AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್ ಸೂಪರ್- 4 ವೇಳಾಪಟ್ಟಿ ಹೀಗಿದೆ

Asia Cup 2022 Schedule: ಹೆಸರೇ ಸೂಚಿಸುವಂತೆ ಸೂಪರ್-4 ನಲ್ಲಿ ನಾಲ್ಕು ತಂಡಗಳು ಸೆಣಸಲಿದೆ. ಇಲ್ಲಿ ರೌಂಡ್ ರಾಬಿನ್ ಮಾದರಿಯಲ್ಲಿ ಪಂದ್ಯಗಳನ್ನು ಆಡಲಾಗುತ್ತದೆ.

Asia Cup 2022: ಏಷ್ಯಾಕಪ್ ಸೂಪರ್- 4 ವೇಳಾಪಟ್ಟಿ ಹೀಗಿದೆ
Asia Cup 2022
TV9 Web
| Edited By: |

Updated on:Sep 01, 2022 | 3:59 PM

Share

Asia Cup 2022: ಏಷ್ಯಾಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 2 ಪಂದ್ಯಗಳಲ್ಲಿ ಜಯ ಸಾಧಿಸಿರುವ ಟೀಮ್ ಇಂಡಿಯಾ (Team India) ಹಾಗೂ ಅಫ್ಘಾನಿಸ್ತಾನ್ ತಂಡಗಳು ಸೂಪರ್-4 ಹಂತಕ್ಕೇರಿದೆ. ಇದಾಗ್ಯೂ ಸೂಪರ್-4 ಆಡಲಿರುವ ಮತ್ತೆರಡು ತಂಡಗಳಾವುವು ಎಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಅಂದರೆ ಗ್ರೂಪ್-A ಹಾಗೂ ಗ್ರೂಪ್-B ನಿಂದ ಎರಡು ತಂಡಗಳು ಇನ್ನಷ್ಟೇ ಅರ್ಹತೆ ಪಡೆಯಬೇಕಿದೆ. ಬಾಂಗ್ಲಾದೇಶ್-ಶ್ರೀಲಂಕಾ ನಡುವಣ ಮುಖಾಮುಖಿಯಲ್ಲಿ ಗೆಲ್ಲುವ ತಂಡ ಸೂಪರ್-4 ಹಂತಕ್ಕೇರುವುದು ಖಚಿತ. ಹಾಗೆಯೇ ಹಾಂಗ್ ಕಾಂಗ್ ವಿರುದ್ಧ ಪಾಕಿಸ್ತಾನ್ ಗೆದ್ದರೆ ಮುಂದಿನ ಹಂತಕ್ಕೇರಲಿದೆ.

ಮೇಲ್ನೋಟಕ್ಕೆ ಇಲ್ಲಿ ಪಾಕ್ ತಂಡವು ಬಲಿಷ್ಠವಾಗಿರುವುದರಿಂದ ಸೂಪರ್-4 ಆಡುವುದು ಖಚಿತ ಎಂದೇ ಹೇಳಬಹುದು. ಹಾಗೆಯೇ ಬಾಂಗ್ಲಾದೇಶ್, ಶ್ರೀಲಂಕಾ ತಂಡಗಳಲ್ಲಿ ಒಂದು ತಂಡವು ಅಂತಿಮ ರೌಂಡರ್​ಗೆ ಎಂಟ್ರಿ ಕೊಡಲಿದೆ.

ಹೇಗಿರಲಿದೆ ಸೂಪರ್-4 ಹಂತ:

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಹೆಸರೇ ಸೂಚಿಸುವಂತೆ ಸೂಪರ್-4 ನಲ್ಲಿ ನಾಲ್ಕು ತಂಡಗಳು ಸೆಣಸಲಿದೆ. ಇಲ್ಲಿ ರೌಂಡ್ ರಾಬಿನ್ ಮಾದರಿಯಲ್ಲಿ ಪಂದ್ಯಗಳನ್ನು ಆಡಲಾಗುತ್ತದೆ. ಅಂದರೆ ಯಾವುದೇ ಗ್ರೂಪ್ ಇರುವುದಿಲ್ಲ. ಬದಲಾಗಿ ಒಂದು ತಂಡವು ಉಳಿದ 3 ತಂಡಗಳ ವಿರುದ್ದ ಒಂದೊಂದು ಪಂದ್ಯಗಳನ್ನು ಆಡಲಿದೆ. ಇಲ್ಲೂ ಕೂಡ ಪಾಯಿಂಟ್ ಟೇಬಲ್​ ಇರಲಿದ್ದು, ಇದರಲ್ಲಿ ಮೊದಲ ಮತ್ತು 2ನೇ ಸ್ಥಾನ ಪಡೆಯುವ ತಂಡಗಳು ಫೈನಲ್​ ಪ್ರವೇಶಿಸಲಿದೆ. ಅಂದರೆ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಮತ್ತು ದ್ವಿತೀಯ ಸ್ಥಾನ ಪಡೆಯುವ ತಂಡಗಳೇ ಅಂತಿಮ ಹಣಾಹಣಿಯಲ್ಲಿ ಮುಖಾಮುಖಿಯಾಗಲಿದೆ.

ಭಾರತ-ಪಾಕ್ ಮತ್ತೆ ಮುಖಾಮುಖಿ:

ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ್ A ಗ್ರೂಪ್​ನಲ್ಲಿದೆ. ಈಗಾಗಲೇ ಗ್ರೂಪ್- A ನಿಂದ ಟೀಮ್ ಇಂಡಿಯಾ ಸೂಪರ್ 4 ಹಂತಕ್ಕೇರಿದೆ. ಇನ್ನು 2ನೇ ತಂಡವಾಗಿ ಪಾಕಿಸ್ತಾನ ತಂಡವು ಸೂಪರ್-4 ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಭಾರತ-ಪಾಕಿಸ್ತಾನ್ ಸೂಪರ್​-4 ನಲ್ಲಿ ಮತ್ತೆ ಮುಖಾಮುಖಿಯಾಗಲಿದೆ ಎಂದೇ ಹೇಳಬಹುದು. ಹಾಗೆಯೇ ಸೂಪರ್​-4 ಹಂತದ ಪಾಯಿಂಟ್ ಟೇಬಲ್​ನಲ್ಲಿ ಉಭಯ ತಂಡಗಳು ಮೊದಲೆರಡು ಸ್ಥಾನ ಪಡೆದರೆ, ಫೈನಲ್​ನಲ್ಲಿ ಮತ್ತೆ ಮುಖಾಮುಖಿಯಾಗಬಹುದು.

ಸೂಪರ್ 4 ಪಂದ್ಯಗಳು ಯಾವಾಗ ಶುರು?

ಸೂಪರ್-4 ಹಂತದ ಪಂದ್ಯಗಳು ಸೆಪ್ಟೆಂಬರ್ 3 ರಿಂದ ಆರಂಭವಾಗಲಿದೆ. ಈ ಪಂದ್ಯಗಳು ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ಮತ್ತು ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. ಈ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಹೀಗಿದೆ.

ಸೂಪರ್- 4 ವೇಳಾಪಟ್ಟಿ:

  1. ಸೆಪ್ಟೆಂಬರ್ 3 – ಅಫ್ಘಾನಿಸ್ತಾನ್ vs B2- ಶಾರ್ಜಾ
  2. ಸೆಪ್ಟೆಂಬರ್ 4 – ಭಾರತ vs A2- ದುಬೈ
  3. ಸೆಪ್ಟೆಂಬರ್ 6 – ಭಾರತ vs ಅಫ್ಘಾನಿಸ್ತಾನ್ – ದುಬೈ
  4. ಸೆಪ್ಟೆಂಬರ್ 7 – A2 vs B2- ದುಬೈ
  5. ಸೆಪ್ಟೆಂಬರ್ 8 – ಭಾರತ vs B2- ದುಬೈ
  6. ಸೆಪ್ಟೆಂಬರ್ 9 – B1 vs- A2- ದುಬೈ
  7. ಸೆಪ್ಟೆಂಬರ್ 11 – ಫೈನಲ್ ಪಂದ್ಯ- ದುಬೈ

Published On - 3:55 pm, Thu, 1 September 22

Follow Us
TV9 Web
TV9 Web

TV9 Kannada

Read More
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ