IPL 2022: ಹೆಸರು ಘೋಷಿಸಿದ ಅಹಮದಾಬಾದ್ ತಂಡ
Ahmedabad Titans: ಈಗಾಗಲೇ 10 ಫ್ರಾಂಚೈಸಿಗಳು ಒಟ್ಟು 33 ಆಟಗಾರರನ್ನು ಉಳಿಸಿಕೊಂಡಿದ್ದು. ಅದರಂತೆ ಫೆಬ್ರವರಿ 12 ಮತ್ತು 13 ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಉಳಿದ ಆಟಗಾರರನ್ನು ಖರೀದಿಸಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 (IPL 2022) ಮೆಗಾ ಹರಾಜಿಗಾಗಿ ಸಿದ್ದತೆಗಳು ಶುರುವಾಗಿದೆ. ಮುಂದಿನ ಸೀಸನ್ನಲ್ಲಿ ಹೊಸ ಎರಡು ತಂಡಗಳು ಕಾಣಿಸಿಕೊಳ್ಳಲಿದ್ದು, ಅದರಂತೆ ಈಗಾಗಲೇ ಲಕ್ನೋ ಫ್ರಾಂಚೈಸಿ ತನ್ನ ತಂಡದ ಹೆಸರನ್ನು ಲಕ್ನೋ ಸೂಪರ್ ಜೈಂಟ್ಸ್ (Luknow Super Gaints) ಎಂದು ಘೋಷಿಸಿದೆ. ಇದೀಗ ಅಹಮದಾಬಾದ್ ಫ್ರಾಂಚೈಸಿ ಕೂಡ ಹೆಸರನ್ನು ಘೋಷಿಸಿದ್ದು, ಮುಂದಿನ ಸೀಸನ್ನಲ್ಲಿ ಗುಜರಾತ್ ಟೈಟಾನ್ಸ್ (Gujrat Titans) ಹೆಸರಿನಲ್ಲಿ ತಂಡವು ಕಣಕ್ಕಿಳಿಯಲಿದೆ ಎಂದು ವರದಿಯಾಗಿದೆ.
ಸಿವಿಸಿ ಕ್ಯಾಪಿಟಲ್ಸ್ ಮಾಲೀಕತ್ವದ ಗುಜರಾತ್ ಟೈಟಾನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಇನ್ನು ತಂಡದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆಟಗಾರ ಆಶಿಸ್ ನೆಹ್ರಾ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಟೈಟಾನ್ಸ್ ತಂಡದ ಮೆಂಟರ್ ಆಗಿ ಟೀಮ್ ಇಂಡಿಯಾದ ಮಾಜಿ ಕೋಚ್ ದಕ್ಷಿಣ ಆಫ್ರಿಕಾದ ಗ್ಯಾರಿ ಕರ್ಸ್ಟನ್ ಇರಲಿದ್ದಾರೆ.
ಈಗಾಗಲೇ ಗುಜರಾತ್ ಟೈಟಾನ್ಸ್ ತಂಡವು ಸ್ಪೆಷಲ್ ಪಿಕ್ ಆಯ್ಕೆಯ ಮೂಲಕ ಮೂವರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದ್ದು, ಅದರಂತೆ ತಂಡದಲ್ಲಿ ನಾಯಕನಾಗಿ ಹಾರ್ದಿಕ್ ಪಾಂಡ್ಯ ಇದ್ದರೆ, 2ನೇ ಆಟಗಾರನಾಗಿ ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ ಇದ್ದಾರೆ. ಹಾಗೆಯೇ ಮೂರನೇ ಆಟಗಾರನಾಗಿ ಟೀಮ್ ಇಂಡಿಯಾದ ಯುವ ಬ್ಯಾಟ್ಸ್ಮನ್ ಶುಭ್ಮನ್ ಗಿಲ್ ಆಯ್ಕೆಯಾಗಿದ್ದಾರೆ.
ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕೆಎಲ್ ರಾಹುಲ್ ಆಯ್ಕೆಯಾಗಿದ್ದು, ಹಾಗೆಯೇ ಎರಡನೇ ಆಟಗಾರನಾಗಿ ಆಸ್ಟ್ರೇಲಿಯಾದ ಮಾರ್ಕಸ್ ಸ್ಟೊಯಿನಿಸ್ ಹಾಗೂ ಮೂರನೇ ಆಟಗಾರನಾಗಿ ಟೀಮ್ ಇಂಡಿಯಾ ಯುವ ಸ್ಪಿನ್ನರ್ ರವಿ ಬಿಷ್ನೋಯ್ ತಂಡದಲ್ಲಿದ್ದಾರೆ.
ಈಗಾಗಲೇ 10 ಫ್ರಾಂಚೈಸಿಗಳು ಒಟ್ಟು 33 ಆಟಗಾರರನ್ನು ಉಳಿಸಿಕೊಂಡಿದ್ದು. ಅದರಂತೆ ಫೆಬ್ರವರಿ 12 ಮತ್ತು 13 ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಉಳಿದ ಆಟಗಾರರನ್ನು ಖರೀದಿಸಲಿದೆ. ಈ ಹರಾಜಿನಲ್ಲಿ ಒಟ್ಟು 590 ಆಟಗಾರರು ಕಾಣಿಸಿಕೊಳ್ಳುತ್ತಿದ್ದು, ಇವರಲ್ಲಿ ಯಾರು ಯಾವ ತಂಡಕ್ಕೆ ಆಯ್ಕೆಯಾಗಲಿದ್ದಾರೆ ಕಾದು ನೋಡಬೇಕಿದೆ.
ಇದನ್ನೂ ಓದಿ: Yuzvendra Chahal: ವಿಕೆಟ್ಗಳ ಶತಕ ಪೂರೈಸಿದ ಚಹಾಲ್
ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್ಮ್ಯಾನ್ ರೋಹಿತ್ ಶರ್ಮಾ
ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!
(Gujrat Titans official name of Ahmedabad franchise in IPL 2022)
Published On - 3:54 pm, Mon, 7 February 22