IMLT20: ಫೈನಲ್ನಲ್ಲಿ ಅಬ್ಬರ: ಅಂಬಾಟಿ ರಾಯುಡುಗೆ ಪ್ರಶಸ್ತಿಗಳ ಸುರಿಮಳೆ..!
IML 2025 Final: ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ನಲ್ಲಿ ಇಂಡಿಯಾ ಮಾಸ್ಟರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡವು 20 ಓವರ್ಗಳಲ್ಲಿ 148 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಡಿಯಾ ಮಾಸ್ಟರ್ಸ್ ತಂಡವು 17.1 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 6 ವಿಕೆಟ್ಗಳ ಜಯ ಸಾಧಿಸಿದೆ.

ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ ಟಿ20 ಟೂರ್ನಿಯಲ್ಲಿ ಇಂಡಿಯಾ ಮಾಸ್ಟರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡದ ಪರ ಲೆಂಡ್ಲ್ ಸಿಮನ್ಸ್ 41 ಎಸೆತಗಳಲ್ಲಿ 57 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿಂದ ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 148 ರನ್ ಕಲೆಹಾಕಿತು.
149 ರನ್ಗಳ ಗುರಿ ಪಡೆದ ಇಂಡಿಯಾ ಮಾಸ್ಟರ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಂಬಾಟಿ ರಾಯುಡು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. 50 ಎಸೆತಗಳನ್ನು ಎದುರಿಸಿದ ರಾಯುಡು 3 ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 74 ರನ್ ಬಾರಿಸಿದರು. ಈ ಮೂಲಕ ಇಂಡಿಯಾ ಮಾಸ್ಟರ್ಸ್ ತಂಡವು 17.1 ಓವರ್ಗಳಲ್ಲಿ 149 ರನ್ ಬಾರಿಸಿ 6 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ಅಂಬಾಟಿ ರಾಯುಡುಗೆ ಪ್ರಶಸ್ತಿಗಳ ಸುರಿಮಳೆ:
ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ಅಂಬಾಟಿ ರಾಯುಡು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಇದರ ಜೊತೆಗೆ 50 ಸಾವಿರ ರೂ. ಮೊತ್ತದ ನಗದು ಬಹುಮಾನ ಕೂಡ ಪಡೆದರು.
View this post on Instagram
ಇನ್ನು ಈ ಪಂದ್ಯದಲ್ಲಿ 3 ಸಿಕ್ಸ್ ಸಿಡಿಸುವ ಮೂಲಕ ಫೈನಲ್ ಮ್ಯಾಚ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ ಎನಿಸಿಕೊಂಡರು. ಈ ಮೂಲಕ 50 ಸಾವಿರ ರೂ. ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡರು.
View this post on Instagram
ಹಾಗೆಯೇ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಸ್ಟ್ರೈಕ್ರೇಟ್ನಲ್ಲಿ ಕಲೆಹಾಕಿದ್ದು ಕೂಡ ಅಂಬಾಟಿ ರಾಯುಡು. ರಾಯುಡು 148.00 ಸ್ಟ್ರೈಕ್ ರೇಟ್ನಲ್ಲಿ 74 ರನ್ ಬಾರಿಸಿದ್ದರು. ಈ ಮೂಲಕ ಮಾಸ್ಟರ್ಸ್ಟ್ರೋಕ್ ಆಫ್ ದಿ ಮ್ಯಾಚ್ ಪ್ರಶಸ್ತಿ ಜೊತೆಗೆ 50 ಸಾವಿರ ರೂ. ನಗದು ಬಹುಮಾನ ಪಡೆದುಕೊಂಡಿದ್ದಾರೆ.
View this post on Instagram
ಇನ್ನು ಈ ಪಂದ್ಯದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಇಂಡಿಯಾ ಮಾಸ್ಟರ್ಸ್ ತಂಡವು 1 ಕೋಟಿ ರೂ. ನಗದು ಬಹುಮಾನ ಪಡೆದರೆ, ರನ್ನರ್ ಅಪ್ ವೆಸ್ಟ್ ಇಂಡೀಸ್ ತಂಡ 50 ಲಕ್ಷ ರೂ. ಪಡೆದುಕೊಂಡಿದೆ.




