Breaking: ಏಷ್ಯಾಕಪ್​ಗೆ ಕೊರೊನಾಂತಕ; ಲಂಕಾ ತಂಡದ ಇಬ್ಬರು ಸ್ಟಾರ್ ಆಟಗಾರರಿಗೆ ಕೊರೊನಾ ಸೋಂಕು..!

Asia Cup 2023: ಏಷ್ಯಾಕಪ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ, ಈ ಕಾಂಟಿನೆಂಟಲ್ ಟೂರ್ನಿಗೆ ಕೊರೊನಾದ ಕರಿ ಛಾಯೆ ಆವರಿಸಿದೆ. ಈ ಬಾರಿಯ ಏಷ್ಯಾಕಪ್​ಗೆ ಜಂಟಿಯಾಗಿ ಆತಿಥ್ಯವಹಿಸುತ್ತಿರುವ ಹಾಲಿ ಏಷ್ಯಾಕಪ್ ಚಾಂಪಿಯನ್ ಶ್ರೀಲಂಕಾ ತಂಡದ ಇಬ್ಬರು ಪ್ರಮುಖ ಆಟಗಾರರ ಈ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

Breaking: ಏಷ್ಯಾಕಪ್​ಗೆ ಕೊರೊನಾಂತಕ; ಲಂಕಾ ತಂಡದ ಇಬ್ಬರು ಸ್ಟಾರ್ ಆಟಗಾರರಿಗೆ ಕೊರೊನಾ ಸೋಂಕು..!
ಅವಿಷ್ಕಾ ಫರ್ನಾಂಡೋ, ಕುಸಲ್ ಪೆರೇರಾ,Image Credit source: insidesport
Follow us
ಪೃಥ್ವಿಶಂಕರ
|

Updated on:Aug 25, 2023 | 2:08 PM

ಏಷ್ಯಾಕಪ್ (Asia Cup 2023) ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ, ಈ ಕಾಂಟಿನೆಂಟಲ್ ಟೂರ್ನಿಗೆ ಕೊರೊನಾದ (COVID-19) ಕರಿ ಛಾಯೆ ಆವರಿಸಿದೆ. ಈ ಬಾರಿಯ ಏಷ್ಯಾಕಪ್​ಗೆ ಜಂಟಿಯಾಗಿ ಆತಿಥ್ಯವಹಿಸುತ್ತಿರುವ ಹಾಲಿ ಏಷ್ಯಾಕಪ್ ಚಾಂಪಿಯನ್ ಶ್ರೀಲಂಕಾ (Sri Lanka) ತಂಡದ ಇಬ್ಬರು ಪ್ರಮುಖ ಆಟಗಾರರು ಈ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಶ್ರೀಲಂಕಾ ತಂಡದ ಆರಂಭಿಕ ಬ್ಯಾಟರ್ ಅವಿಷ್ಕಾ ಫರ್ನಾಂಡೋ (Avishka Fernando ) ಮತ್ತು ವಿಕೆಟ್ ಕೀಪರ್ ಕುಸಾಲ್ ಪೆರೆರಾ (Kusal Perera) ಇಬ್ಬರೂ ಕೊರೊನಾ ಸೋಂಕಿಗೆ ತುತ್ತಾಗಿರುವ ಆಟಗಾರರಾಗಿದ್ದಾರೆ.

ಈ ಬಾರಿಯ ಏಷ್ಯಾಕಪ್​ಗೆ ಪಾಕಿಸ್ತಾನ ಹಾಗೂ ಶ್ರೀಲಂಕಾ ಜಂಟಿಯಾಗಿ ಆತಿಥ್ಯವಹಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಹದಗೆಟ್ಟ ಸಂಬಂಧದಿಂದಾಗಿ ಈ ಬಾರಿಯ ಏಷ್ಯಾಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತಿದೆ. ಇದರ ಪ್ರಕಾರ ಕೇವಲ 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಸೆಮಿಫೈನಲ್ ಹಾಗೂ ಫೈನಲ್ ಪಂದ್ಯ ಸೇರಿದಂತೆ ಪ್ರಮುಖ 9 ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲ್ಲಿವೆ. ಹೀಗಿರುವಾಗ ಆತಿಥೇಯ ಲಂಕಾ ತಂಡದ ಇಬ್ಬರು ಆಟಗಾರರು ಸೋಂಕಿಗೆ ತುತ್ತಾಗಿರುವುದು ಟೂರ್ನಿಗೆ ಹಿನ್ನಡೆಯನ್ನುಂಟು ಮಾಡಿದೆ.

ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ

ಶ್ರೀಲಂಕಾದ ವರದಿಗಾರರಾದ ದನುಷ್ಕಾ ಅರವಿಂದ ಅವರ ಪ್ರಕಾರ, ಆರಂಭಿಕ ಬ್ಯಾಟರ್ ಅವಿಷ್ಕಾ ಫರ್ನಾಂಡೋ ಮತ್ತು ವಿಕೆಟ್ ಕೀಪರ್ ಬ್ಯಾಟರ್ ಕುಸಲ್ ಪೆರೆರಾ ಇಬ್ಬರ ಕೊರೊನಾ ವರದಿ ಪಾಸಿಟಿವ್ ಬಂದಿದೆ ಎಂದು ವರದಿಯಾಗಿದೆ. ಈ ಇಬ್ಬರಿಗೆ ಸೋಂಕು ತಗುಲಿರುವ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲವಾದರೂ, ವೈರಸ್‌ನಿಂದಾಗಿ ಪೆರೇರಾ ಮತ್ತು ಫರ್ನಾಂಡೋ ಇಬ್ಬರೂ ಏಷ್ಯಾಕಪ್‌ನಿಂದ ಹೊರಗುಳಿದರೆ ಅದು ತಂಡಕ್ಕೆ ದೊಡ್ಡ ಹೊಡೆತವಾಗಲಿದೆ.

ಈ ಹಿಂದೆಯೂ ಸೋಂಕು ತಗುಲ್ಲಿತ್ತು

ವರದಿಗಳ ಪ್ರಕಾರ, ಇದೀಗ ಸೋಂಕಿಗೆ ತುತ್ತಾಗಿರುವ ಫೆರ್ನಾಂಡೋ ಕಳೆದ ವರ್ಷ ಫೆಬ್ರವರಿಯಲ್ಲಿ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯ ಆರಂಭಕ್ಕೂ ಮೊದಲು ಸೋಂಕಿಗೆ ತುತ್ತಾಗಿದ್ದರು. ಕೋವಿಡ್- 19 ಲಸಿಕೆಯ ಬೂಸ್ಟರ್ ಡೋಸ್ ನೀಡಿದ ಎರಡು ವಾರಗಳ ನಂತರ ಅವರು ಸೋಂಕಿಗೆ ತುತ್ತಾಗಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಏತನ್ಮಧ್ಯೆ, ಫೆರ್ನಾಂಡೋ ಜೊತೆಗೆ ಸೋಂಕಿಗೆ ತುತ್ತಾಗಿರುವ ಮತ್ತೊಬ್ಬ ಆಟಗಾರ ಪೆರೇರಾ ಕೂಡ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಆರಂಭಕ್ಕೂ ಮುನ್ನ ಈ ಸೋಂಕಿಗೆ ಒಳಗಾಗಿದ್ದರು.

ಇದೀಗ ಈ ಇಬ್ಬರು ಸೋಂಕಿಗೆ ತುತ್ತಾಗಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ, ಈ ಸಾಂಕ್ರಾಮಿಕ ರೋಗದ ನಡುವೆಯೂ ಈ ಬಾರಿಯ ಏಷ್ಯಾಕಪ್ ಹೇಗೆ ನಡೆಯಲ್ಲಿದೆ ಹಾಗೂ ಇದನ್ನು ತಪ್ಪಿಸಲು ಮಂಡಳಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಆಗಸ್ಟ್ 30 ರಿಂದ ಏಷ್ಯಾಕಪ್ ಆರಂಭ

ಈ ಭಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಆರಂಭಗೊಳ್ಳಲಿದೆ. ಮುಲ್ತಾನ್‌ನಲ್ಲಿ ಪಾಕಿಸ್ತಾನ ಮತ್ತು ನೇಪಾಳ ತಂಡಗಳು ಉದ್ಘಾಟನಾ ಪಂದ್ಯವನ್ನು ಆಡಲಿವೆ. ಈ ವರ್ಷದ ಕೊನೆಯಲ್ಲಿ ಏಕದಿನ ವಿಶ್ವಕಪ್ ಇರುವ ಕಾರಣ, ಈ ಬಾರಿಯ ಏಷ್ಯಾಕಪ್ ಅನ್ನು ಏಕದಿನ ಮಾದರಿಯಲ್ಲಿ ಆಡಲಾಗುತ್ತಿದೆ. ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಹೀಗಾಗಿ ಲಂಕಾ ತಂಡದ ಆಟಗಾರರೇ ಸೋಂಕಿಗೆ ತುತ್ತಾಗಿರುವುದು ಮುಂದೆ ವಿಶ್ವಕಪ್ ಇರುವ ಕಾರಣ ಟೀಂ ಇಂಡಿಯಾ ಬಹಳ ಎಚ್ಚರಿಕೆಯಿಂದ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿದೆ. ಭಾರತ ತನ್ನ ಏಷ್ಯಾಕಪ್ ಅಭಿಯಾನವನ್ನು ಸೆಪ್ಟೆಂಬರ್ 02 ರ ಶನಿವಾರದಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯದೊಂದಿಗೆ ಆರಂಭಿಸಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:50 pm, Fri, 25 August 23

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ