AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಫೈನಲ್​ನಲ್ಲಿ RCBಗೆ ಸೋಲು: ಅಂಬಾಟಿ ರಾಯುಡು ಭವಿಷ್ಯ

IPL 2026 RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಹಲವು ಬಾರಿ ವ್ಯಂಗ್ಯವಾಡಿದ್ದರು. ಈ ವ್ಯಂಗ್ಯಕ್ಕೆಲ್ಲಾ ಉತ್ತರ ಎಂಬಂತೆ ಐಪಿಎಲ್ 2025 ರಲ್ಲಿ ಆರ್​ಸಿಬಿ ತಂಡವು ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಇದಾಗ್ಯೂ ಆರ್​ಸಿಬಿ ತಂಡವನ್ನು ಗುರಿಯಾಗಿಸುವ ರಾಯುಡು ಅವರ ಕಾಯಕ ಮುಂದುವರೆದಿದೆ.

ಐಪಿಎಲ್ ಫೈನಲ್​ನಲ್ಲಿ RCBಗೆ ಸೋಲು: ಅಂಬಾಟಿ ರಾಯುಡು ಭವಿಷ್ಯ
Ambati Rayudu
ಝಾಹಿರ್ ಯೂಸುಫ್
|

Updated on: Aug 19, 2025 | 9:54 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿರುದ್ಧ ಸದಾ ಕೊಂಕು ನುಡಿಯುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು (Ambati Rayudu) ಇದೀಗ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ಈ ಬಾರಿ ಭವಿಷ್ಯ ನುಡಿದಿರುವುದು ಮುಂಬರುವ ಐಪಿಎಲ್​ ಬಗ್ಗೆ. ಅಂದರೆ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಫೈನಲ್ ಬಗ್ಗೆ.

ಪ್ರಮುಖ ಪಾಡ್​ಕಾಸ್ಟ್​ವೊಂದರಲ್ಲಿ ಕಾಣಿಸಿಕೊಂಡ ಅಂಬಾಟಿ ರಾಯುಡು, ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಆಡಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಈ ಟಾಪ್-4 ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಫೈನಲ್​ಗೆ ಪ್ರವೇಶಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಆದರೆ ಫೈನಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲುತ್ತದೆ. ಅಲ್ಲದೆ ಮುಂಬೈ ಇಂಡಿಯನ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುತ್ತದೆ ಎಂದು ಅಂಬಾಟಿ ರಾಯುಡು ಭವಿಷ್ಯ ನುಡಿದಿದ್ದಾರೆ. ಇದೀಗ ರಾಯುಡು ಅವರ ಈ ಹೇಳಿಕೆಗಳ ವಿಡಿಯೋ ತುಣುಕುಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಳೆದ ಸೀಸನ್​ನಲ್ಲಿ ಅಂಬಾಟಿ ರಾಯುಡು, ಈ ಬಾರಿ ಆರ್​ಸಿಬಿ ಕಪ್ ಗೆಲ್ಲಬಾರದು ಎಂದಿದ್ದರು. ಅಲ್ಲದೆ ಆರ್​ಸಿಬಿ ತಂಡದ ಸೋಲಿಗೆ ಅವರ ತಂಡದ ಆಯ್ಕೆಯೇ ಕಾರಣ ಎಂದು ದೂರಿದ್ದರುಅದರಲ್ಲೂ ರಾಯಲ್ ಚಾಲೆಂಜರ್ಸ್ಬೆಂಗಳೂರುನಂತಹ ತಂಡ ಐಪಿಎಲ್​ನಲ್ಲಿ ಇರಬೇಕು. ಏಕೆಂದರೆ ನಿರೀಕ್ಷೆಗಳನ್ನು ಹೆಚ್ಚಿಸಿ ಅದನ್ನು ಪೂರೈಸಲು ವಿಫಲವಾಗುವ ತಂಡ ಇದ್ದರೇನೇ ಮನರಂಜನೆ ಸಿಗೋದು.

ಅಷ್ಟೇ ಅಲ್ಲದೆ ಆರ್‌ಸಿಬಿ ತಂಡವು ಗೆಲ್ಲಲು ಹೆಣಗಾಡುವುದನ್ನು ನೋಡಿ ನಾನು ಸದಾ ಆನಂದಿಸುತ್ತೇನೆ. ಇದಾಗ್ಯೂ ಅವರು ಟ್ರೋಫಿ ಗೆಲ್ಲಲಿ ಎಂದು ಬಯಸುತ್ತೇನೆ. ಆದರೆ ಈ ಬಾರಿ ಅವರು ಕಪ್ ಗೆಲ್ಲಬಾರದು. ಮುಂದೊಂದು ದಿನ ಯಾವತ್ತಾದರು ಗೆಲ್ಲಲಿ. ಈ ಸಲ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟ್ರೋಫಿ ಎತ್ತಿ ಹಿಡಿಯಬೇಕು ಎಂದು ಅಂಬಾಟಿ ರಾಯುಡು ಹೇಳಿದ್ದರು.

ಇದನ್ನೂ ಓದಿ: IPL 2026: 6 ಆಟಗಾರರನ್ನು ಕೈ ಬಿಡಲಿದೆ RCB

ಆದರೆ ಅಂಬಾಟಿ ರಾಯುಡು ಅವರ ಈ ನಿರೀಕ್ಷೆಗಳನ್ನು ಹುಸಿಗೊಳಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2025 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ಐಪಿಎಲ್ 2026 ರಲ್ಲಿ ಹಾಲಿ ಚಾಂಪಿಯನ್ ಎಂಬ ಟ್ಯಾಗ್ ಲೈನ್​ನೊಂದಿಗೆ ಕಣಕ್ಕಿಳಿಯಲಿರುವ ಆರ್​ಸಿಬಿ ತಂಡವನ್ನು ಗುರಿಯಾಗಿಸಿ ಅಂಬಾಟಿ ರಾಯುಡು ಹೇಳಿಕೆಗಳನ್ನು ನೀಡಲಾರಂಭಿಸಿದ್ದಾರೆ. ಹೀಗಾಗಿ ರಾಯುಡು ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ