Anil Kumble Birthday: 51ನೇ ವಸಂತಕ್ಕೆ ಕಾಲಿಟ್ಟ ಕನ್ನಡಿಗ ಅನಿಲ್ ಕುಂಬ್ಳೆ: ಕರ್ನಾಟಕದ ಕಲಿ ಬಗ್ಗೆ ಇಲ್ಲಿದೆ ವಿಶೇಷ ಸಂಗತಿಗಳು
Happy Birthday Anil Kumble: ಅನಿಲ್ ಕುಂಬ್ಳೆ ಭಾರತ ತಂಡದ ಪರ 132 ಟೆಸ್ಟ್ ಮತ್ತು 271 ಏಕದಿನ ಪಂದ್ಯಗಳಲ್ಲಿ ಕ್ರಮವಾಗಿ 619 ಮತ್ತು 337 ವಿಕೆಟ್ ಕಬಳಿಸಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪರ 900ಕ್ಕೂ ಅಧಿಕ ವಿಕೆಟ್ ಕಬಳಿಸಿದ ಏಕೈಕ ಬೌಲರ್ ಎಂಬ ಹೆಗ್ಗಳಿಕೆ ಅವರದಾಗಿದೆ.
ಭಾರತ ಕ್ರಿಕೆಟ್ ತಂಡದ ಮಾಜಿ ಬೌಲರ್, ಮಾಜಿ ಕೋಚ್ ಕನ್ನಡಿಗ ಅನಿಲ್ ಕುಂಬ್ಳೆ (Anil Kumble) ಅವರಿಗೆ ಇಂದು (ಅ. 17) 51ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರ ಮಾಜಿ ಸಹ-ಆಟಗಾರರು, ಹಾಲಿ ಕ್ರಿಕೆಟಿಗರು, ಅಭಿಮಾನಿಗಳು ಶುಭಾಶಯ ಕೋರಿದ್ದಾರೆ. ಅಕ್ಟೋಬರ್ 17, 1970 ರಂದು ಜನಿಸಿದ ಕುಂಬ್ಳೆ ಅವರನ್ನು ಎಲ್ಲರು ಪ್ರೀತಿಯಿಂದ ಜಂಬೋ ಎಂದು ಕರೆಯುತ್ತಾರೆ. ಎಪ್ರಿಲ್ 25, 1990 ರಂದು ಅಂತರರಾಷ್ಟ್ರೀಯ ಕ್ರಿಕೆಟ್ಗೆ ಕಾಲಿಟ್ಟ ಕುಂಬ್ಳೆ ಸುಮಾರು 18 ವರ್ಷಗಳ ಕಾಲ ಟೀಮ್ ಇಂಡಿಯಾಕ್ಕೆ (Team India) ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ.
ಅನಿಲ್ ಕುಂಬ್ಳೆ ಭಾರತ ತಂಡದ ಪರ 132 ಟೆಸ್ಟ್ ಮತ್ತು 271 ಏಕದಿನ ಪಂದ್ಯಗಳಲ್ಲಿ ಕ್ರಮವಾಗಿ 619 ಮತ್ತು 337 ವಿಕೆಟ್ ಕಬಳಿಸಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪರ 900ಕ್ಕೂ ಅಧಿಕ ವಿಕೆಟ್ ಕಬಳಿಸಿದ ಏಕೈಕ ಬೌಲರ್ ಎಂಬ ಹೆಗ್ಗಳಿಕೆ ಅವರದಾಗಿದೆ. ಕುಂಬ್ಳೆ ಫೆ. 7, 1999 ರಂದು ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ 26.3 ಓವರ್ ಬೌಲಿಂಗ್ ಮಾಡಿ 10 ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಅಲ್ಲದೆ ಭಾರತ 212 ರನ್ಗಳ ಬೃಹತ್ ಜಯ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Here’s wishing a legend of Indian Cricket and RCB, @anilkumble1074, a very very Happy Birthday! ???
ಹುಟ್ಟು ಹಬ್ಬದ ಶುಭಾಶಯಗಳು! ?#PlayBold #WeAreChallengers #ನಮ್ಮRCB pic.twitter.com/rmtRbe9ING
— Royal Challengers Bangalore (@RCBTweets) October 17, 2021
ಕುಂಬ್ಳೆ ಅವರು ತಂಡದಿಂದ ಹೊರ ಬಂದ ನಂತರ ದೇಸಿ ಕ್ರಿಕೆಟ್ ನಲ್ಲಿ ಮತ್ತೊಮ್ಮೆ ಉತ್ತಮ ಪ್ರದರ್ಶನ ನೀಡಿ ಆಯ್ಕೆ ದಾರರ ಗಮನ ಸೆಳೆದರು. ರೆಸ್ಟ್ ಆಫ್ ಇಂಡಿಯಾ ವಿರುದ್ಧ 13/138 ಪಡೆಯುವ ಮೂಲಕ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾದರು. ಅಲ್ಲಿಂದ ಮುಂದೆ ಹಿಂತಿರುಗಿ ನೋಡಲೇ ಇಲ್ಲ. 18 ವರ್ಷಗಳ ಕಾಲ ವೃತ್ತಿ ಬದುಕು ಕಂಡುಕೊಂಡರು.
ಸಭ್ಯರ ಕ್ರೀಡೆ ಎನಿಸಿಕೊಂಡಿರುವ ಕ್ರಿಕೆಟ್ ನಲ್ಲಿ ಉತ್ತಮ ಪ್ರತಿಭೆ ಜತೆಗೆ ವಿದ್ಯೆಯ ಬಲ ಇರುವವರು ತೀರಾ ಕಡಿಮೆ. ಆದರೆ, ಕುಂಬ್ಳೆ ಅವರು ಮೆಕ್ಯಾನಿಕಲ್ ಇಂಜಿನಿಯರ್ ಪದವಿ ಪಡೆದುಕೊಂಡಿದ್ದಾರೆ. ಛಾಯಾಗ್ರಹಣ, ಶಿಕ್ಷಣ ಮತ್ತು ವನ್ಯಜೀವಿ ಸಂರಕ್ಷಣೆ ಮುಂತಾದ ಹಲವಾರು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದಾರೆ. ಅನಿಲ್ ಕುಂಬ್ಳೆ ಕರ್ನಾಟಕ ಕ್ರಿಕೆಟ್ ಸಂಸ್ಥೆಯನ್ನು ನಡೆಸುವ ಜವಾಬ್ದಾರಿ, ಐಸಿಸಿ ಕ್ರಿಕೆಟ್ ಕಮಿಟಿ ಕ್ರಿಕೆಟ್ ಸಮಿತಿಯ ಚೇರ್ಮನ್ ಆಗಿ ಸಮರ್ಥರಾಗಿ ಕಾರ್ಯನಿರ್ವಹಿಸಿದ್ದರು.
ಆಸ್ಟ್ರೇಲಿಯಾದ ಶೇನ್ ವಾರ್ನ್ ಬಿಟ್ಟರೆ 2000 ಟೆಸ್ಟ್ ರನ್ ಹಾಗೂ 500 ಪ್ಲಸ್ ವಿಕೆಟ್ ಹೊಂದಿರುವ ಕ್ರಿಕೆಟರ್ ಎನಿಸಿಕೊಂಡಿದ್ದಾರೆ. 132 ಪಂದ್ಯಗಳಿಂದ 619 ವಿಕೆಟ್ ಕಿತ್ತಿದ್ದಾರೆ.ಅತಿ ಹೆಚ್ಚು ವಿಕೆಟ್ ಪಡೆದ ಬೌಲರುಗಳ ಪೈಕಿ ಮೂರನೆಯವರು.
SAFF Championship: 8ನೇ ಬಾರಿ ಸ್ಯಾಫ್ ಪ್ರಶಸ್ತಿ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಛೇಟ್ರಿ
T20 World Cup 2021: ಟಿ20 ವಿಶ್ವಕಪ್ ಕಾವು ಶುರು: ಅರ್ಹಾತಾ ಸುತ್ತಿನಲ್ಲಿಂದು ಎರಡು ಪಂದ್ಯ: ಸೂಪರ್ 12ಗಾಗಿ ಹೋರಾಟ
(Anil Kumble turns 51 wishes pour in for Indias greatest match-winner)