Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್

Akash Deep: ಆಕಾಶ್​ ದೀಪ್ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದಾರೆ. ಆರ್​ಸಿಬಿ ಪರ ಈವರೆಗೆ 8 ಪಂದ್ಯಗಳನ್ನಾಡಿರುವ ಬಲಗೈ ವೇಗಿ ಒಟ್ಟು 7 ವಿಕೆಟ್ ಕಬಳಿಸಿದ್ದಾರೆ. ಇದೀಗ ಉತ್ತಮ ಫಾರ್ಮ್​ನಲ್ಲಿರುವ ಆಕಾಶ್ ದೀಪ್ ಅವರನ್ನು ಈ ಬಾರಿ ಆರ್​ಸಿಬಿ ರಿಟೈನ್ ಮಾಡಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

Follow us
ಝಾಹಿರ್ ಯೂಸುಫ್
|

Updated on: Sep 08, 2024 | 1:17 PM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಆಕಾಶ್ ದೀಪ್ ಮಾರಕ ಬೌಲಿಂಗ್ ಪ್ರದರ್ಶಿಸಿದ್ದಾರೆ. ಭಾರತ ಎ ತಂಡದ ಪರ ಕಣಕ್ಕಿಳಿದಿರುವ ಆಕಾಶ್ ದೀಪ್ ಎರಡು ಇನಿಂಗ್ಸ್​ಗಳಿಂದ ಒಟ್ಟು 9 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆಡಿದ ಭಾರತ ಬಿ ತಂಡವನ್ನು 321 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಭಾರತ ಎ ತಂಡದ ಬೌಲರ್​ಗಳು ಯಶಸ್ವಿಯಾಗಿದ್ದರು. ಈ ವೇಳೆ 27 ಓವರ್​ ಎಸೆದಿದ್ದ ಆಕಾಶ್ ದೀಪ್ 60 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದರು.

ಇದಾದ ಬಳಿಕ ಪ್ರಥಮ ಇನಿಂಗ್ಸ್ ಆಡಿದ ಭಾರತ ಎ ತಂಡವು 231 ರನ್​ಗಳಿಗೆ ಆಲೌಟ್ ಆಗಿದೆ. ಇದರ ಬೆನ್ನಲ್ಲೇ 90 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಶುರು ಮಾಡಿದ ಭಾರತ ಬಿ ತಂಡವನ್ನು 184 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಆಕಾಶ್ ದೀಪ್ ಯಶಸ್ವಿಯಾದರು. ದ್ವಿತೀಯ ಇನಿಂಗ್ಸ್​ನಲ್ಲೂ ಕರಾರುವಾಕ್ ದಾಳಿ ಸಂಘಟಿಸಿದ ಆಕಾಶ್ ದೀಪ್ 14 ಓವರ್​ಗಳಲ್ಲಿ 56 ರನ್ ನೀಡಿ 5 ವಿಕೆಟ್ ಉರುಳಿಸಿದರು. ಈ ಮೂಲಕ ದುಲೀಪ್ ಟ್ರೋಫಿಯ ಮೊದಲ ಪಂದ್ಯದಲ್ಲೇ 9 ವಿಕೆಟ್ ಕಬಳಿಸಿ ಆಯ್ಕೆಗಾರರ ಗಮನ ಸೆಳೆದಿದ್ದಾರೆ.

ಈ ಬಾರಿಯ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವಕಾಶ ಸಿಗಲಿದೆ. ಅದರಂತೆ ಇದೀಗ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ ಮುಶೀರ್ ಖಾನ್ 181 ರನ್ ಬಾರಿಸಿ ಮಿಂಚಿದರೆ, ಆಕಾಶ್ ದೀಪ್ 9 ವಿಕೆಟ್ ಕಬಳಿಸಿದ್ದಾರೆ. ಈ ಅದ್ಭುತ ಪ್ರದರ್ಶನವನ್ನು ಮುಂದಿನ ಪಂದ್ಯಗಳಲ್ಲೂ ಮುಂದುವರೆಸಿದ ಆರ್​ಸಿಬಿ ವೇಗಿ ಭಾರತ ತಂಡದಲ್ಲಿ ಸ್ಥಾನ ಪಡೆಯುವುದನ್ನು ನಿರೀಕ್ಷಿಸಬಹುದು.

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ