Ayodhya Ram Mandir inauguration: ಅಯೋಧ್ಯೆಗೆ ಆಗಮಿಸಿದ ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್

|

Updated on: Jan 21, 2024 | 10:36 PM

Ayodhya Ram Mandir inauguration: ಇಂದು ಉತ್ತರ ಪ್ರದೇಶದ ರಾಜಧಾನಿಯಾದ ಲಕ್ಕೋದ ವಿಮಾನ ನಿಲ್ದಾಣದಲ್ಲಿ ಕೆಲವು ಅರ್ಚಕರೊಂದಿಗೆ ಕಾಣಿಸಿಕೊಂಡ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಹಾಗೂ ಅವರ ಕುಟುಂಬ ಜನವರಿ 22, ಸೋಮವಾರದಂದು ಬಹು ನಿರೀಕ್ಷಿತ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Ayodhya Ram Mandir inauguration: ಅಯೋಧ್ಯೆಗೆ ಆಗಮಿಸಿದ ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್
ಅನಿಲ್ ಕುಂಬ್ಳೆ ಕುಟುಂಬ ಹಾಗೂ ವೆಂಕಟೇಶ್ ಪ್ರಸಾದ್
Follow us on

ಜನವರಿ 22ಐತಿಹಾಸಿಕ ಘಳಿಗೆಗೆ ಸಾಕ್ಷಿಯಾಗಲಿದೆ. ಇದೇ ದಿನದಂದು ಅಂದರೆ ನಾಳೆ ಕೋಟ್ಯಾಂತರ ಭಾರತೀಯರ ಮಹಾ ಕನಸು ನನಸಾಗುತ್ತಿದೆ. ಅಯೋಧ್ಯೆ ರಾಮಮಂದಿರದಲ್ಲಿ ಬಾಲ ರಾಮನ ‘ಪ್ರಾಣ ಪ್ರತಿಷ್ಠಾ’ ಸಮಾರಂಭ (Ayodhya Ram Mandir inauguration) ವಿಜೃಂಭಣೆಯಿಂದ ನೆರವೇರಲಿದೆ. ಈ ಮಹಾ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಭಾರತದಿಂದ ಮಾತ್ರವಲ್ಲದೆ ವಿಶ್ವದಾದ್ಯಂತ ಗಣ್ಯರು ಆಯೋಧ್ಯೆಯತ್ತ ಪ್ರಯಾಣ ಆರಂಭಿಸಿದ್ದಾರೆ. ಅವರಲ್ಲಿ ಕೆಲವರು ಈಗಾಗಲೇ ಅಯೋಧ್ಯೆ ತಲುಪಿದ್ದಾರೆ. ಈ ವಿಶೇಷ ಸಮಾರಂಭಕ್ಕೆ ಸಾವಿರಾರು ಗಣ್ಯರನ್ನು ಆಹ್ವಾನಿಸಲಾಗಿದೆ. ಅವರಲ್ಲಿ ಭಾರತ ಕ್ರಿಕೆಟ್ ಅನ್ನು ವರ್ಷಗಳ ಕಾಲ ಆಳಿದ ಭಾರತದ ಮಾಜಿ ನಾಯ ಹಾಗೂ ಅನಿಲ್ ಕುಂಬ್ಳೆ (Anil Kumble) ಮತ್ತು ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ (Venkatesh Prasad) ಕೂಡ ಸೇರಿದ್ದಾರೆ. ಇದೀಗ ಈ ಇಬ್ಬರು ದಿಗ್ಗಜ ಕ್ರಿಕೆಟಿಗರು ತಮ್ಮ ಕುಟುಂಬದೊಂದಿಗೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ.

ಅಯೋಧ್ಯೆಯಲ್ಲಿ ಕುಂಬ್ಳೆ- ಪ್ರಸಾದ್

ಇಂದು ಉತ್ತರ ಪ್ರದೇಶದ ರಾಜಧಾನಿಯಾದ ಲಕ್ಕೋದ ವಿಮಾನ ನಿಲ್ದಾಣದಲ್ಲಿ ಕೆಲವು ಅರ್ಚಕರೊಂದಿಗೆ ಕಾಣಿಸಿಕೊಂಡ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಹಾಗೂ ಅವರ ಕುಟುಂಬ ಜನವರಿ 22, ಸೋಮವಾರದಂದು ಬಹು ನಿರೀಕ್ಷಿತ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಕುಂಬ್ಳೆ ಅವರ ಮಾಜಿ ಸಹ ಆಟಗಾರ ಮತ್ತು ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಕೂಡ ಈಗಾಗಲೇ ಅಯೋಧ್ಯೆಯಲ್ಲಿ ನಡೆಯುವ ಭವ್ಯ ಸಮಾರಂಭಕ್ಕೆ ಆಗಮಿಸಿದ್ದಾರೆ. ತಾವು ಅಯೋಧ್ಯೆ ತಲುಪಿರುವ ಮಾಹಿತಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಸಾಧ್ ಅಯೋಧ್ಯೆ ನಗರದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Ayodhya Ram Mandir: ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ‘ಕ್ರಿಕೆಟ್ ದೇವರಿಗೆ’ ಆಹ್ವಾನ

ಹಲವು ಕ್ರಿಕೆಟಿಗರಿಗೆ ಆಹ್ವಾನ

ಭಾರತದ ದಿಗ್ಗಜ ಕ್ರಿಕೆಟಿಗರಾದ ಎಂಎಸ್ ಧೋನಿ, ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್, ಕಪಿಲ್ ದೇವ್, ಆರ್ ಅಶ್ವಿನ್ ಮತ್ತು ಹರ್ಮನ್‌ಪ್ರೀತ್ ಕೌರ್ ಅವರನ್ನು ಪವಿತ್ರ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಕಾರ್ಯಕ್ರಮದ ಮುನ್ನ ಬಹು ಹಂತದ ಭದ್ರತಾ ಯೋಜನೆಯ ಭಾಗವಾಗಿ ಅಯೋಧ್ಯೆಯಲ್ಲಿ ಭದ್ರತೆಯನ್ನು ಬಲಪಡಿಸಲಾಗಿದೆ ಮತ್ತು ಸುಮಾರು 13000 ಪಡೆಗಳನ್ನು ನಿಯೋಜಿಸಲಾಗಿದೆ.

ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭವು ಮಧ್ಯಾಹ್ನ 12.20 ಕ್ಕೆ ಪ್ರಾರಂಭವಾಗಲಿದ್ದು, ಸೋಮವಾರ ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಪವಿತ್ರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ದೇಶಾದ್ಯಂತ ಗಣ್ಯ ಆಹ್ವಾನಿತರು ಸೇರಿದಂತೆ 6000 ಕ್ಕೂ ಹೆಚ್ಚು ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಪೂರ್ವಭಾವಿ ಶಿಬಿರಕ್ಕಾಗಿ ಹೈದರಾಬಾದ್‌ಗೆ ಆಗಮಿಸುವ ನಿರೀಕ್ಷೆಯಿರುವುದರಿಂದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಆರ್ ಅಶ್ವಿನ್ ಅವರಂತಹ ಭಾರತೀಯ ಟೆಸ್ಟ್ ಆಟಗಾರರು ಈ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:34 pm, Sun, 21 January 24