AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾದ ಮತ್ತಿಬ್ಬರು ಕ್ರಿಕೆಟಿಗರಿಗೆ DSP ಹುದ್ದೆ..!

Akash Deep and Mukesh Kumar Appointed DSPs in Bihar Police: ಬಿಹಾರ ಸರ್ಕಾರ ಟೀಂ ಇಂಡಿಯಾದ ವೇಗಿಗಳಾದ ಆಕಾಶ್ ದೀಪ್ ಮತ್ತು ಮುಖೇಶ್ ಕುಮಾರ್ ಅವರನ್ನು ಡಿಎಸ್‌ಪಿ ಹುದ್ದೆಗೆ ನೇಮಿಸಿದೆ. ಕ್ರೀಡಾ ಕೋಟಾದ ಅಡಿಯಲ್ಲಿ ಈ ನೇಮಕಾತಿ ನಡೆದಿದೆ. ಇವರಿಬ್ಬರ ಸೇರ್ಪಡೆಯೊಂದಿಗೆ ಡಿಎಸ್‌ಪಿ ಹುದ್ದೆಗೇರಿದ ಟೀಂ ಇಂಡಿಯಾ ಕ್ರಿಕೆಟಿಗರ ಸಂಖ್ಯೆ 8ಕ್ಕೆ ಏರಿದೆ. ಈ ಹುದ್ದೆಯು ಗಣನೀಯ ವೇತನ ಮತ್ತು ಸೌಲಭ್ಯಗಳನ್ನು ಒಳಗೊಂಡಿದೆ. ಭಾರತೀಯ ಕ್ರಿಕೆಟ್‌ನಲ್ಲಿ ಅವರ ಸಾಧನೆಗಳನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ, ಇನ್ನು ಮುಂದೆ ಅವರು ಬಿಹಾರ ಪೊಲೀಸ್ ಸೇವೆಗೆ ಕೊಡುಗೆ ನೀಡಲಿದ್ದಾರೆ.

ಟೀಂ ಇಂಡಿಯಾದ ಮತ್ತಿಬ್ಬರು ಕ್ರಿಕೆಟಿಗರಿಗೆ DSP ಹುದ್ದೆ..!
Mukesh, AkashImage Credit source: PTI
ಪೃಥ್ವಿಶಂಕರ
|

Updated on:Jun 22, 2026 | 5:05 PM

Share

ಟೀಂ ಇಂಡಿಯಾದ ಮತ್ತಿಬ್ಬರು ಕ್ರಿಕೆಟಿಗರು ಡಿಎಸ್​ಪಿ (DSP) ಹುದ್ದೆಗೇರಿದ್ದಾರೆ. ಟೀಂ ಇಂಡಿಯಾದಲ್ಲಿ ಆಡಿದ ಇಬ್ಬರು ಯುವ ವೇಗಿಗಳಾದ ಆಕಾಶ್ ದೀಪ್ (Akash Deep) ಹಾಗೂ ಮುಖೇಶ್ ಕುಮಾರ್ (Mukesh Kumar)​ ಅವರನ್ನು ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಉಪ ವರಿಷ್ಠಾಧಿಕಾರಿ ಹುದ್ದೆಗೆ ನೇರವಾಗಿ ನೇಮಕ ಮಾಡಲು ಬಿಹಾರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇತ್ತೀಚೆಗೆ ನಡೆದ ಸಂಪುಟ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಮೂಲಕ ಡಿಎಸ್​ಪಿ ಹುದ್ದೆಗೇರಿದ ಟೀಂ ಇಂಡಿಯಾ ಕ್ರಿಕೆಟಿಗರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇವರಿಬ್ಬರಿಗೂ ಮೊದಲು ಹರ್ಭಜನ್ ಸಿಂಗ್, ಮೊಹಮ್ಮದ್ ಸಿರಾಜ್, ದೀಪ್ತಿ ಶರ್ಮಾ, ಜೋಗಿಂದರ್ ಶರ್ಮಾ, ರಿಚಾ ಘೋಷ್, ಹರ್ಮನ್​ಪ್ರೀತ್​ ಕೌರ್ ಈ ಹುದ್ದೆಯನ್ನು ಅಲಂಕರಿಸಿದ್ದರು.

ಕ್ರೀಡಾ ಕೋಟಾದಡಿಯಲ್ಲಿ ಡಿಎಸ್​ಪಿ ಹುದ್ದೆ

ಬಿಹಾರ ಸರ್ಕಾರ ಆಕಾಶ್ ದೀಪ್ ಮತ್ತು ಮುಖೇಶ್ ಕುಮಾರ್ ಅವರನ್ನು ಕ್ರೀಡಾ ಕೋಟಾದಡಿಯಲ್ಲಿ ಡಿಎಸ್‌ಪಿ ನೇಮಕಾತಿಗಳಿಗೆ ಶಿಫಾರಸು ಮಾಡಿದೆ. ಭಾರತೀಯ ಕ್ರಿಕೆಟ್‌ನಲ್ಲಿ ಅವರ ಸಾಧನೆಗಳನ್ನು ಗುರುತಿಸಿ ಬಿಹಾರದ ಈ ಇಬ್ಬರು ಆಟಗಾರರನ್ನು ಡಿಎಸ್‌ಪಿಗಳಾಗಿ ನೇಮಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಾಮಾನ್ಯ ಆಡಳಿತ ಇಲಾಖೆಯು ತನ್ನ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಗೃಹ ಇಲಾಖೆಗೆ ಕಳುಹಿಸಿದೆ.

ಮುಖೇಶ್, ಆಕಾಶ್ ಪ್ರದರ್ಶನ

ಕಳೆದ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಚಿನ್ನದ ಪದಕ ಗೆಲ್ಲುವಲ್ಲಿ ಮುಖೇಶ್ ಕುಮಾರ್ ಮತ್ತು ಆಕಾಶ್ ದೀಪ್ ಪ್ರಮುಖ ಪಾತ್ರವಹಿಸಿದ್ದರು. ಇವರಿಬ್ಬರು ರೆಡ್-ಬಾಲ್ ಮತ್ತು ವೈಟ್-ಬಾಲ್ ಕ್ರಿಕೆಟ್ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಮುಖೇಶ್ ಕುಮಾರ್ ಭಾರತದ ಪರ ಇದುವರೆಗೆ 27 ಅಂತರರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, ಇದರಲ್ಲಿ ಅವರು 32 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದರಲ್ಲಿ 3 ಟೆಸ್ಟ್‌ ಪಂದ್ಯಗಳು, 17 ಟಿ20ಪಂದ್ಯಗಳು ಮತ್ತು 7 ಏಕದಿನ ಪಂದ್ಯಗಳು ಸೇರಿವೆ.

ಇತ್ತ ಆಕಾಶ್ ದೀಪ್ ಇದುವರೆಗೆ ರೆಡ್-ಬಾಲ್ ಕ್ರಿಕೆಟ್‌ನಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸಿದ್ದು, ಇಲ್ಲಿಯವರೆಗೆ 10 ಟೆಸ್ಟ್‌ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 28 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದರಲ್ಲಿ ಇನ್ನಿಂಗ್ಸ್‌ವೊಂದರಲ್ಲಿ 99 ರನ್‌ಗಳಿಗೆ 6 ವಿಕೆಟ್‌ಗಳನ್ನು ಕಬಳಿಸಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಆಕಾಶ್ ದೀಪ್ ಈ ಹಿಂದೆ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದರು ಎಂಬುದು ಗಮನಿಸಬೇಕಾಗದ ಸಂಗತಿಯಾಗಿದೆ.

ಇಬ್ಬರಿಗೆ ಸಿಗುವ ವೇತನವೆಷ್ಟು?

ಡಿಎಸ್ಪಿ ಹುದ್ದೆಯನ್ನು ಬಿಹಾರ ಸರ್ಕಾರದ ಗೆಜೆಟೆಡ್ ಹುದ್ದೆ ಎಂದು ಪರಿಗಣಿಸಲಾಗುತ್ತದೆ. ಪ್ರಸ್ತುತ ವೇತನ ರಚನೆಯ ಪ್ರಕಾರ, ಡಿಎಸ್ಪಿಗಳು ಏಳನೇ ವೇತನ ಆಯೋಗದ ಅಡಿಯಲ್ಲಿ ವೇತನ ಮಟ್ಟ 9 ರ ಪ್ರಯೋಜನಗಳನ್ನು ಪಡೆಯುತ್ತಾರೆ. ಮೂಲ ವೇತನವು ತಿಂಗಳಿಗೆ ಸುಮಾರು ₹53,100 ರಿಂದ ಪ್ರಾರಂಭವಾಗುತ್ತದೆ, ಇದು ವಿವಿಧ ಭತ್ಯೆಗಳನ್ನು ಸೇರಿಸಿದ ನಂತರ ಗಮನಾರ್ಹವಾಗಿ ಹೆಚ್ಚಾಗುತ್ತದೆ. ಇದರಲ್ಲಿ ಸರ್ಕಾರಿ ವಸತಿ, ವಾಹನ ಸೌಲಭ್ಯ, ಭದ್ರತಾ ಸಿಬ್ಬಂದಿ, ವೈದ್ಯಕೀಯ ಸೌಲಭ್ಯಗಳು ಮತ್ತು ಇತರ ಆಡಳಿತಾತ್ಮಕ ಸೌಲಭ್ಯಗಳು ಸೇರಿವೆ. ನೇಮಕಾತಿಯ ನಂತರ, ಆಕಾಶ್ ದೀಪ್ ಮತ್ತು ಮುಖೇಶ್ ಕುಮಾರ್ ಬಿಹಾರ ಪೊಲೀಸ್ ಸೇವೆಯ ಅಧಿಕಾರಿಗಳಾಗಿ ಸೇವೆ ಸಲ್ಲಿಸಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Mon, 22 June 26

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ