IND vs AUS: ಶಕತ ವೀರ ನಿತೀಶ್ ರೆಡ್ಡಿಗೆ ಭರ್ಜರಿ ಬಹುಮಾನ ಘೋಷಿಸಿದ ಆಂಧ್ರ ಕ್ರಿಕೆಟ್

Nitish Kumar Reddy: 21 ವರ್ಷದ ನಿತೀಶ್ ಕುಮಾರ್ ರೆಡ್ಡಿ ಅವರು ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ತಮ್ಮ ಚೊಚ್ಚಲ ಟೆಸ್ಟ್ ಶತಕ ಸಿಡಿಸಿ ಕ್ರಿಕೆಟ್ ಜಗತ್ತನ್ನು ಅಚ್ಚರಿಗೊಳಿಸಿದ್ದಾರೆ. ವಾಷಿಂಗ್ಟನ್ ಸುಂದರ್ ಜೊತೆಗಿನ ಅದ್ಭುತ ಜೊತೆಯಾಟದಿಂದ ಭಾರತವನ್ನು ಸಂಕಷ್ಟದಿಂದ ಪಾರು ಮಾಡಿದ ಅವರಿಗೆ ಆಂಧ್ರ ಕ್ರಿಕೆಟ್ ಸಂಸ್ಥೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.

IND vs AUS: ಶಕತ ವೀರ ನಿತೀಶ್ ರೆಡ್ಡಿಗೆ ಭರ್ಜರಿ ಬಹುಮಾನ ಘೋಷಿಸಿದ ಆಂಧ್ರ ಕ್ರಿಕೆಟ್
ನಿತೀಶ್ ರೆಡ್ಡಿ
Follow us
ಪೃಥ್ವಿಶಂಕರ
|

Updated on: Dec 28, 2024 | 7:38 PM

ಕೇವಲ 21 ವರ್ಷ ವಯಸ್ಸಿನಲ್ಲೇ ಭಾರತದ ಉದಯೋನ್ಮುಖ ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಇಡೀ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ. ವಿಶ್ವದ ಅತ್ಯಂತ ಪ್ರಸಿದ್ಧ ಮತ್ತು ಹಳೆಯ ಕ್ರೀಡಾಂಗಣಗಳಲ್ಲಿ ಒಂದಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡದ ವಿರುದ್ಧ ತಮ್ಮ ವೃತ್ತಿಜೀವನದ ನಾಲ್ಕನೇ ಟೆಸ್ಟ್‌ನಲ್ಲಿ ನಿತೀಶ್ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ. ನಿತೀಶ್ ಅವರ ಈ ಶತಕದ ಇನ್ನಿಂಗ್ಸ್​ನಿಂದಾಗಿ ಟೀಂ ಇಂಡಿಯಾ ಫಾಲೋ ಆನ್ ಜೊತೆಗೆ ಸೋಲಿನ ಭೀತಿಯಿಂದಲೂ ಪಾರಾಗಿದೆ. ಹೀಗಾಗಿ ನಿತೀಶ್ ಅವರ ಶತಕಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಡುವೆ ಆಂಧ್ರ ಕ್ರಿಕೆಟ್ ಸಂಸ್ಥೆ ನಿತೀಶ್​ಗೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್‌ನ ಮೂರನೇ ದಿನದಾಟದಲ್ಲಿ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 6 ವಿಕೆಟ್ ಕಳೆದುಕೊಂಡ ಬಳಿಕ ಕ್ರೀಸ್​ಗೆ ಬಂದ ನಿತೀಶ್, ವಾಷಿಂಗ್ಟನ್ ಸುಂದರ್ ಜೊತೆ ಅತ್ಯುತ್ತಮ ಜೊತೆಯಾಟ ನಡೆಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಇದಾದ ಬಳಿಕ ಈ ಐತಿಹಾಸಿಕ ನೆಲದಲ್ಲಿ ಶತಕ ಪೂರೈಸುವ ಮೂಲಕ ಬಾಲ್ಯದ ಕನಸನ್ನು ನನಸು ಮಾಡಿಕೊಂಡರು.

ಬಹುಮಾನ ಘೋಷಿಸಿದ ಆಂಧ್ರ ಕ್ರಿಕೆಟ್

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬಂದಿರುವ ನಿತೀಶ್ ಅವರ ಈ ಸಾಧನೆ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಹೆಮ್ಮೆಯ ವಿಶೇಷಯವಾಗಿದ್ದು, ಈ ಯುವ ಆಲ್‌ರೌಂಡರ್‌ನ ಸ್ಮರಣೀಯ ಶತಕಕ್ಕೆ ಭರ್ಜರಿ ಬಹುಮಾನ ಘೋಷಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆಂಧ್ರ ಕ್ರಿಕೆಟ್ ಅಸೋಸಿಯೇಷನ್ ​​ಅಧ್ಯಕ್ಷ ಮತ್ತು ಸಂಸದ ಕೆಸಿನೇನಿ ಶಿವನಾಥ್ ತಮ್ಮ ಎಕ್ಸ್ ಖಾತೆಯಲ್ಲಿ ನಿತೀಶ್ ಅವರನ್ನು ಅಭಿನಂದಿಸಿದ್ದು, ಈ ಸಾಧನೆ ಮತ್ತು ಕಠಿಣ ಪರಿಶ್ರಮಕ್ಕಾಗಿ ಅವರಿಗೆ ಸಂಘದಿಂದ 25 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಸಾಧನೆಯು ಲಕ್ಷಾಂತರ ಯುವಕರನ್ನು ಮುನ್ನಡೆಯಲು ಮತ್ತು ಎತ್ತರವನ್ನು ಮುಟ್ಟಲು ಸ್ಫೂರ್ತಿ ನೀಡುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.

ಭಾರತದ ಪರ ಅತಿ ಹೆಚ್ಚು ರನ್

ಈ ಆಸ್ಟ್ರೇಲಿಯಾ ಪ್ರವಾಸದಲ್ಲಿಯೇ ನಿತೀಶ್ ಟೆಸ್ಟ್ ಪಾದಾರ್ಪಣೆ ಮಾಡಿದ್ದಾರೆ. ಪರ್ತ್ ಟೆಸ್ಟ್‌ನಲ್ಲಿ ಕಣಕ್ಕಿಳಿಯುವ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ನಿತೀಶ್ ಮೊದಲ ಇನ್ನಿಂಗ್ಸ್‌ನಲ್ಲಿ ಗರಿಷ್ಠ 41 ರನ್ ಗಳಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲೂ ಅವರ ಬ್ಯಾಟ್​ನಿಂದ 38 ರನ್‌ಗಳ ಅಜೇಯ ಇನ್ನಿಂಗ್ಸ್ ಮೂಡಿಬಂತು. ನಂತರ ಅಡಿಲೇಡ್ ಟೆಸ್ಟ್‌ನಲ್ಲೂ ಅವರು ಎರಡೂ ಇನ್ನಿಂಗ್ಸ್‌ಗಳಲ್ಲಿ ತಲಾ 42 ರನ್ ಕಲೆಹಾಕಿದರು. ಇನ್ನು ಮೆಲ್ಬೋರ್ನ್ ಟೆಸ್ಟ್​ನಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿರುವ ನಿತೀಶ್ ಮೂರನೇ ದಿನದಾಟದ ಅಂತ್ಯದವರೆಗೆ ಅಜೇಯರಾಗಿ ಉಳಿದಿದ್ದು 105 ರನ್ ಕಲೆಹಾಕಿದ್ದಾರೆ. ಇಲ್ಲಿಯವರೆಗೆ, ನಿತೀಶ್ ಈ ಸರಣಿಯ 6 ಇನ್ನಿಂಗ್ಸ್‌ಗಳಲ್ಲಿ 284 ರನ್ ಕಲೆಹಾಕಿದ್ದು, ಸರಣಿಯಲ್ಲಿ ಭಾರತದ ಪರ ಗರಿಷ್ಠ ರನ್ ಗಳಿಸಿದ 3ನೇ ಆಟಗಾರರಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ