Gautam Gambhir: ಟೀಮ್ ಇಂಡಿಯಾದಲ್ಲಿ ಈತ ಇನ್ನೂ ಸ್ಥಾನ ಪಡೆದಿರುವುದು ಅದೃಷ್ಟವೇ ಸರಿ ಎಂದ ಗೌತಮ್ ಗಂಭೀರ್

Ajinkya Rahane: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಭಾರತದ ಪರ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಬೇಕು ಎಂದಿರುವ ಗೌತಮ್ ಗಂಭೀರ್ ತಂಡದಲ್ಲಿ ಅಜಿಂಕ್ಯ ರಹಾನೆ ಈಗಲೂ ಸ್ಥಾನ ಪಡೆದುಕೊಂಡಿರುವುದು ಆತನ ಅದೃಷ್ಟ ಎಂದು ಹೇಳಿದ್ದಾರೆ.

Gautam Gambhir: ಟೀಮ್ ಇಂಡಿಯಾದಲ್ಲಿ ಈತ ಇನ್ನೂ ಸ್ಥಾನ ಪಡೆದಿರುವುದು ಅದೃಷ್ಟವೇ ಸರಿ ಎಂದ ಗೌತಮ್ ಗಂಭೀರ್
Gautam Gambhir and Ajinkya Rahane
Follow us
TV9 Web
| Updated By: Vinay Bhat

Updated on: Nov 23, 2021 | 7:27 AM

ಭಾರತ ಕ್ರಿಕೆಟ್ ತಂಡ ಸದ್ಯ ನ್ಯೂಜಿಲೆಂಡ್ (India vs New Zealand) ವಿರುದ್ಧದ ಸರಣಿ ಆಡುತ್ತಿದೆ. ಈಗಾಗಲೇ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ (IND vs NZ T20I Series) 3-0 ಅಂತರದಿಂದ ಕಿವೀಸ್ ಪಡೆಯ ಕಿವಿ ಹಿಂಡಿರುವ ಟೀಮ್ ಇಂಡಿಯಾ (Team India) ಈಗ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ನವೆಂಬರ್ 25 ರಿಂದ ಕಾನ್ಪುರದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಣ ಮೊದಲ ಟೆಸ್ಟ್ (India vs New Zealand Test) ಪಂದ್ಯ ಆರಂಭವಾಗಲಿದೆ. ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ (Virat Kohli) ವಿಶ್ರಾಂತಿ ಪಡೆದಿರುವ ಕಾರಣ ಭಾರತ ಟೆಸ್ಟ್‌ ತಂಡದ ನಾಯಕತ್ವದ ಜವಾಬ್ದಾರಿಯನ್ನು ಉಪನಾಯಕ ಅಜಿಂಕ್ಯ ರಹಾನೆ (Ajinkya Rahane) ಹೊತ್ತಿದ್ದಾರೆ. ಮುಂಬೈನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್‌ಗೆ ವಿರಾಟ್‌ ತಂಡಕ್ಕೆ ಹಿಂದಿರುಗಿ ನಾಯಕತ್ವ ಪಡೆಯಲಿದ್ದಾರೆ. ಹೀಗಿರುವಾಗ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕತ್ವ ಪಡೆದಿರುವ ಅಜಿಂಕ್ಯ ರಹಾನೆ, ಭಾರತ ಟೆಸ್ಟ್‌ ತಂಡದಲ್ಲಿ ಉಳಿದಿರುವುದೇ ಅದೃಷ್ಟವೆಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್‌ (Gautam Gambhir) ಹೇಳಿದ್ದಾರೆ.

ಸ್ಟಾರ್‌ ಸ್ಪೋರ್ಟ್ಸ್‌ ವಾಹಿನಿಯ ಗೇಮ್‌ ಪ್ಲಾನ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗೌತಮ್‌ ಗಂಭೀತ್‌, ಮೊದಲ ಟೆಸ್ಟ್‌ಗೆ ತಮ್ಮ ಆಯ್ಕೆಯ ಟೀಮ್ ಇಂಡಿಯಾ ಇಲೆವೆನ್‌ ಕಟ್ಟುವ ವೇಳೆ ಅಜಿಂಕ್ಯ ರಹಾನೆ ಕಳಪೆ ಪ್ರದರ್ಶನದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

“ಭಾರತದ ಪರ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಬೇಕು. ನಾಲ್ಕನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಆಡಲಿದ್ದಾರೆ. ಹಾಗೂ ತಂಡದಲ್ಲಿ ಅಜಿಂಕ್ಯ ರಹಾನೆ ಈಗಲೂ ಸ್ಥಾನ ಪಡೆದುಕೊಂಡಿರುವುದು ಆತನ ಅದೃಷ್ಟ. ಈ ಅವಕಾಶವನ್ನು ಆತ ಸದುಪಯೋಗಪಡಿಸಿಕೊಳ್ಳಬೇಕು. ನಾಯಕತ್ವ ನಿಭಾಯಿಸುವ ಸಲುವಾಗಿ ಮಾತ್ರ ಅವರು ತಂಡದಲ್ಲಿದ್ದಾರೆ. ಈಗ ಸಿಕ್ಕಿರುವ ಅವಕಾಶವನ್ನು ಅವರು ಬಳಸಿಕೊಳ್ಳುತ್ತಾರೆಯೇ ಕಾದು ನೋಡಬೇಕು” ಎಂದು ಗೌತಮ್ ಗಂಭೀರ್ ಹೇಳಿಕೆ ನೀಡಿದ್ದಾರೆ.

ಅಷ್ಟೇ ಅಲ್ಲದೆ ಟೆಸ್ಟ್‌ ಸರಣಿಯ ಮೊದಲ ಪಂದ್ಯಕ್ಕೆ ವಿರಾಟ್‌ ಕೊಹ್ಲಿ ಅಲಭ್ಯರಾಗಿರುವ ಒಂದೇ ಕಾರಣಕ್ಕೆ ಅಜಿಂಕ್ಯ ರಹಾನೆ ಅವರನ್ನು ಭಾರತ ಟೆಸ್ಟ್‌ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ ಎಂದು ಗಂಭೀರ್‌ ಹೇಳಿದ್ದಾರೆ. ಅನುಭವಿ ಓಪನರ್‌ ರೋಹಿತ್‌ ಶರ್ಮಾ ಅವರಿಗೂ ಈ ಟೆಸ್ಟ್‌ ಸರಣಿಯಿಂದ ವಿಶ್ರಾಂತಿ ಕೊಡಲಾಗಿದೆ.

“ಹನುಮ ವಿಹಾರಿ ಆಯ್ಕೆಯಾಗದೇ ಇರುವುದು ನನಗೆ ಅಚ್ಚರಿ ತಂದಿದೆ. ಅಂತರರಾಷ್ಟ್ರೀಯ ಕ್ರಿಕೆಟ್‌ ಆಡುವುದಕ್ಕಿಂತಲೂ ಅಭ್ಯಾಸ ಬೇಕೆ? ಅರ್ಥವಿಲ್ಲದೆ ಅವರನ್ನು ಭಾರತ ‘ಎ’ ತಂಡದೊಂದಿಗೆ ದಕ್ಷಿಣ ಆಫ್ರಿಕಾಕ್ಕೆ ಕಳುಹಿಸಲಾಗಿದೆ. ಮುಂದಿನ ದಿನಗಳಲ್ಲಿ ರಹಾನೆ ಸ್ಥಾನದಲ್ಲಿ ಅವರು ಆಡುವುದು ಖಚಿತ. ಆದರೆ, ಈ ಸರಣಿಯಲ್ಲಿ ಅವರು ಭಾರತ ತಂಡದಲ್ಲಿ ಇಲ್ಲ,” ಎಂದಿದ್ದಾರೆ.

ಅಜಿಂಕ್ಯ ರಹಾನೆ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದರೂ ಸಹ ಓರ್ವ ಆಟಗಾರನಾಗಿ ಹಲವಾರು ತಿಂಗಳುಗಳಿಂದ ಕಳಪೆ ಫಾರ್ಮ್ ಎದುರಿಸುತ್ತಿದ್ದಾರೆ. ಕಳೆದ ಬಾರಿಯ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ರಹಾನೆ ನಾಯಕತ್ವದ ಟೀಮ್ ಇಂಡಿಯಾ ಮಣ್ಣು ಮುಕ್ಕಿಸಿತ್ತು. ಈ ಸರಣಿಯಲ್ಲಿ ಇವರು ತಮ್ಮ ಕೊನೆಯ ಟೆಸ್ಟ್ ಶತಕವನ್ನು ಬಾರಿಸಿದ್ದರು. ಇದಾದ ನಂತರ ಇವರ ಬ್ಯಾಟ್​ನಿಂದ ಕೇವಲ ಒಂದೇ ಒಂದು ಅರ್ಧಶತಕ ಮಾತ್ರ ಬಂದಿದೆ.

SMAT 2021: ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್-ಬೌಲಿಂಗ್ ಪ್ರದರ್ಶನ ನೀಡಿದ್ದು ಯಾರು ಗೊತ್ತಾ?

(Ajinkya Rahane is pretty fortunate to be still part of the Indian squad said Gautam Gambhir)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ