AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಭಾರತ- ಪಾಕ್ ಪಂದ್ಯವನ್ನು ರದ್ದುಗೊಳಿಸುವಂತೆ ಹೆಚ್ಚಿದ ಒತ್ತಾಯ; ಬಿಸಿಸಿಐ ನೀಡಿದ ಸ್ಪಷ್ಟನೆ ಏನು ಗೊತ್ತಾ?

T20 World Cup: ಈ ಬಗ್ಗೆ ಮಾತನಾಡಿದ ರಾಜೀವ್ ಶುಕ್ಲಾ, ಕಾಶ್ಮೀರದಲ್ಲಿ ಭಯೋತ್ಪಾದಕರು ಅಮಾಯಕರನ್ನು ಕೊಲ್ಲುತ್ತಿರುವುದಕ್ಕೆ ನನಗೆ ಬೇಸರವಾಗಿದೆ ಆದರೆ ನಾವು ಐಸಿಸಿ ನಿಯಮಗಳ ವಿರುದ್ಧ ಹೋಗಲು ಸಾಧ್ಯವಿಲ್ಲ ಎಂದರು.

T20 World Cup: ಭಾರತ- ಪಾಕ್ ಪಂದ್ಯವನ್ನು ರದ್ದುಗೊಳಿಸುವಂತೆ ಹೆಚ್ಚಿದ ಒತ್ತಾಯ; ಬಿಸಿಸಿಐ ನೀಡಿದ ಸ್ಪಷ್ಟನೆ ಏನು ಗೊತ್ತಾ?
ಬಾಬರ್ ಅಜಮ್. ವಿರಾಟ್ ಕೊಹ್ಲಿ
TV9 Web
| Edited By: |

Updated on: Oct 18, 2021 | 9:22 PM

Share

ಟಿ 20 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾದಾಗಿನಿಂದ, ಅಭಿಮಾನಿಗಳು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕಾಗಿ ಕಾತರರಾಗಿದ್ದಾರೆ. ಅಕ್ಟೋಬರ್ 24 ರಂದು ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಪ್ರಸ್ತುತ ಭಾರತ ಮತ್ತು ಪಾಕಿಸ್ತಾನವು ಐಸಿಸಿ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತವೆ, ಆದ್ದರಿಂದ ಅಭಿಮಾನಿಗಳು ಈ ಪಂದ್ಯಕ್ಕಾಗಿ ಉತ್ಸುಕರಾಗಿದ್ದಾರೆ. ಆದಾಗ್ಯೂ, ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿನ ಹದಗೆಟ್ಟ ಪರಿಸ್ಥಿತಿಗಳ ನಂತರ ಈ ಪಂದ್ಯವನ್ನು ರದ್ದುಗೊಳಿಸಬೇಕೆಂದ ಭಾರತದಲ್ಲಿ ಒತ್ತಾಯ ಹೆಚ್ಚಾಗುತ್ತಿದೆ. ಆದರೆ, ಈ ರೀತಿ ಮಾಡಲಾಗುವುದಿಲ್ಲ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಈ ಪಂದ್ಯವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದರು. ಪಾಕಿಸ್ತಾನ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದೆ ಹೀಗಾಗಿ ಬಾರತ ಅವರೊಂದಿಗೆ ಕ್ರಿಕೆಟ್ ಆಡಬಾರದೆಂದು ಒತ್ತಾಯಿಸಿದರು.

ರಾಜೀವ್ ಶುಕ್ಲಾ ದೊಡ್ಡ ಹೇಳಿಕೆ ಈ ಬಗ್ಗೆ ಮಾತನಾಡಿದ ರಾಜೀವ್ ಶುಕ್ಲಾ, ಕಾಶ್ಮೀರದಲ್ಲಿ ಭಯೋತ್ಪಾದಕರು ಅಮಾಯಕರನ್ನು ಕೊಲ್ಲುತ್ತಿರುವುದಕ್ಕೆ ನನಗೆ ಬೇಸರವಾಗಿದೆ ಆದರೆ ನಾವು ಐಸಿಸಿ ನಿಯಮಗಳ ವಿರುದ್ಧ ಹೋಗಲು ಸಾಧ್ಯವಿಲ್ಲ ಎಂದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸಿದಾಗ ನಮಗೆ ಬೇಸರವಾಗಿದೆ. ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಭಾರತ-ಪಾಕಿಸ್ತಾನ ಸ್ಪರ್ಧೆಗೆ ಸಂಬಂಧಿಸಿದಂತೆ, ನಮ್ಮ ಕೈಯಲ್ಲಿ ಏನೂ ಇಲ್ಲ. ಅಂತರಾಷ್ಟ್ರೀಯ ಪಂದ್ಯಗಳಿಗೆ ಬದ್ಧತೆ ಇದೆ, ನೀವು ಆಡುವುದನ್ನು ನಿರಾಕರಿಸಲು ಸಾಧ್ಯವಿಲ್ಲ. ಪಂದ್ಯವನ್ನು ಆಡಲು ಐಸಿಸಿಗೆ ಮಾಡಿದ ಬದ್ಧತೆಯನ್ನು ಮುರಿಯಲಾಗುವುದಿಲ್ಲ ಎಂದು ಅವರು ಹೇಳಿದರು.

ಭಾರತ ಮತ್ತು ಪಾಕಿಸ್ತಾನ ನಡುವಿನ ಕೊನೆಯ ಪಂದ್ಯ 2019 ರಲ್ಲಿ ನಡೆಸಲಾಯಿತು ಇಂಗ್ಲೆಂಡ್​ನಲ್ಲಿ ನಡೆದ ಏಕದಿನ ವಿಶ್ವಕಪ್ -2019 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕೊನೆಯ ಪಂದ್ಯ ನಡೆಯಿತು. ಅದರ ನಂತರ ಭಾರತವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ -2021 ರಲ್ಲಿ ಪಾಕಿಸ್ತಾನದ ವಿರುದ್ಧ ಸರಣಿ ಆಡಲು ನಿರಾಕರಿಸಿತು. ಈ ಬಗ್ಗೆ ಪಾಕಿಸ್ತಾನವು ಹಲವು ಬಾರಿ ಐಸಿಸಿಗೆ ದೂರು ನೀಡಿತು, ಆದರೆ ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ತನ್ನ ಅಭಿಪ್ರಾಯವನ್ನು ಉಳಿಸಿಕೊಂಡರು. ಬಿಸಿಸಿಐ, ಪಾಕ್ ಆಟಗಾರರನ್ನು ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಐಪಿಎಲ್​ನಲ್ಲಿ ಆಡುವುದನ್ನು ನಿಷೇಧಿಸಿದೆ. 2008 ರ ಮುಂಬೈ ದಾಳಿಯ ನಂತರ ಭಾರತ ಪಾಕಿಸ್ತಾನಕ್ಕೆ ಭೇಟಿ ನೀಡಿಲ್ಲ. ಅದೇ ಸಮಯದಲ್ಲಿ, ಗಡಿಯಲ್ಲಿ ನಿರಂತರ ಕದನ ವಿರಾಮ ಮತ್ತು 2019 ರ ಫೆಬ್ರವರಿಯಲ್ಲಿ ನಡೆದ ಪುಲ್ವಾಮಾ ದಾಳಿಯ ನಂತರ ಈ ಸಂಬಂಧ ಹದಗೆಟ್ಟಿತು. 2012-13ರಲ್ಲಿ ಕೊನೆಯ ಬಾರಿಗೆ ಎರಡು ತಂಡಗಳ ನಡುವೆ ದ್ವಿಪಕ್ಷೀಯ ಸರಣಿ ನಡೆಯಿತು, ಪಾಕಿಸ್ತಾನ ತಂಡವು ಭಾರತ ಪ್ರವಾಸ ಕೈಗೊಂಡಿತು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ