VIDEO: ಕಿಂಗ್ ಕೊಹ್ಲಿಯ ಬ್ಯಾಟ್​ನಲ್ಲಿ ಆಕಾಶ್ ದೀಪ್ ಆರ್ಭಟ: ಇಲ್ಲಿದೆ ವಿಡಿಯೋ

|

Updated on: Oct 01, 2024 | 12:27 PM

India vs Bangladesh 2nd Test: ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆಡಿದ ಬಾಂಗ್ಲಾದೇಶ್ ತಂಡವನ್ನು 233 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್​ಗಳು ಯಶಸ್ವಿಯಾಗಿದ್ದರು. ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಕೇವಲ 33.4 ಓವರ್​ಗಳಲ್ಲಿ 285/9 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು.

VIDEO: ಕಿಂಗ್ ಕೊಹ್ಲಿಯ ಬ್ಯಾಟ್​ನಲ್ಲಿ ಆಕಾಶ್ ದೀಪ್ ಆರ್ಭಟ: ಇಲ್ಲಿದೆ ವಿಡಿಯೋ
Akash Deep - Virat Kohli
Follow us on

ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಆಕಾಶ್ ದೀಪ್ ಬ್ಯಾಟಿಂಗ್ ಮೂಲಕವೂ ಗಮನ ಸೆಳೆದಿದ್ದಾರೆ. ಅದು ಸಹ ವಿರಾಟ್ ಕೊಹ್ಲಿಯ ಬ್ಯಾಟ್​ನಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸುವ ಮೂಲಕ ಎಂಬುದು ವಿಶೇಷ. ಅಂದರೆ ಈ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಕಾಶ್ ದೀಪ್ ವಿರಾಟ್ ಕೊಹ್ಲಿಯ ಬ್ಯಾಟ್​ನೊಂದಿಗೆ ಆಗಮಿಸಿದ್ದರು.

ಹೀಗೆ ಕ್ರೀಸ್​ಗೆ ಬಂದ ಆಕಾಶ್ ದೀಪ್ ಶಕೀಬ್ ಅಲ್ ಹಸನ್ ಓವರ್​ನಲ್ಲಿ ಸತತ ಎರಡು ಸಿಕ್ಸ್​ಗಳನ್ನು ಬಾರಿಸಿದ್ದರು. ವಿಶೇಷ ಎಂದರೆ ಈ ಬ್ಯಾಟ್​ ಅನ್ನು ವಿರಾಟ್ ಕೊಹ್ಲಿ ಆಕಾಶ್ ದೀಪ್​ಗೆ ಉಡುಗೊರೆಯಾಗಿ ನೀಡಿದ್ದರು.

ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ಆಕಾಶ್ ದೀಪ್ ಜೊತೆಯಾಗಿ ಅಭ್ಯಾಸ ನಡೆಸಿದ್ದರು. ಈ ವೇಳೆ ರನ್ ಮೆಷಿನ್ ಖ್ಯಾತಿಯ ಕೊಹ್ಲಿ ಕಡೆಯಿಂದ ಎಂಆರ್​ಎಫ್ ಬ್ಯಾಟ್ ಅನ್ನು ಆಕಾಶ್ ದೀಪ್ ಗಿಫ್ಟ್ ಆಗಿ ಪಡೆದಿದ್ದರು.

ಇದೇ ಬ್ಯಾಟ್​ನೊಂದಿಗೆ 2ನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿದ ಆಕಾಶ್ ದೀಪ್ 5 ಎಸೆತಗಳಲ್ಲಿ 2 ಸಿಕ್ಸ್ ಸಿಡಿಸಿ 12 ರನ್ ಬಾರಿಸಿದ್ದರು. ಇದೀಗ ಕಿಂಗ್ ಕೊಹ್ಲಿಯ ಬ್ಯಾಟ್​ನಲ್ಲಿ ಆರ್ಭಟಿಸಿದ ಆಕಾಶ್ ದೀಪ್ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಆಕಾಶ್ ದೀಪ್ ಸಿಕ್ಸರ್ ವಿಡಿಯೋ:

ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ:

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆಡಿದ ಬಾಂಗ್ಲಾದೇಶ್ ತಂಡವನ್ನು 233 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್​ಗಳು ಯಶಸ್ವಿಯಾಗಿದ್ದರು. ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಕೇವಲ 33.4 ಓವರ್​ಗಳಲ್ಲಿ 285/9 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು.

ಭಾರತ ತಂಡವು ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಡಿಕ್ಲೇರ್ ಘೋಷಿಸಲು ಮುಖ್ಯ ಕಾರಣ ಈ ಪಂದ್ಯವು ಕೊನೆಯ ದಿನದಾಟದತ್ತ ಸಾಗಿರುವುದು. ಅದರಂತೆ ನಾಲ್ಕನೇ ದಿನದಾಟದಲ್ಲೇ ಡಿಕ್ಲೇರ್ ಘೋಷಿಸಿದ ಭಾರತ ತಂಡವು ಬಾಂಗ್ಲಾದೇಶ್ ತಂಡಕ್ಕೆ ದ್ವಿತೀಯ ಇನಿಂಗ್ಸ್ ಆಡಲು ಅನುವು ಮಾಡಿಕೊಂಡಿದೆ.

ಅದರಂತೆ 2ನೇ ಇನಿಂಗ್ಸ್ ಆಡಿದ ಬಾಂಗ್ಲಾದೇಶ್ ತಂಡವು ಕೇವಲ 146 ರನ್​ಗಳಿಗೆ ಆಲೌಟ್ ಆಗಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿ 52 ರನ್​ಗಳ ಮುನ್ನಡೆ ಹೊಂದಿದ್ದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 95 ರನ್​ಗಳ ಗುರಿ ಪಡೆದುಕೊಂಡಿದೆ. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಜಯವನ್ನು ನಿರೀಕ್ಷಿಸಬಹುದು.