AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Shami: ಮೊಹಮ್ಮದ್ ಶಮಿ ಕಂಬ್ಯಾಕ್ ಯಾವಾಗ? ಇಲ್ಲಿದೆ ಉತ್ತರ

Mohammed Shami: 2023ರ ಏಕದಿನ ವಿಶ್ವಕಪ್​ನಲ್ಲಿ ಕರಾರುವಾಕ್ ದಾಳಿ ಮೂಲಕ ಮೊಹಮ್ಮದ್ ಶಮಿ ಸಂಚಲನ ಸೃಷ್ಟಿಸಿದ್ದರು. 7 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದ ಶಮಿ ಒಟ್ಟು 24 ವಿಕೆಟ್ ಕಬಳಿಸುವ ಮೂಲಕ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದಾದ ಬಳಿಕ ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿಲ್ಲ.

Mohammed Shami: ಮೊಹಮ್ಮದ್ ಶಮಿ ಕಂಬ್ಯಾಕ್ ಯಾವಾಗ? ಇಲ್ಲಿದೆ ಉತ್ತರ
Shami
ಝಾಹಿರ್ ಯೂಸುಫ್
|

Updated on: Jul 22, 2024 | 1:53 PM

Share

ಏಕದಿನ ವಿಶ್ವಕಪ್ ಬಳಿಕ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಪ್ರಮುಖ ವೇಗಿ ಮೊಹಮ್ಮದ್ ಶಮಿ ಕಂಬ್ಯಾಕ್ ಯಾವಾಗ? ಈ ಪ್ರಶ್ನೆಗೆ ಖುದ್ದು ಆಯ್ಕೆ ಸಮಿತಿ ಮುಖ್ಯ ಅಜಿತ್ ಅಗರ್ಕರ್ ಉತ್ತರ ನೀಡಿದ್ದಾರೆ. ಸೋಮವಾರ ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಗರ್ಕರ್ ಶಮಿ ಅವರ ಬಗ್ಗೆಗಿನ ಪ್ರಮುಖ ಅಪ್​ಡೇಟ್ ನೀಡಿದರು.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಮೊಹಮ್ಮದ್ ಶಮಿ ಅವರನ್ನು ಏಕೆ ಆಯ್ಕೆ ಮಾಡಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅಜಿತ್ ಅಗರ್ಕರ್, ಶಮಿ ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಅಲ್ಲದೆ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸವನ್ನು ಪ್ರಾರಂಭಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಸೆಪ್ಟೆಂಬರ್​ನಲ್ಲಿ ನಡೆಯಲಿರುವ ಬಾಂಗ್ಲಾದೇಶ್ ವಿರುದ್ಧದ ಸರಣಿ ಮೂಲಕ ಅವರು ಕಂಬ್ಯಾಕ್ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

2023ರ ಏಕದಿನ ವಿಶ್ವಕಪ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಶಮಿ, ವರ್ಲ್ಡ್ ಕಪ್ ಬಳಿಕ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಇದಕ್ಕೆ ಮುಖ್ಯ ಕಾರಣ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು. ಏಕದಿನ ವಿಶ್ವಕಪ್​ ವೇಳೆ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿದೆ.

ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು. ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಶಮಿ ಅಭ್ಯಾಸವನ್ನು ಶುರು ಮಾಡಿದ್ದಾರೆ.

ಸದ್ಯ ಮೊಹಮ್ಮದ್ ಶಮಿ ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದಾರೆ. ಅವರ ಫಿಟ್​ನೆಸ್ ಬಗ್ಗೆ ಎನ್​ಸಿಎ ಕಡೆಯಿಂದ ಕ್ಲೀನ್ ಚಿಟ್ ಸಿಕ್ಕರೆ, ಸೆಪ್ಟೆಂಬರ್ 19 ರಿಂದ ಶುರುವಾಗಲಿರುವ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಅವರು ಆಯ್ಕೆಯಾಗಲಿದ್ದಾರೆ. ಹೀಗಾಗಿ ಬಾಂಗ್ಲಾ ವಿರುದ್ಧದ ಸರಣಿಯೊಂದಿಗೆ ಶಮಿ ಅವರ ಕಂಬ್ಯಾಕ್ ಅನ್ನು ಎದುರು ನೋಡಬಹುದು ಎಂದು ಅಜಿತ್ ಅಗರ್ಕರ್ ತಿಳಿಸಿದ್ದಾರೆ.

ಇದನ್ನೂ ಓದಿ: RCB… ಅದೊಂದು ತಂಡವೇ ಅಲ್ಲ: ಮಾಜಿ ಆಟಗಾರ ಕಿಡಿ

ಶಮಿ ಮಿಂಚಿಂಗ್:

ಏಕದಿನ ವಿಶ್ವಕಪ್ 2023 ರಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಮೊಹಮ್ಮದ್ ಶಮಿ 24 ವಿಕೆಟ್​ ಕಬಳಿಸಿ ಮಿಂಚಿದ್ದರು. ಅಲ್ಲದೆ ಮೊಹಮ್ಮದ್ ಶಮಿ ಅವರ ಕರಾರುವಾಕ್ ದಾಳಿಯ ನೆರವಿನಿಂದ ಭಾರತ ತಂಡವು ಫೈನಲ್​ಗೆ ಪ್ರವೇಶಿಸಿತ್ತು ಎಂದರೆ ತಪ್ಪಾಗಲಾರದು. ಇದಾಗ್ಯೂ ಫೈನಲ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿ ಏಕದಿನ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳುವ ಅವಕಾಶ ಕೈಚೆಲ್ಲಿಕೊಂಡಿತ್ತು. ಆ ಬಳಿಕ ಭಾರತ ತಂಡದಿಂದ ಹೊರಗುಳಿದಿರುವ ಶಮಿ ಟೆಸ್ಟ್ ಸರಣಿಯ ಮೂಲಕ ಮತ್ತೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?