AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ಗೆ ಗುಡ್ ಬೈ ಹೇಳಿದ ಅಜಿಂಕ್ಯ ರಹಾನೆ

Ajinkya Rahane IPL retirement: ಟೀಮ್ ಇಂಡಿಯಾ ಬ್ಯಾಟರ್ ಅಜಿಂಕ್ಯ ರಹಾನೆ ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​​ಗೆ ವಿದಾಯ ಹೇಳಿದ್ದರು. ಇದಾಗ್ಯೂ ಅವರು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂದುವರೆಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಐಪಿಎಲ್​ಗೆ ಗುಡ್ ಬೈ ಹೇಳಿರುವ ರಹಾನೆ ವಿದೇಶಿ ಲೀಗ್​ನತ್ತ ಮುಖ ಮಾಡಿದ್ದಾರೆ.

ಐಪಿಎಲ್​ಗೆ ಗುಡ್ ಬೈ ಹೇಳಿದ ಅಜಿಂಕ್ಯ ರಹಾನೆ
Ajinkya RahaneImage Credit source: IPL
ಝಾಹಿರ್ ಯೂಸುಫ್
|

Updated on: Aug 08, 2026 | 7:25 AM

Share

ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದ ಟೀಮ್ ಇಂಡಿಯಾದ ಮಾಜಿ ಆಟಗಾರ ಅಜಿಂಕ್ಯ ರಹಾನೆ, ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೇರಿದಂತೆ ಭಾರತೀಯ ಕ್ರಿಕೆಟ್‌ನ ಎಲ್ಲಾ ಫಾರ್ಮ್ಯಾಟ್‌ಗಳಿಗೂ ಅಧಿಕೃತವಾಗಿ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ಭಾರತೀಯ ಕ್ರಿಕೆಟ್‌ನಲ್ಲಿ ರಹಾನೆ ಯುಗಕ್ಕೆ ತೆರೆ ಬಿದ್ದಿದೆ.

ಕೆಲ ದಿನಗಳ ಹಿಂದೆಯಷ್ಟೇ 38 ವರ್ಷದ ಹಿರಿಯ ಆಟಗಾರ ರಹಾನೆ, ಸಾಮಾಜಿಕ ಜಾಲತಾಣದಲ್ಲಿ ಭಾವುಕ ವಿಡಿಯೋ ಒಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್​ ನಿವೃತ್ತಿ ನಿರ್ಧಾರವನ್ನು ಜಗತ್ತಿಗೆ ತಿಳಿಸಿದ್ದರು. ಈ ವಿಡಿಯೋಗೆ “ಕ್ಯಾಪ್ ನಂಬರ್ 278, ಸೈನಿಂಗ್ ಆಫ್” ಎಂಬ ಶೀರ್ಷಿಕೆ ನೀಡುವ ಮೂಲಕ ಅಭಿಮಾನಿಗಳಿಗೆ ಮತ್ತು ಬಿಸಿಸಿಐಗೆ ಧನ್ಯವಾದ ಅರ್ಪಿಸಿದ್ದರು. ಇದೀಗ ಐಪಿಎಲ್​ಗೂ ಗುಡ್ ಬೈ ಹೇಳಿ ವಿದೇಶಿ ಲೀಗ್​ನತ್ತ ಮುಖ ಮಾಡಿದ್ದಾರೆ.

ಕೆಕೆಆರ್ ತಂಡಕ್ಕೆ ಹೊಸ ನಾಯಕ:

ಅಜಿಂಕ್ಯ ರಹಾನೆ ತಮ್ಮ ಕೊನೆಯ ಐಪಿಎಲ್ ಸೀಸನ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ (KKR) ತಂಡವನ್ನು ಮುನ್ನಡೆಸಿದ್ದರು. ಇದೀಗ ಅವರು ದಿಢೀರ್ ಆಗಿ ಎಲ್ಲಾ ಮಾದರಿಯ ಭಾರತೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವುದರಿಂದ, ಮುಂಬರುವ ಐಪಿಎಲ್ ಸೀಸನ್‌ಗಾಗಿ ಹೊಸ ನಾಯಕನನ್ನು ಹುಡುಕಬೇಕಾದ ದೊಡ್ಡ ಜವಾಬ್ದಾರಿ ಕೆಕೆಆರ್ ಫ್ರಾಂಚೈಸಿ ಹೆಗಲಿಗೇರಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಕೆಕೆಆರ್ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ.

6 ತಂಡಗಳ ಪರ ಕಣಕ್ಕಿಳಿದಿದ್ದ ರಹಾನೆ:

ಅಜಿಂಕ್ಯ ರಹಾನೆ ತಮ್ಮ ಐಪಿಎಲ್​ ವೃತ್ತಿಜೀವನದಲ್ಲಿ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಅದರಲ್ಲಿ ಎರಡು ತಂಡಗಳ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದರು.

  • ಮುಂಬೈ ಇಂಡಿಯನ್ಸ್,
  • ರಾಜಸ್ಥಾನ್ ರಾಯಲ್ಸ್
  • ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್
  • ಡೆಲ್ಲಿ ಕ್ಯಾಪಿಟಲ್ಸ್
  • ಚೆನ್ನೈ ಸೂಪರ್ ಕಿಂಗ್ಸ್
  • ಕೊಲ್ಕತ್ತಾ ನೈಟ್ ರೈಡರ್ಸ್​.

ರಹಾನೆ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಗಳ ನಾಯಕನಾಗಿ ಕಣಕ್ಕಿಳಿದಿದ್ದರು. ಅದರಲ್ಲೂ ಕೆಕೆಆರ್ ತಂಡದ ನಾಯಕನಾಗಿಯೇ ಕೊನೆಯ ಐಪಿಎಲ್ ಪಂದ್ಯವಾಡಿ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್ ಬೈ ಹೇಳಿದ್ದಾರೆ.

ರಹಾನೆ ಐಪಿಎಲ್ ವೃತ್ತಿಜೀವನ:

  • ಒಟ್ಟು ಪಂದ್ಯಗಳು: 212
  • ಒಟ್ಟು ರನ್‌ಗಳು: 5,367
  • ಬ್ಯಾಟಿಂಗ್ ಸರಾಸರಿ: 30.15
  • ಶತಕ / ಅರ್ಧಶತಕ: 2 ಶತಕ ಹಾಗೂ 35 ಅರ್ಧಶತಕಗಳು

ವಿದೇಶಿ ಲೀಗ್‌ನತ್ತ ರಹಾನೆ!

ಭಾರತೀಯ ಕ್ರಿಕೆಟ್‌ಗೆ ವಿದಾಯ ಹೇಳುತ್ತಿದ್ದಂತೆಯೇ ಅಜಿಂಕ್ಯ ರಹಾನೆ ಅವರಿಗೆ ವಿದೇಶಿ ಲೀಗ್‌ಗಳಿಂದ ಭರ್ಜರಿ ಆಫರ್‌ಗಳು ಬರಲು ಆರಂಭಿಸಿವೆ. ಬಿಸಿಸಿಐ ನಿಯಮಾವಳಿಗಳ ಪ್ರಕಾರ ನಿವೃತ್ತರಾದ ಆಟಗಾರರು ವಿದೇಶಿ ಲೀಗ್‌ಗಳಲ್ಲಿ ಆಡಲು ಮುಕ್ತಾವಕಾಶವಿರುತ್ತದೆ. ಅದರಂತೆ, ಆಗಸ್ಟ್ 26 ರಿಂದ ಆರಂಭವಾಗಲಿರುವ ಚೊಚ್ಚಲ ಆವೃತ್ತಿಯ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್ (ETPL) ಟೂರ್ನಿಯಲ್ಲಿ ರಹಾನೆ ಅವರು ‘ಆಮ್‌ಸ್ಟರ್ಡ್ಯಾಮ್ ಫ್ಲೇಮ್ಸ್’ ತಂಡದ ಪರ ಪ್ರಮುಖ (ಮಾರ್ಕ್ಯೂ) ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ.

ಇದನ್ನೂ ಓದಿ: ಟೀಮ್ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್: ಹೊಸ ‘ಫಿಟ್​ನೆಸ್​ ಟೆಸ್ಟ್’ ಜಾರಿ!

ಆಸ್ಟ್ರೇಲಿಯಾದ ಮಾಜಿ ದಿಗ್ಗಜ ಸ್ಟೀವ್ ವಾ ಈ ತಂಡದ ಸಹ-ಮಾಲೀಕರಾಗಿದ್ದು, ಅಜಿಂಕ್ಯ ರಹಾನೆ ಅವರ ಲೀಡರ್‌ಶಿಪ್ ಗುಣವನ್ನು ಕೊಂಡಾಡಿದ್ದಾರೆ. ಅದರಂತೆ ರಹಾನೆ ಮುಂಬರುವ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

Follow Us
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ