AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Womens World Cup Final: ಮಹಿಳಾ ವಿಶ್ವಕಪ್ ಫೈನಲ್: ಅಲಿಸಾ ಸ್ಫೋಟಕ ಬ್ಯಾಟಿಂಗ್: ಇಂಗ್ಲೆಂಡ್​ಗೆ 357 ರನ್ಸ್ ಟಾರ್ಗೆಟ್

Australia Women vs England Women: ವಿಕೆಟ್ ಕೀಪರ್ ಬ್ಯಾಟರ್ ಅಲಿಸಾ ಹೀಲಿ ಅವರ ದಾಖಲೆ 170 ರನ್ ಮತ್ತು, ರಚೆಲ್‌ ಹೇನ್ಸ್ ಮತ್ತು ಬೆತ್ ಮೂನೆ ಅವರ ಅರ್ಧಶತಕದ ನೆರವಿನಿಂದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಇಂಗ್ಲೆಂಡ್​ಗೆ ಗೆಲ್ಲಲು ಬರೋಬ್ಬರಿ 357 ರನ್​ಗಳ ಕಠಿಣ ಟಾರ್ಗೆಟ್ ನೀಡಿದೆ.

Womens World Cup Final: ಮಹಿಳಾ ವಿಶ್ವಕಪ್ ಫೈನಲ್: ಅಲಿಸಾ ಸ್ಫೋಟಕ ಬ್ಯಾಟಿಂಗ್: ಇಂಗ್ಲೆಂಡ್​ಗೆ 357 ರನ್ಸ್ ಟಾರ್ಗೆಟ್
Alyssa Healy AUSW vs ENGW CWC
TV9 Web
| Updated By: Vinay Bhat|

Updated on: Apr 03, 2022 | 11:49 AM

Share

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ (ICC Womens World Cup) ಟೂರ್ನಿಯು ಅಂತಿಮ ಘಟ್ಟ ತಲುಪಿದೆ. ಕ್ರಿಸ್ಟ್​​ಚರ್ಚ್​ನ ಹೇಗ್ಲೆ ಓವಲ್ ಮೈದಾನದಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ (Australia vs England) ವನಿತೆಯರ ನಡುವೆ ಫೈನಲ್ ಪಂದ್ಯ ನಡೆಯುತ್ತಿದೆ. ಈಗಾಗಲೇ ಬ್ಯಾಟಿಂಗ್ ಮುಗಿಸಿರುವ ಆಸ್ಟ್ರೇಲಿಯಾ ಮಹಿಳಾ ತಂಡ 50 ಓವರ್​ಗೆ ಬರೋಬ್ಬರಿ 356 ರನ್ ಸಿಡಿಸಿದೆ. ವಿಕೆಟ್ ಕೀಪರ್ ಬ್ಯಾಟರ್ ಅಲಿಸಾ ಹೀಲಿ (Alyssa Healy) ಅವರ ದಾಖಲೆ 170 ರನ್ ಮತ್ತು, ರಚೆಲ್‌ ಹೇನ್ಸ್ ಮತ್ತು ಬೆತ್ ಮೂನೆ ಅವರ ಅರ್ಧಶತಕದ ನೆರವಿನಿಂದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಇಂಗ್ಲೆಂಡ್​ಗೆ ಕಠಿಣ ಟಾರ್ಗೆಟ್ ನೀಡಿದೆ. ಟೂರ್ನಿಯಿಂದ ಹೊರಬೀಳುವ ಹಂತದಿಂದ ಪುಟಿದೆದ್ದ ಇಂಗ್ಲೆಂಡ್ ಈ ಬೆಟ್ಟದಂತಹ ಟಾರ್ಗೆಟ್ ಅನ್ನು ಬೆನ್ನಟ್ಟಿ ಕಪ್ ಎತ್ತಿ ಹಿಡಿಯುತ್ತಾ ಎಂಬುದು ನೋಡಬೇಕದೆ.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಆಸ್ಟ್ರೇಲಿಯಾ ಮಹಿಳಾ ತಂಡ ಬೊಂಬಾಟ್ ಆರಂಭ ಪಡೆದುಕೊಂಡಿತು. ಓಪನರ್​​ಗಳಾದ ಅಲಿಸಾ ಹೀಲಿ ಹಾಗೂ ರಚೆಲ್‌ ಹೇನ್ಸ್ ಭರ್ಜರಿ ರನ್ ಕಲೆಹಾಕಿದರು. ಇಂಗ್ಲೆಂಡ್ ಬೌಲರ್​ಗಳನ್ನು ಎಚ್ಚರಿಕೆಯಿಂದ ಎದುರಿಸಿದ ಈ ಜೋಡಿ ಮೊದಲ ವಿಕೆಟ್​ಗೆ 160 ರನ್​ಗಳ ಜೊತೆಯಾಟ ಆಡಿದರು. ರಚೆಲ್‌ ಹೇನ್ಸ್ 93 ಎಸೆತಗಳಲ್ಲಿ 68 ರನ್ ಗಳಿಸಿ ಔಟಾದರು. ನಂತರ ಹೀಲಿ ಜೊತೆಯಾದ ಬೆತ್ ಮೂನೆ ಮತ್ತೊಂದು ಅಮೋಘ ಇನ್ನಿಂಗ್ಸ್ ಕಟ್ಟಿದರು. ಅದರಲ್ಲೂ ಅಲಿಸಾ ಸ್ಫೋಟಕ ಆಟವಾಡಿದರು.

ಎದುರಾಳಿ ಬೌಲರ್​ಗಳ ಬೆಂಡೆತ್ತಿದ್ದ ಅಲಿಸಾ ಮೈದಾನದ ಮೂಲೆ ಮೂಲೆಗೆ ಬೌಂಡರಿ ಮೂಲಕ ಚೆಂಡನ್ನು ಅಟ್ಟಿ ಬೆವರಿಳಿಸಿದರು. ವಿಶ್ವಕಪ್ ಇತಿಹಾಸದಲ್ಲೇ ಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನ ತೋರಿದ ಅಲಿಸಾ ಕೇವಲ 138 ಎಸೆತಗಳಲ್ಲಿ 26 ಬೌಂಡರಿಯೊಂದಿಗೆ 170 ರನ್ ಚಚ್ಚಿದರು. ಕೊನೇ ಹಂತದಲ್ಲಿ ಮೂನೇ ಕೂಡ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಕೇವಲ 47 ಎಸೆತಗಳಲ್ಲಿ 62 ರನ್ ಸಿಡಿಸಿ ಔಟಾದರು. ಆಸ್ಟ್ರೇಲಿಯಾ ಮಹಿಳಾ ತಂಡ ಅಂತಿಮವಾಗಿ 50 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 356 ರನ್ ಗಳಿಸಿತು. ಇಂಗ್ಲೆಂಡ್ ಪರ ಆ್ಯನಿ ಶ್ರುಬ್​ಸೊಲೆ 3 ವಿಕೆಟ್ ಪಡೆದರು.

ಸದ್ಯ ಬೆಟ್ಟದಂತಹ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ 100 ರನ್​ಗೂ ಮೊದಲೇ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಓಪನರ್​ಗಳಾದ ಟಾಮಿ ಬ್ಯೂಮೊಂಟ್ (27)  ಹಾಗೂ ಡೆನಿಯಲ್ ವ್ಯಾಟ್ 4 ರನ್​ಗೆ ನಿರ್ಗಮಿಸಿದರು. ನಾಯಕಿ ಹೆದರ್ ನೈಟ್ ಕೂಡ 26 ರನ್​ಗೆ ಬ್ಯಾಟ್ ಕೆಳಗಿಟ್ಟಿದ್ದು ತಂಡ ಸೋಲಿನ ಸುಳಿಗೆ ಸಿಲುಕಿದೆ.

ಇದಕ್ಕೂ ಮುನ್ನ ಇಂಗ್ಲೆಂಡ್ ಲೀಗ್‌ ಹಂತದ ಆರಂಭದಲ್ಲಿ ಸತತ ಮೂರು ಪಂದ್ಯಗಳನ್ನು ಸೋತಿತ್ತು. ನಂತರ ಎಲ್ಲ ನಾಲ್ಕು ಪಂದ್ಯಗಳನ್ನು ಗೆದ್ದು ನಾಲ್ಕರ ಘಟ್ಟ ಪ್ರವೇಶಿಸಿತ್ತು. ಬಳಿಕ ಗುರುವಾರ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಇಂಗ್ಲೆಂಡ್ 137 ರನ್‌ಗಳಿಂದ ಮಣಿಸಿ ಫೈನಲ್​ಗೆ ಲಗ್ಗೆಯಿಟ್ಟಿತ್ತು. ಇತ್ತ ವೆಸ್ಟ್ ಇಂಡೀಸ್ ಎದುರು ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸಂಪೂರ್ಣ ಪಾರಮ್ಯ ಮೆರೆದಿದ ಆಸ್ಟ್ರೇಲಿಯಾ ತಂಡ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪ್ರವೇಶಿಸಿತ್ತು.

ಈ ವಿಶ್ವಕಪ್‌ನಲ್ಲಿ ಚಾಂಪಿಯನ್‌ ಆಗುವ ತಂಡಕ್ಕೆ ಕಳೆದ ಬಾರಿಗಿಂತ ದುಪ್ಪಟ್ಟು ಎಂದರೆ 1.32 ಮಿಲಿಯನ್‌ ಅಮೆರಿಕನ್‌ ಡಾಲರ್‌(ಸುಮಾರು 9.94 ಕೋಟಿ ರು.) ಬಹುಮಾನ ಸಿಗಲಿದೆ. ರನ್ನರ್‌ ಅಪ್‌ ತಂಡ 4.51 ಕೋಟಿ ರು. ಬಹುಮಾನ ಪಡೆಯಲಿದೆ.

IPL 2022: ಐಪಿಎಲ್ 2022 ಪಾಯಿಂಟ್ ಟೇಬಲ್​ನಲ್ಲಿ ದೊಡ್ಡ ಬದಲಾವಣೆ: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಕೈಯಲ್ಲಿದೆ?

Rishabh Pant: ಸೋಲಿಗೆ ಅಚ್ಚರಿಯ ಕಾರಣ ತಿಳಿಸಿದ ರಿಷಭ್ ಪಂತ್: ಪಂದ್ಯದ ಬಳಿಕ ಏನಂದ್ರು ಕೇಳಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ