ರೌರ್ಯ; ಪಾಕ್ ಪ್ರವಾಸಕ್ಕೆ ಹಿಂದೇಟು ಹಾಕುತ್ತಿದ್ದಾರೆ ನ್ಯೂಜಿಲೆಂಡ್, ಇಂಗ್ಲೆಂಡ್ ಕ್ರಿಕೆಟಿಗರು

ಅಫ್ಘಾನಿಸ್ತಾನದ ಪರಿಸ್ಥಿತಿಯಿಂದಾಗಿ, ಕೆಲವು ನ್ಯೂಜಿಲ್ಯಾಂಡ್ ಕ್ರಿಕೆಟಿಗರು ಪಾಕಿಸ್ತಾನ ಪ್ರವಾಸಕ್ಕೆ ಹಿಂದೇಟು ಹಾಕಿರುವುದಾಗಿ ವರದಿಯಾಗಿದೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಕ್ರೌರ್ಯ; ಪಾಕ್ ಪ್ರವಾಸಕ್ಕೆ ಹಿಂದೇಟು ಹಾಕುತ್ತಿದ್ದಾರೆ ನ್ಯೂಜಿಲೆಂಡ್, ಇಂಗ್ಲೆಂಡ್ ಕ್ರಿಕೆಟಿಗರು
ಪಾಕಿಸ್ತಾನ ಕ್ರಿಕೆಟ್ ಮಂಡಳಿ
Follow us
TV9 Web
| Updated By: ಪೃಥ್ವಿಶಂಕರ

Updated on: Aug 21, 2021 | 5:44 PM

ತಾಲಿಬಾನ್ ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸಿದ ನಂತರ ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ವಿಶ್ವದ ಗಮನ ಅಫ್ಘಾನಿಸ್ತಾನದ ಮೇಲೆ ಕೇಂದ್ರೀಕೃತವಾಗಿದ್ದರೂ, ಇದೆಲ್ಲವೂ ಅಫ್ಘಾನಿಸ್ತಾನದ ನೆರೆಯ ಪಾಕಿಸ್ತಾನದ ಮೇಲೂ ಪರಿಣಾಮ ಬೀರಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಇವೆಲ್ಲವುಗಳಿಂದ ತೊಂದರೆಗೆ ಒಳಗಾಗಿದೆ ಮತ್ತು ಮುಂಬರುವ ಪ್ರಮುಖ ತಂಡಗಳಾದ ನ್ಯೂಜಿಲ್ಯಾಂಡ್ ಮತ್ತು ಇಂಗ್ಲೆಂಡ್ ಪಾಕಿಸ್ತಾನಕ್ಕೆ ಪ್ರವಾಸವನ್ನು ಪ್ರಶ್ನಿಸಲಾಗಿದೆ. ಅಫ್ಘಾನಿಸ್ತಾನದ ಪರಿಸ್ಥಿತಿಯಿಂದಾಗಿ, ಕೆಲವು ನ್ಯೂಜಿಲ್ಯಾಂಡ್ ಕ್ರಿಕೆಟಿಗರು ಪಾಕಿಸ್ತಾನ ಪ್ರವಾಸಕ್ಕೆ ಹಿಂದೇಟು ಹಾಕಿರುವುದಾಗಿ ವರದಿಯಾಗಿದೆ. ಏತನ್ಮಧ್ಯೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಅಧ್ಯಕ್ಷ ಎಹ್ಸಾನ್ ಮಣಿ ಅವರು ನ್ಯೂಜಿಲ್ಯಾಂಡ್ ಮತ್ತು ಇಂಗ್ಲೆಂಡ್ ತಂಡಗಳು ಪಾಕಿಸ್ತಾನ ಪ್ರವಾಸಕ್ಕೆ ಖಂಡಿತವಾಗಿಯೂ ಬರುತ್ತವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಎಹ್ಸಾನ್ ಮಣಿ, ನ್ಯೂಜಿಲ್ಯಾಂಡ್ ಸೆಪ್ಟೆಂಬರ್‌ನಲ್ಲಿ ಮತ್ತು ಅಕ್ಟೋಬರ್‌ನಲ್ಲಿ ಇಂಗ್ಲೆಂಡ್ ತಂಡಗಳು ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿವೆ. ಪಾಕಿಸ್ತಾನವು ಎರಡೂ ಪ್ರವಾಸಗಳಿಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತದೆ ಮತ್ತು ಈ ಬಾರಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದಿದ್ದಾರೆ.

ಪಾಕಿಸ್ತಾನದ ನ್ಯೂಜಿಲೆಂಡ್ ಪ್ರವಾಸ ನ್ಯೂಜಿಲೆಂಡ್ ತಂಡ ಸೆಪ್ಟೆಂಬರ್ 11 ರಂದು ಪಾಕಿಸ್ತಾನಕ್ಕೆ ಆಗಮಿಸಲಿದ್ದು, ಈ ಪ್ರವಾಸದಲ್ಲಿ 3 ಏಕದಿನ ಪಂದ್ಯಗಳು ಮತ್ತು 5 ಟಿ 20 ಪಂದ್ಯಗಳು ನಡೆಯಲಿವೆ. ಈ ಎಲ್ಲಾ ಪಂದ್ಯಗಳು ರಾವಲ್ಪಿಂಡಿ ಮತ್ತು ಲಾಹೋರ್ ಮೈದಾನದಲ್ಲಿ ಅಕ್ಟೋಬರ್ 3 ರವರೆಗೆ ನಡೆಯಲಿವೆ. 19 ವರ್ಷಗಳ ನಂತರ ಮೊದಲ ಬಾರಿಗೆ ನ್ಯೂಜಿಲೆಂಡ್ ತಂಡ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ.

ನ್ಯೂಜಿಲೆಂಡ್ ನಂತರ, ಇಂಗ್ಲೆಂಡ್ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ ನ್ಯೂಜಿಲೆಂಡ್ ಪ್ರವಾಸದ ನಂತರ ಇಂಗ್ಲೆಂಡ್ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ಆಗಮಿಸಲಿದೆ. ಇಂಗ್ಲೆಂಡ್ ನ ಪುರುಷರ ಮತ್ತು ಮಹಿಳೆಯರ ತಂಡಗಳು ಈ ಬಾರಿ ಪ್ರವಾಸದಲ್ಲಿರುತ್ತವೆ. ಈ ಬಾರಿ ಪುರುಷರ ತಂಡ 2 ಟಿ 20 ಸರಣಿಯನ್ನು ಆಡಲಿದೆ. 2005 ರ ನಂತರ ಇದು ಇಂಗ್ಲೆಂಡ್‌ನ ಮೊದಲ ಪಾಕಿಸ್ತಾನದ ಪ್ರವಾಸವಾಗಿದೆ.

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ