Ajaz Patel: 10 ವಿಕೆಟ್​ ಉರುಳಿಸಿ ಇತಿಹಾಸ ನಿರ್ಮಿಸಿದ ಎಜಾಝ್ ಪಟೇಲ್: ಇಲ್ಲಿದೆ ಹೈಲೈಟ್ಸ್​

| Updated By: ಝಾಹಿರ್ ಯೂಸುಫ್

Updated on: Dec 04, 2021 | 2:55 PM

India vs New Zealand: ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ ಭಾರತ 325 ರನ್​ ಕಲೆಹಾಕಿದೆ. ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ 2ನೇ ದಿನದಾಟದಲ್ಲಿ 300ರ ಗಡಿದಾಟಿತು. 311 ಎಸೆತಗಳನ್ನು ಎದುರಿಸಿದ ಮಯಾಂಕ್ ಅಗರ್ವಾಲ್ 17 ಬೌಂಡರಿ ಹಾಗೂ 4 ಸಿಕ್ಸ್​ನೊಂದಿಗೆ 150 ರನ್​ಗಳಿಸಿ ಎಜಾಝ್ ಪಟೇಲ್​ಗೆ ವಿಕೆಟ್ ಒಪ್ಪಿಸಿದ್ದರು.

Ajaz Patel: 10 ವಿಕೆಟ್​ ಉರುಳಿಸಿ ಇತಿಹಾಸ ನಿರ್ಮಿಸಿದ ಎಜಾಝ್ ಪಟೇಲ್: ಇಲ್ಲಿದೆ ಹೈಲೈಟ್ಸ್​
Ajaz patel
Follow us on

ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಇನಿಂಗ್ಸ್​ನಲ್ಲಿ 10 ವಿಕೆಟ್ ಉರುಳಿಸಿದ ವಿಶ್ವ ದಾಖಲೆ ಪಟ್ಟಿಗೆ ಇದೀಗ ನ್ಯೂಜಿಲೆಂಡ್ ಸ್ಪಿನ್ನರ್ ಎಜಾಝ್ ಪಟೇಲ್ (Ajaz Patel) ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ 1956 ರಲ್ಲಿ ಇಂಗ್ಲೆಂಡ್ ಬೌಲರ್ ಲೇಕರ್ ಆಸ್ಟ್ರೇಲಿಯಾ ವಿರುದ್ದದ ಪಂದ್ಯದಲ್ಲಿ 53 ರನ್​ ನೀಡಿ 10 ವಿಕೆಟ್ ಉರುಳಿಸಿ ವಿಶ್ವ ದಾಖಲೆ ಬರೆದಿದ್ದರು. ಆ ಬಳಿಕ ಈ ದಾಖಲೆಯನ್ನು ಸರಿಗಟ್ಟಿದ್ದು ಕನ್ನಡಿಗ ಅನಿಲ್ ಕುಂಬ್ಳೆ (Anil Kumble). ಕುಂಬ್ಳೆ 1999 ರಲ್ಲಿ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ 74 ರನ್ ನೀಡಿ 10 ವಿಕೆಟ್ ಉರುಳಿಸಿದ್ದರು. ಇದೀಗ ಈ ಪಟ್ಟಿಗೆ ಮೂರನೇ ಸೇರ್ಪಡೆ ಎಜಾಝ್ ಪಟೇಲ್. ಮುಂಬೈನಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಮೊದಲ ಇನಿಂಗ್ಸ್​ನ ಎಲ್ಲಾ ವಿಕೆಟ್ ಪಡೆಯುವ ಮೂಲಕ ಎಜಾಝ್ ಪಟೇಲ್ ಇತಿಹಾಸ ನಿರ್ಮಿಸಿದ್ದಾರೆ.

ಗಿಲ್ ವಿಕೆಟ್ ಪಡೆಯುವ ಮೂಲಕ ಶುರುವಾದ ವಿಕೆಟ್ ಬೇಟೆ ಅಂತಿಮವಾಗಿ ಸಿರಾಜ್ ವಿಕೆಟ್ ಉರುಳಿಸಿ ಎಜಾಜ್ ಪಟೇಲ್ ಎಲ್ಲಾ 10 ವಿಕೆಟ್ ತಮ್ಮದಾಗಿಸಿಕೊಂಡರು. 47.5 ಓವರ್ ಎಸೆದ ಎಜಾಜ್ 119 ರನ್​ ನೀಡಿ 10 ವಿಕೆಟ್ ಪಡೆದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಎಲ್ಲಾ 10 ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡರು.

ಅಂದಹಾಗೆ ಎಜಾಜ್ ಪಟೇಲ್ ಮೂಲತಃ ಮುಂಬೈನವರು. ಇದಾಗ್ಯೂ ನ್ಯೂಜಿಲೆಂಡ್ ಪರ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದರು. ಇದೀಗ ಹೋಮ್ ಗ್ರೌಂಡ್​ನಲ್ಲೇ 10 ವಿಕೆಟ್ ಉರುಳಿಸುವ ಮೂಲಕ ಸಾಧನೆ ಮೆರೆದಿದ್ದು ವಿಶೇಷ.

ಎಜಾಝ್ ಪಟೇಲ್ ಅವರ 10 ವಿಕೆಟ್ ಹೈಲೈಟ್ಸ್ ವಿಡಿಯೋ ನೋಡಲು​:- ಇಲ್ಲಿ ಕ್ಲಿಕ್ ಮಾಡಿ

ಇನ್ನು ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ ಭಾರತ 325 ರನ್​ ಕಲೆಹಾಕಿದೆ. ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ 2ನೇ ದಿನದಾಟದಲ್ಲಿ 300ರ ಗಡಿದಾಟಿತು. 311 ಎಸೆತಗಳನ್ನು ಎದುರಿಸಿದ ಮಯಾಂಕ್ ಅಗರ್ವಾಲ್ 17 ಬೌಂಡರಿ ಹಾಗೂ 4 ಸಿಕ್ಸ್​ನೊಂದಿಗೆ 150 ರನ್​ಗಳಿಸಿ ಎಜಾಝ್ ಪಟೇಲ್​ಗೆ ವಿಕೆಟ್ ಒಪ್ಪಿಸಿದ್ದರು. ಎಜಾಝ್ ಪಟೇಲ್ ಅವರ 10 ವಿಕೆಟ್​ ಹೊರತಾಗಿಯೂ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 325 ರನ್​ ಕಲೆಹಾಕುವ ಮೂಲಕ ಸುಸ್ಥಿತಿಯಲ್ಲಿದೆ.

ಇದನ್ನೂ ಓದಿ: IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್

ಇದನ್ನೂ ಓದಿ: 8 ಫ್ರಾಂಚೈಸಿ ಉಳಿಸಿಕೊಂಡ ಆಟಗಾರರ ಪಟ್ಟಿ ಹೀಗಿದೆ

ಇದನ್ನೂ ಓದಿ: 27 ಆಟಗಾರರು ರಿಟೈನ್: ಬಿಡುಗಡೆಯಾದ ಆಟಗಾರರ ಪಟ್ಟಿ ಇಲ್ಲಿದೆ