IND vs NZ: ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ರಹಾನೆ- ಪೂಜಾರಗೆ ಟ್ರೋಲರ್ಸ್ ಕಾಟ

TV9 Digital Desk

| Edited By: ಪೃಥ್ವಿಶಂಕರ

Updated on: Nov 28, 2021 | 2:27 PM

IND vs NZ: ಬಂದವು. ಇಬ್ಬರು ಅನುಭವಿ ಬ್ಯಾಟ್ಸ್‌ಮನ್‌ಗಳು ನಿರಂತರ ಕಳಪೆ ಪ್ರದರ್ಶನದೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರವಾಗಿ ಟ್ರೋಲ್ ಆಗುತ್ತಿದ್ದಾರೆ. ಇವರ ಮೇಲೆ ನೆಟಿಜನ್‌ಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

IND vs NZ: ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ರಹಾನೆ- ಪೂಜಾರಗೆ ಟ್ರೋಲರ್ಸ್ ಕಾಟ
ರಹಾನೆ- ಪೂಜಾರ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಭಾರತದ ಬ್ಯಾಟಿಂಗ್ ತತ್ತರಿಸಿದೆ. ಅನುಭವಿ ಬ್ಯಾಟ್ಸ್‌ಮನ್‌ಗಳಾದ ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಮತ್ತೊಮ್ಮೆ ವಿಫಲರಾದರು. ಪೂಜಾರ (22) ಜೈಮ್ ಜೇಸನ್ ಬೌಲಿಂಗ್​ನಲ್ಲಿ ವಿಕೆಟ್ ಕೀಪರ್ ಬ್ಲಂಡೆಲ್​ಗೆ ಕ್ಯಾಚಿತ್ತು ನಿರ್ಗಮಿಸಿದರು. ಕಳೆದ 40 ಇನ್ನಿಂಗ್ಸ್‌ಗಳಲ್ಲಿ ಪೂಜಾರ ಶತಕ ಸಿಡಿಸಿರಲಿಲ್ಲ. ಅವರು ತಮ್ಮ ಕೊನೆಯ ಟೆಸ್ಟ್ ಶತಕವನ್ನು 3 ಜನವರಿ 2019 ರಂದು ಆಸ್ಟ್ರೇಲಿಯಾ ವಿರುದ್ಧ ಗಳಿಸಿದರು.

ಅದೇ ಸಮಯದಲ್ಲಿ ನಾಯಕ ಅಜಿಂಕ್ಯ ರಹಾನೆ (4)ಯನ್ನು ಅಜಾಜ್ ಪಟೇಲ್ ಪೆವಿಲಿಯನ್ ಸೇರಿಸಿದರು. ಈ ವರ್ಷ ರಹಾನೆ 12 ಪಂದ್ಯಗಳನ್ನಾಡಿದ್ದು ಕೇವಲ 411 ರನ್ ಗಳಿಸಿದ್ದಾರೆ. ಈ ಸಮಯದಲ್ಲಿ ಅವರ ಸರಾಸರಿ 19.57 ಆಗಿತ್ತು. ಅವರ ಬ್ಯಾಟ್‌ನಿಂದ ಒಂದೇ ಒಂದು ಶತಕ ಬರಲಿಲ್ಲ. 2021 ರಲ್ಲಿ ಅವರ ಬ್ಯಾಟ್‌ನಿಂದ ಕೇವಲ 2 ಅರ್ಧಶತಕಗಳು ಬಂದವು. ಇಬ್ಬರು ಅನುಭವಿ ಬ್ಯಾಟ್ಸ್‌ಮನ್‌ಗಳು ನಿರಂತರ ಕಳಪೆ ಪ್ರದರ್ಶನದೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರವಾಗಿ ಟ್ರೋಲ್ ಆಗುತ್ತಿದ್ದಾರೆ. ಇವರ ಮೇಲೆ ನೆಟಿಜನ್‌ಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada