AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್‌ಗೆ ತಂಡವನ್ನು ಆಯ್ಕೆ ಮಾಡಿದ ಅಜಿತ್ ಅಗರ್ಕರ್​ಗೆ ಭರ್ಜರಿ ಗಿಫ್ಟ್ ನೀಡಿದ ಬಿಸಿಸಿಐ

Ajit Agarkar's BCCI Contract Extended: ಬಿಸಿಸಿಐ, 2025ರ ಏಷ್ಯಾಕಪ್‌ಗೆ ತಂಡವನ್ನು ಆಯ್ಕೆ ಮಾಡಿದ ಎರಡು ದಿನಗಳ ಬಳಿಕ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರ ಒಪ್ಪಂದವನ್ನು ಜೂನ್ 2026ರವರೆಗೆ ವಿಸ್ತರಿಸಿದೆ. ಅವರ ನೇತೃತ್ವದಲ್ಲಿ ಭಾರತ ತಂಡ ಅನೇಕ ಗೆಲುವುಗಳನ್ನು ಸಾಧಿಸಿದೆ. ಆದರೆ, ಆಯ್ಕೆ ಸಮಿತಿಯ ಸದಸ್ಯ ಶರತ್ ಅವರನ್ನು ಹುದ್ದೆಯಿಂದ ತೆಗೆದುಹಾಕುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಏಷ್ಯಾಕಪ್‌ಗೆ ತಂಡವನ್ನು ಆಯ್ಕೆ ಮಾಡಿದ ಅಜಿತ್ ಅಗರ್ಕರ್​ಗೆ ಭರ್ಜರಿ ಗಿಫ್ಟ್ ನೀಡಿದ ಬಿಸಿಸಿಐ
Ajit Agarkar
ಪೃಥ್ವಿಶಂಕರ
|

Updated on:Sep 04, 2025 | 5:42 PM

Share

2025 ರ ಏಷ್ಯಾಕಪ್‌ಗೆ (Asia Cup 2025) ಟೀಂ ಇಂಡಿಯಾವನ್ನು ಆಯ್ಕೆ ಮಾಡಿದ ಎರಡು ದಿನಗಳ ಬಳಿಕ ಆಯ್ಕೆ ಮಂಡಳಿಯ ಮುಖ್ಯಸ್ಥ ಅಜಿತ್ ಅಗರ್ಕರ್​ಗೆ ( Ajit Agarkar) ಬಿಸಿಸಿಐ (BCCI) ವಿಶೇಷ ಉಡುಗೊರೆಯನ್ನು ನೀಡಿದೆ. ವಾಸ್ತವವಾಗಿ ಅಜಿತ್ ಅಗರ್ಕರ್ ಅವರನ್ನು 2023 ರ ಜೂನ್​ನಲ್ಲಿ ಭಾರತ ತಂಡದ ಮುಖ್ಯ ಆಯ್ಕೆದಾರರನ್ನಾಗಿ ನೇಮಿಸಲಾಯಿತು. ಅದರಂತೆ ಅವರ ಅಧಿಕಾರಾವಧಿ 2 ವರ್ಷಗಳಾಗಿತ್ತು. ಆದರೆ ಇದೀಗ ಅಜಿತ್ ಅವರ ಅಧಿಕಾರಾವಧಿಯನ್ನು ಜೂನ್ 2026 ರವರೆಗೆ ವಿಸ್ತರಿಸಲಾಗಿದೆ. ಅಜಿತ್ ಅವರ ಆಯ್ಕೆಯಡಿಯಲ್ಲಿ, ಭಾರತ ತಂಡವು 2024 ರ ಟಿ20 ವಿಶ್ವಕಪ್ ಮತ್ತು 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತು. ಹೀಗಾಗಿ ಅಜಿತ್ ಅವರ ಅಧಿಕಾರಾವಧಿಯನ್ನು ವಿಸ್ತರಿಸಲು ಬಿಸಿಸಿಐ ಮುಂದಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಜಿತ್ ಅಧಿಕಾರಾವಧಿ ವಿಸ್ತರಣೆ

ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಅಗರ್ಕರ್ ಅವರ ಒಪ್ಪಂದವನ್ನು ಇಂಡಿಯನ್ ಪ್ರೀಮಿಯರ್ ಲೀಗ್ 2025 ಕ್ಕೂ ಮೊದಲು ವಿಸ್ತರಿಸಲಾಗಿತ್ತು. ಈ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಮಾಹಿತಿ ನೀಡಿರುವ ಬಿಸಿಸಿಐ ಅಧಿಕಾರಿಯೊಬ್ಬರು, ‘ ಅಜಿತ್ ಅವರ ಅಧಿಕಾರಾವಧಿಯಲ್ಲಿ, ಭಾರತ ತಂಡವು ಅನೇಕ ಪ್ರಶಸ್ತಿಗಳನ್ನು ಗೆದ್ದಿದಲ್ಲದೆ, ಟೆಸ್ಟ್ ಮತ್ತು ಟಿ20 ಅಂತರರಾಷ್ಟ್ರೀಯ ತಂಡಗಳಲ್ಲಿ ಬದಲಾವಣೆಗಳನ್ನು ಕಂಡಿತು. ಹೀಗಾಗಿ ಬಿಸಿಸಿಐ, ಅಜಿತ್ ಅವರ ಒಪ್ಪಂದವನ್ನು ಜೂನ್ 2026 ರವರೆಗೆ ವಿಸ್ತರಿಸಿದೆ. ಕೆಲವು ತಿಂಗಳ ಹಿಂದೆಯೇ ಈ ಪ್ರಸ್ತಾಪವನ್ನು ಅಜಿತ್ ಮುಂದಿಡಲಾಗಿತ್ತು ಎಂದು ಹೇಳಿದ್ದಾರೆ.

ಒಂದು ವರ್ಷ ಅಧಿಕಾರ ಹೆಚ್ಚುವರಿಯಾಗಿ ಪಡೆದಿರುವ ಅಜಿತ್ ಅಗರ್ಕರ್ ಈಗ ಮತ್ತೊಂದು ದೊಡ್ಡ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ. 2025 ರ ಏಷ್ಯಾಕಪ್ ನಂತರ, ಮುಂದಿನ ವರ್ಷ ಅಂದರೆ 2026 ರಲ್ಲಿ ಟಿ20 ವಿಶ್ವಕಪ್ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಪಂದ್ಯಾವಳಿಯ ವೇಳಾಪಟ್ಟಿ ಇನ್ನೂ ಬಂದಿಲ್ಲ ಆದರೆ ಆ ಐಸಿಸಿ ಕಾರ್ಯಕ್ರಮವನ್ನು ಫೆಬ್ರವರಿ-ಮಾರ್ಚ್‌ನಲ್ಲಿ ನಡೆಸಬಹುದು ಎಂದು ಹೇಳಲಾಗುತ್ತಿದೆ. ಅಧಿಕಾರಾವಧಿ ವಿಸ್ತರಣೆಯ ನಂತರ, ಅಜಿತ್ ಅಗರ್ಕರ್ ಆ ಪಂದ್ಯಾವಳಿಗೆ ಭಾರತೀಯ ತಂಡವನ್ನು ಆಯ್ಕೆ ಮಾಡುವುದನ್ನು ಸಹ ಕಾಣಬಹುದು.

Asia Cup 2025: ಏಷ್ಯಾಕಪ್‌ನಲ್ಲಿ ಭಾರತದ ಪಂದ್ಯಗಳು ಯಾವ್ಯಾವ ದಿನ ಎಷ್ಟು ಗಂಟೆಗೆ ಆರಂಭವಾಗಲಿವೆ?

ಶರತ್​ಗೆ ಹುದ್ದೆಯಿಂದ ಕೋಕ್​?

ಟೀಂ ಇಂಡಿಯಾದ ಪ್ರಸ್ತುತ ಆಯ್ಕೆ ಸಮಿತಿಯಲ್ಲಿ ಅಗರ್ಕರ್, ಎಸ್.ಎಸ್. ದಾಸ್, ಸುಬ್ರೋಟೊ ಬ್ಯಾನರ್ಜಿ, ಅಜಯ್ ರಾತ್ರ ಮತ್ತು ಎಸ್. ಶರತ್ ಇದ್ದಾರೆ. ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ವಾರ್ಷಿಕ ಸಾಮಾನ್ಯ ಸಭೆಯ ನಂತರ ಆಯ್ಕೆ ಸಮಿತಿಯಲ್ಲಿ ಕೆಲವು ಬದಲಾವಣೆಗಳಾಗುತ್ತವೆ ಎಂದು ವರದಿಯಾಗಿದೆ. ಸೆಪ್ಟೆಂಬರ್ 2021 ರಲ್ಲಿ, ಜೂನಿಯರ್ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಶರತ್, ಜನವರಿ 2023 ರಲ್ಲಿ ಹಿರಿಯ ಆಯ್ಕೆ ಸಮಿತಿಗೆ ಬಡ್ತಿ ಪಡೆದಿದ್ದರು. ಇದೀಗ ಅವರು ನಾಲ್ಕು ವರ್ಷಗಳನ್ನು ಪೂರ್ಣಗೊಳಿಸಲಿದ್ದಾರೆ. ವರದಿಯ ಪ್ರಕಾರ, ಮಂಡಳಿಯು ಅವರನ್ನು ಈ ಹುದ್ದೆಯಿಂದ ಕೆಳಗಿಳಿಸಿ ಬೇರೆಯವರಿಗೆ ಅವಕಾಶ ನೀಡಲಿದೆ ಎಂದು ವರದಿಯಾಗಿದೆ.

ಅಜಿತ್ ಅಗರ್ಕರ್ ನೇತೃತ್ವದಲ್ಲಿ ಇತ್ತೀಚೆಗಷ್ಟೇ 2025 ರ ಏಷ್ಯಾಕಪ್‌ಗಾಗಿ ಭಾರತ ತಂಡವನ್ನು ಘೋಷಿಸಲಾಯಿತು. ಆ ಪ್ರಕಾರ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ. ಈ ಪಂದ್ಯಾವಳಿ ಸೆಪ್ಟೆಂಬರ್ 9 ರಿಂದ ಪ್ರಾರಂಭವಾಗುತ್ತಿದ್ದು, ಇದರ ಫೈನಲ್ ಪಂದ್ಯ ಸೆಪ್ಟೆಂಬರ್ 28 ರಂದು ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:18 pm, Thu, 21 August 25

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ