ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಾಗಿ ಸೌತ್ ಆಫ್ರಿಕಾ (South Africa) ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಟಿ20 ತಂಡವನ್ನು ಯುವ ಆಟಗಾರ ಐಡೆನ್ ಮಾರ್ಕ್ರಾಮ್ (Aiden Markram) ಮುನ್ನಡೆಸಲಿದ್ದಾರೆ. ಈ ಹಿಂದೆ ತಂಡದ ನಾಯಕರಾಗಿ ತೆಂಬಾ ಬುವುಮಾ ಕಾಣಿಸಿಕೊಂಡಿದ್ದರು. ಆದರೆ ವಿಂಡೀಸ್ ವಿರುದ್ಧದ ಟಿ20 ಸರಣಿಯಿಂದ ಬವುಮಾ ಅವರನ್ನು ಕೈ ಬಿಡಲಾಗಿದೆ. ಬದಲಾಗಿ ಮಾರ್ಕ್ರಾಮ್ಗೆ ನಾಯಕನ ಪಟ್ಟ ನೀಡಲಾಗಿದೆ.
ಈ ಹಿಂದೆ ಸೌತ್ ಆಫ್ರಿಕಾ ಅಂಡರ್ 19 ತಂಡವನ್ನು ಐಡೆನ್ ಮಾರ್ಕ್ರಾಮ್ ಮುನ್ನಡೆಸಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ ಸನ್ರೈಸರ್ಸ್ ಈಸ್ಟರ್ನ್ ಕೇಪ್ ಟೀಮ್ಗೆ ಸಾರಥ್ಯವಹಿಸಿದ್ದ ಮಾರ್ಕ್ರಾಮ್, ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಟ್ಟಿದ್ದರು. ಇದರ ಬೆನ್ನಲ್ಲೇ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ತಮ್ಮ ತಂಡಕ್ಕೆ ಮಾರ್ಕ್ರಾಮ್ ಅವರನ್ನು ನಾಯಕರಾಗಿ ಆಯ್ಕೆ ಮಾಡಿದ್ದರು. ಇದೀಗ ಸೌತ್ ಆಫ್ರಿಕಾ ಟಿ20 ತಂಡದ ನಾಯಕತ್ವ ಕೂಡ ಒಲಿದಿದೆ. ಇದಾಗ್ಯೂ ಏಕದಿನ ತಂಡದ ನಾಯಕರಾಗಿ ತೆಂಬಾ ಬವುಮಾ ಮುಂದುವರೆಯಲಿದ್ದಾರೆ.
ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ. ಇದಕ್ಕಾಗಿ ಬಲಿಷ್ಠ ಟಿ20 ತಂಡವನ್ನು ರೂಪಿಸಲಾಗಿದ್ದು, ಅದರಂತೆ ಯುವ ಆಟಗಾರರ ದಂಡೇ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ: Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
ಸೌತ್ ಆಫ್ರಿಕಾ ಟಿ20 ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್, ಜಾರ್ನ್ ಫಾರ್ಟುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಸಿಸಂದಾ ಮಗಾಲಾ, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆನ್ರಿಕ್ ನೋಕಿಯಾ, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ರಿಲೀ ರೌಸ್ಸೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್.
ಸೌತ್ ಆಫ್ರಿಕಾ ಏಕದಿನ ತಂಡ (ಮೊದಲ 2 ಪಂದ್ಯಗಳಿಗೆ): ತೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಟೋನಿ ಡಿ ಝೋರ್ಜಿ, ಜೋರ್ನ್ ಫೋರ್ಚುಯಿನ್, ರೀಜಾ ಹೆಂಡ್ರಿಕ್ಸ್, ಸಿಸಂದಾ ಮಾಗಲಾ, ಕೇಶವ್ ಮಹಾರಾಜ್, ವಿಯಾನ್ ಮುಲ್ಡರ್, ಲುಂಗಿ ಎನ್ಗಿಡಿ, ರಿಯಾನ್ ರಿಕೆಲ್ಟನ್, ಆಂಡಿಲ್ ಫೆಹ್ಲುಕ್ವಾಯೊ, ಲಿಜಾಡ್ ವಿಲಿಯಮ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಟ್ರಿಸ್ಟಾನ್ ಸ್ಟಬ್ಸ್.
ಸೌತ್ ಆಫ್ರಿಕಾ ಏಕದಿನ ತಂಡ (3ನೇ ಏಕದಿನ ಪಂದ್ಯಕ್ಕೆ): ತೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜೊರ್ಜಿ, ಜೋರ್ನ್ ಫಾರ್ಟುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಸಿಸಂದಾ ಮಗಲಾ, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್ಗಿಡಿ, ವೇಯ್ನ್ ಪಾರ್ನೆಲ್, ಆಂಡಿಲ್ ಫೆಹ್ಲುಕ್ವಾಯೊ, ಟ್ರಿಸ್ಟಾನ್ ಸ್ಟಬ್ಸ್, ಲಿಜಾಡ್ ವಿಲಿಯಮ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್.