AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

YSRCP ಗೆ ಕೈಕೊಟ್ಟು JSP ಕೈ ಹಿಡಿದ ಅಂಬಾಟಿ ರಾಯುಡು?

Ambati Rayudu: ಟೀಮ್ ಇಂಡಿಯಾ ಪರ 55 ಏಕದಿನ ಪಂದ್ಯಗಳನ್ನಾಡಿರುವ ಅಂಬಾಟಿ ರಾಯುಡು 3 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 1694 ರನ್ ಕಲೆಹಾಕಿದ್ದಾರೆ. ಹಾಗೆಯೇ 6 ಟಿ20 ಪಂದ್ಯಗಳಿಂದ 42 ರನ್ ಬಾರಿಸಿದ್ದಾರೆ.

YSRCP ಗೆ ಕೈಕೊಟ್ಟು JSP ಕೈ ಹಿಡಿದ ಅಂಬಾಟಿ ರಾಯುಡು?
Ambati Rayudu
TV9 Web
| Edited By: |

Updated on:Feb 14, 2024 | 3:16 PM

Share

ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು (Ambati Rayudu) ಜನಸೇನಾ ಪಕ್ಷವನ್ನು ಸೇರಲಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ರಾಯುಡು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿರುವುದು. ವಾರದ ಹಿಂದೆಯಷ್ಟೇ YSR ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಅಂಬಾಟಿ ರಾಯುಡು ರಾಜಕೀಯದಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದರು. ಆದರೆ ಒಂದೇ ವಾರದೊಳಗೆ ವೈಎಸ್​ಆರ್​ ಪಕ್ಷವನ್ನು ತೊರೆದ ರಾಯುಡು ರಾಜಕೀಯದಿಂದ ದೂರ ಉಳಿಯುವುದಾಗಿ ತಿಳಿಸಿದ್ದರು.

ಅಷ್ಟೇ ಅಲ್ಲದೆ ಇಂಟರ್​ನ್ಯಾಷನಲ್ ಲೀಗ್​ ಟಿ20 ಟೂರ್ನಿ ಆಡುವ ಸಲುವಾಗಿ ವೈಎಸ್​ಆರ್​ ಪಕ್ಷವನ್ನು ತೊರೆದಿದ್ದೇನೆ. ರಾಜಕೀಯ ಹಾಗೂ ಕ್ರೀಡೆಯನ್ನು ಜೊತೆಯಾಗಿ ಕೊಂಡೊಯ್ಯಲು ಸಾಧ್ಯವಿಲ್ಲ ಎಂದು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದರು. ಆದರೀಗ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿ ಮತ್ತೆ ರಾಜಕೀಯದಲ್ಲಿ ತೊಡಗಿಸಿಕೊಳ್ಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ನಾನು ಉತ್ತಮ ಉದ್ದೇಶದೊಂದಿಗೆ ಆಂಧ್ರಪ್ರದೇಶದ ಜನರಿಗೆ ಸೇವೆ ಸಲ್ಲಿಸಲು ರಾಜಕೀಯಕ್ಕೆ ಬಂದಿದ್ದೇನೆ. ನಾನು ವೈಎಸ್‌ಆರ್‌ಸಿಪಿಗೆ ಸೇರಿದ್ದೆ. ಈ ವೇಳೆ ಅನೇಕ ಗ್ರಾಮಗಳಿಗೆ ಭೇಟಿ ನೀಡಿ ಹಲವಾರು ಜನರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದೇನೆ. ಅಲ್ಲದೆ ವೈಯಕ್ತಿಕವಾಗಿ ಅನೇಕ ಸಮಸ್ಯೆಗಳನ್ನು ಪರಿಹರಿಸಲು ನನ್ನ ಕೈಲಾದಷ್ಟು ಪ್ರಯತ್ನ ಮಾಡಿದ್ದೇನೆ. ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇನೆ ಎಂದು ಅಂಬಾಟಿ ರಾಯುಡು ತಿಳಿಸಿದ್ದಾರೆ.

ನನ್ನ ಸಿದ್ಧಾಂತ ಮತ್ತು ವೈಎಸ್‌ಆರ್‌ಸಿಪಿಯ ಸಿದ್ಧಾಂತಗಳು ಹೊಂದಾಣಿಕೆಯಾಗಿಲ್ಲ. ಹೀಗಾಗಿ ವೈಎಸ್‌ಆರ್‌ಸಿಪಿಯೊಂದಿಗೆ ಮುಂದುವರೆಯಲು ಸಾಧ್ಯವಾಗಿಲ್ಲ. ಇದಕ್ಕೂ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಮತ್ತು x ಮತ್ತು y ಸ್ಥಾನಕ್ಕೂ ಖಂಡಿತವಾಗಿಯೂ ಯಾವುದೇ ಸಂಬಂಧವಿಲ್ಲ ಎಂದು ರಾಯುಡು ಸ್ಪಷ್ಟಪಡಿಸಿದ್ದಾರೆ.

ನಾನು ರಾಜಕೀಯದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೆ. ಆದರೆ ನನ್ನ ಹಿತೈಷಿಗಳು ಮತ್ತು ಆಪ್ತರು ಮತ್ತು ಕುಟುಂಬದವರು ಪವನ್ (ಪವನ್ ಕಲ್ಯಾಣ್) ಅಣ್ಣನ ಸಿದ್ಧಾಂತಗಳನ್ನು ಅರ್ಥಮಾಡಿಕೊಳ್ಳಲು ಒಮ್ಮೆ ಭೇಟಿಯಾಗುವಂತೆ ನನಗೆ ಹೇಳಿದ್ದರು. ಅದರಂತೆ ನಾನು ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿ ಸಾಕಷ್ಟು ಸಮಯ ಕಳೆದಿದ್ದೇನೆ.

ರಾಜಕೀಯ ಮತ್ತು ಅವರನ್ನು ಅರ್ಥಮಾಡಿಕೊಳ್ಳುವುದು, ಅವರ ಸಿದ್ಧಾಂತ ಮತ್ತು ರಾಜಕೀಯ ದೃಷ್ಟಿಕೋನವು ನನ್ನಂತೆಯೇ ಇದೆ ಎಂಬುದು ಸಂತೋಷದ ವಿಷಯ. ಸದ್ಯ ನಾನು ಕ್ರಿಕೆಟ್ ಆಡಲು ದುಬೈಗೆ ಹೋಗುತ್ತಿದ್ದೇನೆ. ಅಲ್ಲದೆ ಸದಾ ಆಂಧ್ರಪ್ರದೇಶದ ಜನರ ಜೊತೆ ನಿಲ್ಲುತ್ತೇನೆ ಎಂದು ಅಂಬಾಟಿ ರಾಯುಡು ತಿಳಿಸಿದ್ದಾರೆ.

ಇದನ್ನೂ ಓದಿ: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಲು ರೋಹಿತ್ ಶರ್ಮಾಗೆ ಉತ್ತಮ ಅವಕಾಶ

ಇದರ ಬೆನ್ನಲ್ಲೇ ಅಂಬಾಟಿ ರಾಯುಡು ಜನಸೇನಾ ಪಕ್ಷ ಸೇರಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರಲಾರಂಭಿಸಿದೆ. ಸದ್ಯ ಇಂಟರ್​ನ್ಯಾನಲ್ ಲೀಗ್ ಟಿ20 ಟೂರ್ನಿಗಾಗಿ ಯುಎಇ ತೆರಳಿರುವ ಅಂಬಾಟಿ ರಾಯುಡು ಭಾರತಕ್ಕೆ ಬಂದ ಬಳಿಕ ಜನಸೇನಾ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

Published On - 8:13 am, Thu, 11 January 24

ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ