WI vs ENG: 2 ವರ್ಷಗಳ ಬಳಿಕ ವಿಂಡೀಸ್ ಟಿ20 ತಂಡಕ್ಕೆ ಸ್ಟಾರ್ ಆಲ್‌ರೌಂಡರ್ ಎಂಟ್ರಿ..!

WI vs ENG: ವಾಸ್ತವವಾಗಿ ಆಂಡ್ರೆ ರಸೆಲ್ 2021 ರ ಟಿ 20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್‌ ಪರ ತಮ್ಮ ಕೊನೆಯ ಟಿ20 ಪಂದ್ಯವನ್ನು ಆಡಿದ್ದರು. ಅಂದಿನಿಂದ ಅವರಿಗೆ ಟಿ20 ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೀಗ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಸರಣಿಗಾಗಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

WI vs ENG: 2 ವರ್ಷಗಳ ಬಳಿಕ ವಿಂಡೀಸ್ ಟಿ20 ತಂಡಕ್ಕೆ ಸ್ಟಾರ್ ಆಲ್‌ರೌಂಡರ್ ಎಂಟ್ರಿ..!
ವೆಸ್ಟ್ ಇಂಡೀಸ್ ತಂಡ
Follow us
ಪೃಥ್ವಿಶಂಕರ
|

Updated on: Dec 10, 2023 | 12:41 PM

ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್‌ ತಂಡವನ್ನು 4 ವಿಕೆಟ್​ಗಳಿಂದ ಮಣಿಸಿದ ಆತಿಥೇಯ ವೆಸ್ಟ್ ಇಂಡೀಸ್ ತಂಡ (England vs West Indies) ಸರಣಿಯನ್ನು 2-1 ರಿಂದ ವಶಪಡಿಸಿಕೊಂಡಿದೆ. ಈ ಮೂಲಕ ವೆಸ್ಟ್ ಇಂಡೀಸ್ 25 ವರ್ಷಗಳ ನಂತರ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ (ODI Series) ಗೆದ್ದು ದಾಖಲೆ ಬರೆದಿದೆ. ಇದೀಗ ಉಭಯ ತಂಡಗಳ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಈ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಿಗೆ ತಂಡವನ್ನು ಸಹ ಪ್ರಕಟಿಸಿದೆ. ಆಯ್ಕೆಯಾಗಿರುವ ತಂಡದ ವಿಶೇಷತೆ ಏನೆಂದರೆ, ಕಳೆದ 2 ವರ್ಷಗಳಿಂದ ಟಿ20 ತಂಡದಿಂದ ಹೊರಗುಳಿದಿದ್ದ ಸ್ಟಾರ್ ಆಲ್​ರೌಂಡರ್ ಆಂಡ್ರೆ ರಸೆಲ್ (Andre Russell) ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

2 ವರ್ಷಗಳ ನಂತರ ರಸೆಲ್​ಗೆ ಅವಕಾಶ

ವಾಸ್ತವವಾಗಿ ಆಂಡ್ರೆ ರಸೆಲ್ 2021 ರ ಟಿ 20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್‌ ಪರ ತಮ್ಮ ಕೊನೆಯ ಟಿ20 ಪಂದ್ಯವನ್ನು ಆಡಿದ್ದರು. ಅಂದಿನಿಂದ ಅವರಿಗೆ ಟಿ20 ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೀಗ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಸರಣಿಗಾಗಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ರಸೆಲ್ ಜೊತೆಗೆ, ಹೊಸ ವೆಸ್ಟ್ ಇಂಡೀಸ್ ತಂಡದಲ್ಲಿ ಮ್ಯಾಥ್ಯೂ ಫೋರ್ಡ್ ಕೂಡ ಅವಕಾಶ ಪಡೆದಿದ್ದಾರೆ.

WI vs ENG: ಆಂಗ್ಲರಿಗೆ ಮತ್ತೊಂದು ಮುಖಭಂಗ; 25 ವರ್ಷಗಳ ಬರ ನೀಗಿಸಿಕೊಂಡ ವೆಸ್ಟ್ ಇಂಡೀಸ್

ಶಾಯ್ ಹೋಪ್​ಗೆ ಉಪನಾಯಕತ್ವ

ಈ ಸರಣಿಯಲ್ಲಿ ರೋವ್‌ಮನ್ ಪೊವೆಲ್ ತಂಡದ ನಾಯಕತ್ವ ವಹಿಸಲಿದ್ದಾರೆ. ಅದೇ ಸಮಯದಲ್ಲಿ, ವೆಸ್ಟ್ ಇಂಡೀಸ್ ಏಕದಿನ ತಂಡದ ನಾಯಕತ್ವದ ನಂತರ ಶಾಯ್ ಹೋಪ್, ಟಿ20 ತಂಡದ ಉಪನಾಯಕನಾಗಿಯೂ ಆಯ್ಕೆಯಾಗಿದ್ದಾರೆ. ತಮ್ಮ ನಾಯಕತ್ವದಲ್ಲಿ ಶಾಯ್ ಹೋಪ್ ವೆಸ್ಟ್ ಇಂಡೀಸ್ ತಂಡವನ್ನು ಇಂಗ್ಲೆಂಡ್ ವಿರುದ್ಧದ ಐತಿಹಾಸಿಕ ಏಕದಿನ ಸರಣಿ ಗೆಲುವಿನಲ್ಲಿ ಮುನ್ನಡೆಸಿದ್ದರು.

ಮೊದಲ ಮೂರು ಟಿ20ಗೆ ವೆಸ್ಟ್ ಇಂಡೀಸ್ ತಂಡ:

ರೋವ್ಮನ್ ಪೊವೆಲ್ (ನಾಯಕ), ಶಾಯ್ ಹೋಪ್ (ಉಪನಾಯಕ), ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಕೇಶ್ ಮೋತಿ, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಶೆರ್ಫಾನೆ, ಶೆರ್ಫಾನೆ ರೊಮಾರಿಯೋ ಶೆಫರ್ಡ್.

ಟಿ20 ಸರಣಿ ವೇಳಾಪಟ್ಟಿ

  • 12 ಡಿಸೆಂಬರ್: ಮೊದಲನೇ ಟಿ20, ಕೆನ್ಸಿಂಗ್ಟನ್ ಓವಲ್, ಬಾರ್ಬಡೋಸ್
  • 14 ಡಿಸೆಂಬರ್: 2ಎರಡನೇ ಟಿ20, ನ್ಯಾಷನಲ್ ಸ್ಟೇಡಿಯಂ, ಗ್ರೆನಡಾ
  • 16 ಡಿಸೆಂಬರ್: ಮೂರನೇ ಟಿ20, ನ್ಯಾಷನಲ್ ಸ್ಟೇಡಿಯಂ, ಗ್ರೆನಡಾ
  • 19 ಡಿಸೆಂಬರ್: ನಾಲ್ಕನೇ ಟಿ20, ಬ್ರಿಯಾನ್ ಲಾರಾ ಅಕಾಡೆಮಿ, ಟ್ರಿನಿಡಾಡ್
  • 21 ಡಿಸೆಂಬರ್: ಐದನೇ ಟಿ20, ಬ್ರಿಯಾನ್ ಲಾರಾ ಅಕಾಡೆಮಿ, ಟ್ರಿನಿಡಾಡ್

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ