Aiden Markram: ಸೌತ್ ಆಫ್ರಿಕಾ ಟಿ20 ತಂಡಕ್ಕೆ ಹೊಸ ನಾಯಕ

South Africa Squad: ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ. ಇದಕ್ಕಾಗಿ ಬಲಿಷ್ಠ ಟಿ20 ತಂಡವನ್ನು ರೂಪಿಸಲಾಗಿದೆ.

Aiden Markram: ಸೌತ್ ಆಫ್ರಿಕಾ ಟಿ20 ತಂಡಕ್ಕೆ ಹೊಸ ನಾಯಕ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 06, 2023 | 7:44 PM

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಾಗಿ ಸೌತ್ ಆಫ್ರಿಕಾ (South Africa)  ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಟಿ20 ತಂಡವನ್ನು ಯುವ ಆಟಗಾರ ಐಡೆನ್ ಮಾರ್ಕ್ರಾಮ್ (Aiden Markram) ಮುನ್ನಡೆಸಲಿದ್ದಾರೆ. ಈ ಹಿಂದೆ ತಂಡದ ನಾಯಕರಾಗಿ ತೆಂಬಾ ಬುವುಮಾ ಕಾಣಿಸಿಕೊಂಡಿದ್ದರು. ಆದರೆ ವಿಂಡೀಸ್ ವಿರುದ್ಧದ ಟಿ20 ಸರಣಿಯಿಂದ ಬವುಮಾ ಅವರನ್ನು ಕೈ ಬಿಡಲಾಗಿದೆ. ಬದಲಾಗಿ ಮಾರ್ಕ್ರಾಮ್​ಗೆ ನಾಯಕನ ಪಟ್ಟ ನೀಡಲಾಗಿದೆ.

ಈ ಹಿಂದೆ ಸೌತ್ ಆಫ್ರಿಕಾ ಅಂಡರ್ 19 ತಂಡವನ್ನು ಐಡೆನ್ ಮಾರ್ಕ್ರಾಮ್ ಮುನ್ನಡೆಸಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ಟೀಮ್​ಗೆ ಸಾರಥ್ಯವಹಿಸಿದ್ದ ಮಾರ್ಕ್ರಾಮ್, ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಟ್ಟಿದ್ದರು. ಇದರ ಬೆನ್ನಲ್ಲೇ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ತಮ್ಮ ತಂಡಕ್ಕೆ ಮಾರ್ಕ್ರಾಮ್ ಅವರನ್ನು ನಾಯಕರಾಗಿ ಆಯ್ಕೆ ಮಾಡಿದ್ದರು. ಇದೀಗ ಸೌತ್ ಆಫ್ರಿಕಾ ಟಿ20 ತಂಡದ ನಾಯಕತ್ವ ಕೂಡ ಒಲಿದಿದೆ. ಇದಾಗ್ಯೂ ಏಕದಿನ ತಂಡದ ನಾಯಕರಾಗಿ ತೆಂಬಾ ಬವುಮಾ ಮುಂದುವರೆಯಲಿದ್ದಾರೆ.

ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ. ಇದಕ್ಕಾಗಿ ಬಲಿಷ್ಠ ಟಿ20 ತಂಡವನ್ನು ರೂಪಿಸಲಾಗಿದ್ದು, ಅದರಂತೆ ಯುವ ಆಟಗಾರರ ದಂಡೇ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಇದನ್ನೂ ಓದಿ: Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ

ಸೌತ್ ಆಫ್ರಿಕಾ ಟಿ20 ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್, ಜಾರ್ನ್ ಫಾರ್ಟುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಸಿಸಂದಾ ಮಗಾಲಾ, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆನ್ರಿಕ್ ನೋಕಿಯಾ, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ರಿಲೀ ರೌಸ್ಸೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್.

ಸೌತ್ ಆಫ್ರಿಕಾ ಏಕದಿನ ತಂಡ (ಮೊದಲ 2 ಪಂದ್ಯಗಳಿಗೆ): ತೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಟೋನಿ ಡಿ ಝೋರ್ಜಿ, ಜೋರ್ನ್ ಫೋರ್ಚುಯಿನ್, ರೀಜಾ ಹೆಂಡ್ರಿಕ್ಸ್, ಸಿಸಂದಾ ಮಾಗಲಾ, ಕೇಶವ್ ಮಹಾರಾಜ್, ವಿಯಾನ್ ಮುಲ್ಡರ್, ಲುಂಗಿ ಎನ್ಗಿಡಿ, ರಿಯಾನ್ ರಿಕೆಲ್ಟನ್, ಆಂಡಿಲ್ ಫೆಹ್ಲುಕ್ವಾಯೊ, ಲಿಜಾಡ್ ವಿಲಿಯಮ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಟ್ರಿಸ್ಟಾನ್ ಸ್ಟಬ್ಸ್.

ಸೌತ್ ಆಫ್ರಿಕಾ ಏಕದಿನ ತಂಡ (3ನೇ ಏಕದಿನ ಪಂದ್ಯಕ್ಕೆ): ತೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜೊರ್ಜಿ, ಜೋರ್ನ್ ಫಾರ್ಟುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಸಿಸಂದಾ ಮಗಲಾ, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್ಗಿಡಿ, ವೇಯ್ನ್ ಪಾರ್ನೆಲ್, ಆಂಡಿಲ್ ಫೆಹ್ಲುಕ್ವಾಯೊ, ಟ್ರಿಸ್ಟಾನ್ ಸ್ಟಬ್ಸ್, ಲಿಜಾಡ್ ವಿಲಿಯಮ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ