AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಬರೋಬ್ಬರಿ 72 ವರ್ಷ ತೆಗೆದುಕೊಳ್ಳಲಿದೆ… ರಾಯುಡು ವ್ಯಂಗ್ಯ

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್​ನಲ್ಲಿ ನಾಲ್ಕು ಬಾರಿ ಫೈನಲ್​ಗೆ ಪ್ರವೇಶಿಸಿದೆ. ಈ ನಾಲ್ಕು ಫೈನಲ್​ನಲ್ಲಿ ಗೆದ್ದಿರುವುದು ಒಮ್ಮೆ ಮಾತ್ರ. ಅಂದರೆ ಚೊಚ್ಚಲ ಟ್ರೋಫಿ ಗೆದ್ದಿರುವುದು ಬರೋಬ್ಬರಿ 18 ವರ್ಷಗಳ ಬಳಿಕ. ಹೀಗಾಗಿಯೇ ಅಂಬಾಟಿ ರಾಯುಡು ಆರ್​ಸಿಬಿ ತಂಡದ ಟ್ರೋಫಿ ಲೆಕ್ಕಾಚಾರವನ್ನು ಅಣಕಿಸಿದ್ದಾರೆ.

RCB ಬರೋಬ್ಬರಿ 72 ವರ್ಷ ತೆಗೆದುಕೊಳ್ಳಲಿದೆ... ರಾಯುಡು ವ್ಯಂಗ್ಯ
Ambati Rayudu
ಝಾಹಿರ್ ಯೂಸುಫ್
|

Updated on: Apr 04, 2026 | 8:34 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ನಡುವಿನ “ಸೋಷಿಯಲ್ ಮೀಡಿಯಾ ವಾರ್” ಹೊಸದೇನಲ್ಲ. ಈ ವ್ಯಂಗ್ಯದ ವಾರ್ ಈ ಬಾರಿ ಕೂಡ ಮುಂದುವರೆದಿದೆ. ಆದರೆ, ಈ ಸಲ ರಾಯುಡು “72 ವರ್ಷಗಳ” ಲೆಕ್ಕಾಚಾರದೊಂದಿಗೆ ಅಭಿಮಾನಿಗಳ ಮುಂದೆ ಬಂದಿದ್ದಾರೆ.

ಏನಿದು 72 ವರ್ಷಗಳ ಲೆಕ್ಕಚಾರ?

ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಕಣಕ್ಕಿಳಿಯುತ್ತಿದೆ. ಈ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವಂತಹ ಭರ್ಜರಿ ನಿರೀಕ್ಷೆಯನ್ನು ಸಹ ಮೊದಲ ಪಂದ್ಯದಲ್ಲೇ ಹುಟ್ಟುಹಾಕಿದ್ದಾರೆ. ಇದಾಗ್ಯೂ ಆರ್​ಸಿಬಿ ಬ್ಯಾಕ್ ಟು ಬ್ಯಾಕ್ ಟ್ರೋಫಿಗಳನ್ನು ಗೆಲ್ಲುವುದು ಅನುಮಾನ ಎಂದಿದ್ದಾರೆ ಅಂಬಾಟಿ ರಾಯುಡು.

ಈ ಬಗ್ಗೆ ಮಾತನಾಡಿದ ಅಂಬಾಟಿ ರಾಯುಡು  “ಆರ್‌ಸಿಬಿ ತನ್ನ ಮೊದಲ ಟ್ರೋಫಿ ಗೆಲ್ಲಲು 18 ವರ್ಷ ತೆಗೆದುಕೊಂಡಿದೆ. ಇದೇ ವೇಗದಲ್ಲಿ ಹೋದರೆ, ಮುಂಬೈ ಇಂಡಿಯನ್ಸ್ ಅಥವಾ ಸಿಎಸ್‌ಕೆ ಮಾಡಿದಂತೆ 5 ಟ್ರೋಫಿಗಳನ್ನು ಗೆಲ್ಲಲು ಆರ್‌ಸಿಬಿಗೆ ಇನ್ನೂ 72 ವರ್ಷಗಳು ಬೇಕಾಗುತ್ತವೆ!” ಎಂದು ವ್ಯಂಗ್ಯವಾಡಿದ್ದಾರೆ.

ಅಂದರೆ ಮೊದಲ ಟ್ರೋಫಿ ಗೆಲ್ಲಲು 18 ವರ್ಷಗಳನನ್ನು ತೆಗೆದುಕೊಂಡಿರುವ ಆರ್​ಸಿಬಿ, ಪ್ರತಿ 18 ವರ್ಷಗಳಿಗೊಮ್ಮೆ ಪ್ರಶಸ್ತಿ ಗೆಲ್ಲಬಹುದು ಎಂದು ಕಾಲೆಳೆದಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್​ನ 5 ಟ್ರೋಫಿಗಳ ಸಾಧನೆಯನ್ನು ಸರಿಗಟ್ಟಲು 72 ವರ್ಷಗಳನ್ನು ತೆಗೆದುಕೊಳ್ಳಬಹುದು ಎಂದು ಅಣಕಿಸಿದ್ದಾರೆ.

ಇದಕ್ಕೂ ಮುನ್ನ, ಅಂದರೆ ಕಳೆದ ಸೀಸನ್​ನಲ್ಲಿ ಅಂಬಾಟಿ ರಾಯುಡು, ಆರ್‌ಸಿಬಿ ಆಟಗಾರರು ತಂಡದ ಗೆಲುವಿಗಿಂತ ಹೆಚ್ಚಾಗಿ ತಮ್ಮ ವೈಯಕ್ತಿಕ ದಾಖಲೆಗಳ ಮೇಲೆ ಗಮನ ಹರಿಸುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದರು.

ಅಲ್ಲದೆ ಟ್ರೋಫಿ ಗೆಲ್ಲುವ ಮೊದಲೇ ಅತಿಯಾದ ಸಂಭ್ರಮಾಚರಣೆ ಮಾಡುವುದು ಆರ್​ಸಿಬಿ ತಂಡಕ್ಕೆ ಮುಳುವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಷ್ಟೇ ಅಲ್ಲದೆ ದೊಡ್ಡ ಪಂದ್ಯಗಳಲ್ಲಿ ಆರ್‌ಸಿಬಿ ಒತ್ತಡಕ್ಕೆ ಮಣಿಯುತ್ತದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರಿಗೆ ಒತ್ತಡವನ್ನು ನಿಭಾಯಿಸಲು ಬರಲ್ಲ ಎಂದು ಹೀಯಾಳಿಸಿದ್ದರು.

ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದಿದ್ದರೂ ಸಿಎಸ್​ಕೆ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ 5 ಟ್ರೋಫಿಗಳ ಸಾಧನೆಯನ್ನು ಸರಿಗಟ್ಟಲು 72 ವರ್ಷಗಳನ್ನು ತೆಗೆದುಕೊಳ್ಳಲಿದೆ ಎಂದು ಅಣಕಿಸಿದ್ದಾರೆ.

ರಾಯುಡು ಸಾಧನೆ:

ಅಂಬಾಟಿ ರಾಯುಡು ಅವರು ಇಷ್ಟೊಂದು ಆತ್ಮವಿಶ್ವಾಸದಿಂದ ಮಾತನಾಡಲು ಕಾರಣ ಅವರ ಟ್ರೋಫಿ ದಾಖಲೆ. ಅವರು ಐಪಿಎಲ್ ಇತಿಹಾಸದಲ್ಲಿ 6 ಬಾರಿ ಚಾಂಪಿಯನ್ ತಂಡದ ಭಾಗವಾಗಿದ್ದಾರೆ. ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ತಲಾ 3 ಬಾರಿ ಟ್ರೋಫಿ ಎತ್ತಿ ಹಿಡಿದ್ದರು. ಹೀಗಾಗಿಯೇ ಟ್ರೋಫಿ ವಿಷಯದಲ್ಲಿ ಅಂಬಾಟಿ ರಾಯುಡು ಆರ್​ಸಿಬಿ ತಂಡವನ್ನು ಅಣಕಿಸುತ್ತಾ ಬಂದಿದ್ದಾರೆ.

ಇದನ್ನೂ ಓದಿ: IPL 2026: CSK ದಾಂಡಿಗರ ಆರ್ಭಟಕ್ಕೆ RCB ದಾಖಲೆ ಧೂಳೀಪಟ

ಇನ್ನು ಅಂಬಾಟಿ ರಾಯುಡು ಅವರ ಈ ವ್ಯಂಗ್ಯ ಆರ್‌ಸಿಬಿ ಅಭಿಮಾನಿಗಳನ್ನು ಕೆರಳಿಸಿದ್ದರೂ, 2025ರ ಟ್ರೋಫಿ ಗೆಲುವಿನ ನಂತರ ಆರ್‌ಸಿಬಿ ಹೊಸ ಹಾದಿಯಲ್ಲಿದೆ. 2026ರ ಐಪಿಎಲ್‌ನಲ್ಲಿ ಆರ್‌ಸಿಬಿ ಮತ್ತೆ ಪ್ರಶಸ್ತಿ ಗೆಲ್ಲುವ ಮೂಲಕ ರಾಯುಡು ಅವರ 72 ವರ್ಷಗಳ ಲೆಕ್ಕಾಚಾರವನ್ನು ತಪ್ಪು ಎಂದು ನಿರೂಪಿಸುತ್ತದೆಯೇ ಎಂದು ಕಾದು ನೋಡಬೇಕಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ