ಸಿರಾಜ್​ ಸಾಧನೆಗೆ ಆನಂದ್ ಮಹೀಂದ್ರಾ ಮೆಚ್ಚುಗೆ; SUV ಕಾರನ್ನು ಗಿಫ್ಟ್ ನೀಡಿ ಎಂದ ನೆಟ್ಟಿಗರು!

Anand Mahindra: ತನ್ನ ಟ್ವಿಟ್ಟರ್ ಖಾತೆಯಲ್ಲಿ ಸಿರಾಜ್ ಸಾಧನೆಯನ್ನು ಕೊಂಡಾಡಿರುವ ​ಆನಂದ್ ಮಹೀಂದ್ರಾ, ನಮ್ಮ ಎದುರಾಳಿಗಳಿಗಾಗಿ ನನ್ನ ಹೃದಯ ಹಿಂದೆಂದೂ ಇಷ್ಟು ಮರುಗಿರಲಿಲ್ಲ ಎಂದು ನಾನು ಭಾವಿಸುತ್ತೇನೆ. ಇದು ನಾವು ಅವರ ಮೇಲೆ ಅತಿಮಾನುಷ ಶಕ್ತಿಯನ್ನು ಬಳಸಿದಂತೆ ಭಾಸವಾಗುತ್ತಿದೆ. ಮೊಹಮ್ಮದ್​ ಸಿರಾಜ್​​ ನೀವು ಮಾರ್ವೆಲ್ ಅವೆಂಜರ್ ಎಂದು ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ಸಿರಾಜ್​ ಸಾಧನೆಗೆ ಆನಂದ್ ಮಹೀಂದ್ರಾ ಮೆಚ್ಚುಗೆ; SUV ಕಾರನ್ನು ಗಿಫ್ಟ್ ನೀಡಿ ಎಂದ ನೆಟ್ಟಿಗರು!
ಮೊಹಮ್ಮದ್ ಸಿರಾಜ್, ಆನಂದ್ ಮಹೀಂದ್ರಾ
Follow us
ಪೃಥ್ವಿಶಂಕರ
|

Updated on: Sep 19, 2023 | 7:57 AM

ಏಷ್ಯಾಕಪ್‌ನ ಫೈನಲ್ (Asia Cup 2023 Final) ಪಂದ್ಯದಲ್ಲಿ ಶ್ರೀಲಂಕಾವನ್ನು ಮಣಿಸಿದ ಭಾರತ (India vs Sri Lanka) ಎಂಟನೇ ಬಾರಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಫೈನಲ್​ ಪಂದ್ಯದಲ್ಲಿ ಶ್ರೀಲಂಕಾವನ್ನು ಕೇವಲ 50 ರನ್‌ಗಳಿಗೆ ಆಲೌಟ್ ಮಾಡಿದ ಭಾರತ, 10 ವಿಕೆಟ್​ಗಳ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಉಗ್ರಾವತಾರ ತಾಳಿದ ವೇಗಿ ಮೊಹಮ್ಮದ್ ಸಿರಾಜ್ (Mohammed Siraj), ಲಂಕಾ ಪಡೆಯನ್ನು ಹೆಡೆಮುರಿ ಕಟ್ಟಿ ಕೇವಲ 21 ರನ್ ನೀಡಿ ಬರೋಬ್ಬರಿ 6 ವಿಕೆಟ್ ಉರುಳಿಸಿದರು. ಅದರಲ್ಲೂ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿ ಲಂಕಾ ಪಾಳಯಕ್ಕೆ ಶಾಕ್ ಮೇಲೆ ಶಾಕ್ ನೀಡಿದ ಸಿರಾಜ್, ಈ ಅದ್ಭುತ ಪ್ರದರ್ಶನಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಪಡೆದರು. ಆ ಬಳಿಕ ತನ್ನ ಹೃದಯ ವೈಶಾಲ್ಯತೆಯನ್ನು ಮೆರೆದ ಸಿರಾಜ್, ಪಂದ್ಯ ಪುರುಷೋತ್ತಮ ಪ್ರಶಸ್ತಿಯಿಂದ ಬಂದ 4 ಲಕ್ಷ ರೂ. ಬಹುಮಾನದ ಹಣವನ್ನು ಶ್ರೀಲಂಕಾದ ಮೈದಾನದ ಸಿಬ್ಬಂದಿಗೆ ನೀಡಿದ್ದರು. ಅವರ ಈ ಕಾರ್ಯಕ್ಕೆ ಕ್ರಿಕೆಟ್​ ಲೋಕ ಮೆಚ್ಚುಗೆ ವ್ಯಕ್ತಪಡಿಸಿತ್ತು. ಇದೀಗ ಸಿರಾಜ್ ಅವರ ಪ್ರದರ್ಶನ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ (Anand Mahindra) ಅವರ ಗಮನ ಸೆಳೆದಿದ್ದು, ಆನಂದ್ ಮಹೀಂದ್ರಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಿರಾಜ್​​ರನ್ನು ಹಾಡಿ ಹೊಗಳಿದ್ದಾರೆ.

ಆನಂದ್ ಮಹೀಂದ್ರ ಹೇಳಿದ್ದೇನು?

ತನ್ನ ಟ್ವಿಟ್ಟರ್ ಖಾತೆಯಲ್ಲಿ ಸಿರಾಜ್ ಸಾಧನೆಯನ್ನು ಕೊಂಡಾಡಿರುವ ​ಆನಂದ್ ಮಹೀಂದ್ರಾ, ನಮ್ಮ ಎದುರಾಳಿಗಳಿಗಾಗಿ ನನ್ನ ಹೃದಯ ಹಿಂದೆಂದೂ ಇಷ್ಟು ಮರುಗಿರಲಿಲ್ಲ ಎಂದು ನಾನು ಭಾವಿಸುತ್ತೇನೆ. ಇದು ನಾವು ಅವರ ಮೇಲೆ ಅತಿಮಾನುಷ ಶಕ್ತಿಯನ್ನು ಬಳಸಿದಂತೆ ಭಾಸವಾಗುತ್ತಿದೆ. ಮೊಹಮ್ಮದ್​ ಸಿರಾಜ್​​ ನೀವು ಮಾರ್ವೆಲ್ ಅವೆಂಜರ್ ಎಂದು ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ. ಆನಂದ್ ಮಹೀಂದ್ರಾ ಈ ಟ್ವೀಟ್ ಈಗೆ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ಮಹೀಂದ್ರಾ ಅವರ ಪೋಸ್ಟ್‌ಗೆ ವಿಭಿನ್ನ ಕಾಮೆಂಟ್‌ಗಳನ್ನು ಮಾಡುತ್ತಿದ್ದು, ವಿಚಿತ್ರವಾದ ಬೇಡಿಕೆಗಳನ್ನು ಅವರ ಮುಂದಿಟ್ಟಿದ್ದಾರೆ.

ಗ್ರ್ಯಾಂಡ್‌ಮಾಸ್ಟರ್ ಪ್ರಗ್ನಾನಂದ ಪೋಷಕರಿಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಉದ್ಯಮಿ ಆನಂದ್ ಮಹೀಂದ್ರಾ

ಅದರಲ್ಲಿ ಒಬ್ಬ ಬಳಕೆದಾರ ಹೊಸ ಎಸ್‌ಯುವಿ ಕಾರನ್ನು ಸಿರಾಜ್​ಗೆ ಉಡುಗೊರೆಯಾಗಿ ನೀಡುವಂತೆ ಮಹೀಂದ್ರಾ ಅವರ ಬಳಿ ಮನವಿ ಮಾಡಿದ್ದಾನೆ. ಈ ಪೋಸ್ಟ್‌ಗೆ ಉತ್ತರಿಸಿರುವ ಆನಂದ್ ಮಹೀಂದ್ರಾ, ಇಂತಹ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ ಎಂದು ಹೇಳಿದ್ದಾರೆ.

ಥಾರ್ ಎಸ್​ಯುವಿ ಕಾರು ಗಿಫ್ಟ್

ಈ ಹಿಂದೆ ಆನಂದ್ ಮಹೀಂದ್ರಾ, ಮೊಹಮ್ಮದ್ ಸಿರಾಜ್‌ಗೆ ಎಸ್‌ಯುವಿ ಕಾರನ್ನು ಉಡುಗೊರೆಯಾಗಿ ನೀಡಿದ್ದರು. ವಾಸ್ತವವಾಗಿ 2021ರಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿತ್ತು. ಆ ಪ್ರವಾಸದಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಆಟಗಾರರು ಟೆಸ್ಟ್ ಸರಣಿಯಲ್ಲಿ ಕಾಂಗರೂಗಳನ್ನು ಅವರ ನಾಡಿನಲ್ಲೇ ಬಗ್ಗುಬಡಿದಿದ್ದರು. ಇದು ಮಹೀಂದ್ರಾ ಅವರ ಹೃದಯ ಗೆದ್ದಿತ್ತು. ಹೀಗಾಗಿ ಮಹೀಂದ್ರಾ ಅವರು ಸಿರಾಜ್ ಸೇರಿದಂತೆ ಟೀಂ ಇಂಡಿಯಾದ ಆರು ಕ್ರಿಕೆಟಿಗರಿಗೆ ಥಾರ್ ಎಸ್​ಯುವಿ ಕಾರನ್ನು ಉಡುಗೊರೆಯಾಗಿ ನೀಡಿದ್ದರು.

ಪ್ರಗ್ನಾನಂದ್‌ಗೆ SUV ಕಾರು ಗಿಫ್ಟ್

ಮಹೀಂದ್ರಾ ಗ್ರೂಪ್ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುಗಳನ್ನು ಉತ್ತೇಜಿಸುತ್ತದೆ. ಇತ್ತೀಚಿಗೆ ಆನಂದ್ ಮಹೀಂದ್ರಾ ಅವರು ಚೆಸ್ ವಿಶ್ವಕಪ್ ಫೈನಲ್ ತಲುಪಿದ ಅತ್ಯಂತ ಕಿರಿಯ ಗ್ರ್ಯಾಂಡ್ ಮಾಸ್ಟರ್ ಪ್ರಗ್ನಾನಂದ್‌ಗೆ ಎಲೆಕ್ಟ್ರಿಕ್ ಎಸ್‌ಯುವಿ ಮಹೀಂದ್ರಾ ಎಕ್ಸ್‌ಯುವಿ 400 ಕಾರನ್ನು ಉಡುಗೊರೆಯಾಗಿ ನೀಡಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ