AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs KKR, IPL 2025: ಪೋಸ್ಟ್ ಮ್ಯಾಚ್​ನಲ್ಲಿ ತನ್ನದೇ ತಂಡದ ಆಟಗಾರರಿಗೆ ಗದರಿದ ಅಜಿಂಕ್ಯಾ ರಹಾನೆ: ಏನಂದ್ರು ನೋಡಿ

Ajinkya Rahane post match presentation: ಮುಂಬೈ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 16.2 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್ ಮಾಡಿತು, ಇದು ಈ ಋತುವಿನಲ್ಲಿ ಅವರ ಅತ್ಯಂತ ಕಡಿಮೆ ಸ್ಕೋರ್ ಆಗಿದೆ. ಪಂದ್ಯದ ನಂತರ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯಾ ರಹಾನೆ ಕೆಲ ವಿಚಾರ ಹಂಚಿಕೊಂಡಿದ್ದಾರೆ.

MI vs KKR, IPL 2025: ಪೋಸ್ಟ್ ಮ್ಯಾಚ್​ನಲ್ಲಿ ತನ್ನದೇ ತಂಡದ ಆಟಗಾರರಿಗೆ ಗದರಿದ ಅಜಿಂಕ್ಯಾ ರಹಾನೆ: ಏನಂದ್ರು ನೋಡಿ
Ajinkya Rahane
Vinay Bhat
|

Updated on: Apr 01, 2025 | 9:20 AM

Share

(ಬೆಂಗಳೂರು, ಏ 01): ಐಪಿಎಲ್ 2025ರ ಸೋಮವಾರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಎಂಟು ವಿಕೆಟ್‌ಗಳ ಸೋಲಿಗೆ ಕೋಲ್ಕತ್ತಾ ನೈಟ್ ರೈಡರ್ಸ್ (MI vs KKR) ತಂಡದ ನಾಯಕ ಅಜಿಂಕ್ಯಾ ರಹಾನೆ ತಮ್ಮ ಬ್ಯಾಟ್ಸ್‌ಮನ್‌ಗಳನ್ನೇ ದೂಷಿಸಿದ್ದಾರೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 16.2 ಓವರ್‌ಗಳಲ್ಲಿ 116 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. ಮುಂಬೈ ತಂಡ 12.5 ಓವರ್‌ಗಳಲ್ಲಿ ಎರಡು ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ತಲುಪಿತು.

ಸೋಲಿನ ನಂತರ ಅಜಿಂಕ್ಯ ರಹಾನೆ ಹೇಳಿದ್ದೇನು?

ಪಂದ್ಯದ ನಂತರ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯಾ ರಹಾನೆ, ಒಟ್ಟಾರೆಯಾಗಿ ಬ್ಯಾಟ್ಸ್‌ಮನ್‌ಗಳು ವಿಫಲರಾದರು. ನಾನು ಟಾಸ್ ಮಾಡುವಾಗ ಹೇಳಿದಂತೆ, ಇದು ಬ್ಯಾಟಿಂಗ್ ಮಾಡಲು ಒಳ್ಳೆಯ ವಿಕೆಟ್ ಆಗಿತ್ತು. ಈ ವಿಕೆಟ್‌ನಲ್ಲಿ 180-190 ರನ್‌ಗಳು ಉತ್ತಮವಾಗಿರುತ್ತಿತ್ತು. ಈ ಪಿಚ್ ತುಂಬಾ ಒಳ್ಳೆಯ ಬೌನ್ಸ್ ಹೊಂದಿದೆ. ಕೆಲವೊಮ್ಮೆ ನೀವು ವೇಗ ಮತ್ತು ಬೌನ್ಸ್ ಅನ್ನು ಬಳಸಬೇಕಾಗುತ್ತದೆ. ಈ ಆಟದಿಂದ ನಾವು ಬಹಳ ಬೇಗ ಕಲಿಯಬೇಕಾಯಿತು. ಚೆಂಡಿನಲ್ಲಿ ಹೆಚ್ಚಿನದೇನೂ ಮಾಡಲು ಸಾಧ್ಯವಾಗಲಿಲ್ಲ. ನಾವು ಕೈಲಾದಷ್ಟು ಪ್ರಯತ್ನಿಸಿದೆವು. ಆದರೆ ಬೋರ್ಡ್‌ನಲ್ಲಿ ಹೆಚ್ಚು ರನ್‌ಗಳು ಬರಲಿಲ್ಲ ಎಂದು ಹೇಳಿದ್ದಾರೆ.

ಪವರ್‌ಪ್ಲೇನಲ್ಲಿಯೇ ನಾಲ್ಕು ವಿಕೆಟ್‌ಗಳು ಪತನಗೊಂಡವ:

ಪವರ್‌ಪ್ಲೇನಲ್ಲಿಯೇ ಕೆಕೆಆರ್ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಇದರಿಂದ ತಂಡ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮಾತು ಮುಂದುವರೆಸಿದ ರಹಾನೆ, ನಾವು ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಲೇ ಇದ್ದೆವು. ಪವರ್‌ಪ್ಲೇನಲ್ಲಿ ನಾಲ್ಕು ವಿಕೆಟ್‌ಗಳು ಬಿದ್ದವು. ಅಲ್ಲಿಂದ ಹೊರಬರುವುದು ಮತ್ತು ಉತ್ತಮ ಮೊತ್ತವನ್ನು ಗಳಿಸುವುದು ಕಷ್ಟಕರವಾಯಿತು. ನಮಗೆ ಒಂದೊಳ್ಳೆ ಜೊತೆಯಾಟ ಬೇಕಿತ್ತು. ಕೊನೆಯವರೆಗೂ ನಿಂತು ಆಡುವ ಬ್ಯಾಟ್ಸ್‌ಮನ್ ಬೇಕಿತ್ತು ಎಂದು ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ
Image
ಪಂದ್ಯ ಮುಗಿದ ಬಳಿಕ ಮುಂಬೈ ಬಸ್ ಏರಿದ ಹಾರ್ದಿಕ್ ಪಾಂಡ್ಯ ಹೊಸ ಗರ್ಲ್ ಫ್ರೆಂಡ್
Image
ಹಾಲಿ ಚಾಂಪಿಯನ್ ಕೆಕೆಆರ್​ಗೆ ಟೂರ್ನಿಯಲ್ಲಿ 2ನೇ ಸೋಲು
Image
ಚೊಚ್ಚಲ ಪಂದ್ಯದಲ್ಲೇ 4 ವಿಕೆಟ್; ಅಶ್ವನಿ ವೇಗಕ್ಕೆ ತತ್ತರಿಸಿದ ಕೆಕೆಆರ್
Image
ಅರ್ಧದಷ್ಟು ಐಪಿಎಲ್​ಗೆ ಬುಮ್ರಾ ಅಲಭ್ಯ..! ಮುಂದಿನ ಕಥೆ ಏನು?

Hardik Pandya: ಪಂದ್ಯ ಮುಗಿದ ಬಳಿಕ ಮುಂಬೈ ಬಸ್ ಏರಿದ ಹಾರ್ದಿಕ್ ಪಾಂಡ್ಯ ಹೊಸ ಗರ್ಲ್ ಫ್ರೆಂಡ್: ವಿಡಿಯೋ ನೋಡಿ

ಪಂದ್ಯದಲ್ಲಿ ಏನಾಯಿತು?:

ಎಡಗೈ ವೇಗಿ ಅಶ್ವನಿ ಕುಮಾರ್ (ಚೊಚ್ಚಲ ಪಂದ್ಯದಲ್ಲಿ ನಾಲ್ಕು ವಿಕೆಟ್) ಮತ್ತು ರಯಾನ್ ರಿಕಲ್ಟನ್ (41 ಎಸೆತಗಳಲ್ಲಿ ಅಜೇಯ 62) ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಪಂಜಾಬ್‌ನ 23 ವರ್ಷದ ಅಶ್ವಿನ್, ತಮ್ಮ ಮೊದಲ ಐಪಿಎಲ್ ಪಂದ್ಯದಲ್ಲೇ 24 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದರು. ಈ ಋತುವಿನಲ್ಲಿ ಮೊದಲ ಬಾರಿಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಆಡುತ್ತಿರುವ ಮುಂಬೈ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 16.2 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್ ಮಾಡಿತು, ಇದು ಈ ಋತುವಿನಲ್ಲಿ ಅವರ ಅತ್ಯಂತ ಕಡಿಮೆ ಸ್ಕೋರ್ ಆಗಿದೆ. ಇದಕ್ಕೆ ಉತ್ತರವಾಗಿ, ಈ ಋತುವಿನಲ್ಲಿ ಮುಂಬೈ ತಂಡವನ್ನು ಸೇರಿಕೊಂಡ ದಕ್ಷಿಣ ಆಫ್ರಿಕಾದ ರಿಕಲ್ಟನ್, 41 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಐದು ಸಿಕ್ಸರ್‌ಗಳ ಸಹಾಯದಿಂದ ಅಜೇಯ 62 ರನ್ ಗಳಿಸಿ ತಂಡದ ಜಯಕ್ಕೆ ಕಾರಣರಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ