ಇಂಡೊ-ಪಾಕ್ ಗಡಿಯಲ್ಲಿ ಸ್ಟೇಡಿಯಂ ನಿರ್ಮಿಸಿ: ಎಲ್ಲಾ ಸಮಸ್ಯೆಗೂ ಇದುವೇ ಪರಿಹಾರ

Champions trophy 2025: ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು ಆಡಲು ಬಿಸಿಸಿಐ ನಿರಾಕರಿಸಿತ್ತು. ಅದರಂತೆ ಇದೀಗ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಒಪ್ಪಿಕೊಂಡಿದೆ. ಹಾಗೆಯೇ ಭಾರತದಲ್ಲಿ ನಡೆಯಲಿರುವ ಐಸಿಸಿ ಟೂರ್ನಿಯನ್ನು ಸಹ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಬೇಕೆಂದು ಪಿಸಿಬಿ ಷರತ್ತು ವಿಧಿಸಿದೆ.

ಇಂಡೊ-ಪಾಕ್ ಗಡಿಯಲ್ಲಿ ಸ್ಟೇಡಿಯಂ ನಿರ್ಮಿಸಿ: ಎಲ್ಲಾ ಸಮಸ್ಯೆಗೂ ಇದುವೇ ಪರಿಹಾರ
Ind Vs Pak
Follow us
ಝಾಹಿರ್ ಯೂಸುಫ್
|

Updated on: Dec 21, 2024 | 1:55 PM

ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಬಿಕ್ಕಟ್ಟು ಕೊನೆಗೂ ಇತ್ಯರ್ಥವಾಗಿದೆ. 2025ರ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಒಪ್ಪಿಕೊಂಡಿದ್ದು, ಅದರಂತೆ ಮುಂಬರುವ ಐಸಿಸಿ ಟೂರ್ನಿಯು ಪಾಕ್​ನಲ್ಲೇ ಆಯೋಜನೆಗೊಳ್ಳಲಿದೆ. ಅಲ್ಲದೆ ಭಾರತ ಪಂದ್ಯಗಳು ತಟಸ್ಥ ಸ್ಥಳದಲ್ಲಿ ನಡೆಯಲಿದೆ.

ಇಲ್ಲಿ ಟೀಮ್ ಇಂಡಿಯಾದ ಪಂದ್ಯಗಳನ್ನು ದುಬೈ ಅಥವಾ ಶ್ರೀಲಂಕಾದಲ್ಲಿ ಆಯೋಜಿಸಲು ಐಸಿಸಿ ಸಲಹೆ ನೀಡಿದ್ದು, ಇದಕ್ಕೆ ಪಿಸಿಬಿ ಕೂಡ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಶೀಘ್ರದಲ್ಲೇ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿ ಪ್ರಕಟವಾಗಲಿದೆ.

ಆದರೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜನೆಗೆ ಒಪ್ಪಿಕೊಂಡಿರುವ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ, ಐಸಿಸಿ ಮುಂದೆ ಕೆಲ ಷರತ್ತುಗಳನ್ನು ಮುಂದಿಟ್ಟಿದೆ. ಈ ಷರತ್ತುಗಳಂತೆ ಭಾರತದಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲೇ ಆಯೋಜಿಸಬೇಕಾಗುತ್ತದೆ.

ಅಂದರೆ ಇಲ್ಲಿ ಪಾಕಿಸ್ತಾನ್ ತಂಡವು ಇನ್ಮುಂದೆ ಭಾರತದಲ್ಲಿ ಪಂದ್ಯವಾಡುವುದಿಲ್ಲ. ಬದಲಾಗಿ ಪಾಕ್ ಪಂದ್ಯಗಳನ್ನು ಯುಎಇ ಅಥವಾ ಶ್ರೀಲಂಕಾದಲ್ಲಿ ಆಯೋಜಿಸಬೇಕಾಗುತ್ತದೆ. ಆದರೆ ಹೀಗೆ ಪ್ರತಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವುದು ತರವಲ್ಲ ಎಂದಿದ್ದಾರೆ ಪಾಕಿಸ್ತಾನ್ ಆಟಗಾರ ಅಹಮದ್ ಶೆಹಝಾದ್.

ಎರಡು ದೇಶಗಳು ಪರಸ್ಪರ ಎದುರಾಳಿ ದೇಶಗಳಿಗೆ ಭೇಟಿ ನೀಡುವುದಿಲ್ಲ ಎನ್ನುವುದು ಸರಿಯಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಅದರಂತೆ ಎರಡು ಮಂಡಳಿಗಳು ಸೇರಿ ಭಾರತ ಮತ್ತು ಪಾಕಿಸ್ತಾನ್ ಗಡಿಯಲ್ಲಿ ಸ್ಟೇಡಿಯಂ ನಿರ್ಮಿಸುವುದು ಉತ್ತಮ ಎಂದು ಅಹಮದ್ ಶೆಹಝಾದ್ ಅಭಿಪ್ರಾಯಪಟ್ಟಿದ್ದಾರೆ.

ಗಡಿಯಲ್ಲಿ ಸ್ಟೇಡಿಯಂ ನಿರ್ಮಿಸಿ ಪಾಕಿಸ್ತಾನದವರಿಗೆ ಪಾಕ್​ ಗಡಿಯಿಂದ ಎಂಟ್ರಿ ಕೊಡಿ, ಭಾರತೀಯರಿಗೆ ಭಾರತದ ಗಡಿಯಲ್ಲಿ ಎಂಟ್ರಿ ಗೇಟ್ ನಿರ್ಮಿಸಿ. ಇದರಿಂದ ವೀಸಾ ಸಮಸ್ಯೆ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬಹುದು.

ಈ ಮೂಲಕ ಭಾರತ ಪಾಕಿಸ್ತಾನಕ್ಕೆ ಭೇಟಿ ನೀಡುವುದಿಲ್ಲ, ಪಾಕಿಸ್ತಾನ್ ಭಾರತಕ್ಕೆ ನೀಡುವುದಿಲ್ಲ ಎಂಬ ವಿಚಾರಗಳನ್ನೇ ತೆಗೆದು ಹಾಕಬಹುದು. ಹಾಗೆಯೇ ಸ್ಟೇಡಿಯಂ ಎರಡು ದೇಶಗಳ ಗಡಿಯಲ್ಲಿರುವುದರಿಂದ ಪಾಕಿಸ್ತಾನದ ಅಭಿಮಾನಿಗಳಿಗೆ ವೀಸಾ ಪಡೆಯುವ ಸಮಸ್ಯೆ ಉದ್ಭವಿಸುವುದಿಲ್ಲ. ಹಾಗೆಯೇ ಭಾರತೀಯರು ಕೂಡ ಪಾಕಿಸ್ತಾನಕ್ಕೆ ಬರಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಮೂಲಕ ಇಂಡೊ-ಪಾಕ್ ಕ್ರಿಕೆಟ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು ಎಂದು ಅಹಮದ್ ಶೆಹಝಾದ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 11 ಆಟಗಾರರು ನಿವೃತ್ತಿ..!

33 ವರ್ಷದ ಅಹಮದ್ ಶೆಹಝಾದ್ ಒಂದು ಕಾಲದಲ್ಲಿ ಪಾಕಿಸ್ತಾನದ ಸ್ಟಾರ್ ಆಟಗಾರ. ಆದಾಗ್ಯೂ, ಶೀಘ್ರದಲ್ಲೇ ಅವರ ವೃತ್ತಿಜೀವನವು ಕೊನೆಗೊಂಡಿತು. ಪಾಕಿಸ್ತಾನ್ ಪರ 13 ಟೆಸ್ಟ್ ಪಂದ್ಯಗಳನ್ನಾಡಿರುವ ಶೆಹಝಾದ್ 3 ಶತಕಗಳೊಂದಿಗೆ 982 ರನ್ ಕಲೆಹಾಕಿದ್ದಾರೆ. ಇನ್ನು 81 ಏಕದಿನ ಪಂದ್ಯಗಳಿಂದ 6 ಶತಕಗಳೊಂದಿಗೆ 2605 ರನ್​ ಗಳಿಸಿದ್ದಾರೆ. ಹಾಗೆಯೇ 59 ಟಿ20 ಪಂದ್ಯಗಳಲ್ಲೂ ಪಾಕ್ ತಂಡವನ್ನು ಪ್ರತಿನಿಧಿಸಿರುವ ಅಹಮದ್ ಶೆಹಝಾದ್ 1471 ರನ್​ಗಳಿಸಿದ್ದಾರೆ.

ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ