35 ಎಸೆತಗಳಲ್ಲಿ ಏಕದಿನ ಶತಕ; 14 ವರ್ಷಗಳ ಹಳೆಯ ದಾಖಲೆ ಉಡೀಸ್

Anmolpreet Singh's Record-Breaking Century: ವಿಜಯ್ ಹಜಾರೆ ಟ್ರೋಫಿಯ ಮೊದಲ ದಿನವೇ ಪಂಜಾಬ್‌ ತಂಡದ ಅನ್ಮೋಲ್ಪ್ರೀತ್ ಸಿಂಗ್ ಅವರು ಅರುಣಾಚಲ ಪ್ರದೇಶದ ವಿರುದ್ಧ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ 14 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಇದರೊಂದಿಗೆ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ಅತಿವೇಗದ ಶತಕ ಸಿಡಿಸಿದ ಭಾರತದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

35 ಎಸೆತಗಳಲ್ಲಿ ಏಕದಿನ ಶತಕ; 14 ವರ್ಷಗಳ ಹಳೆಯ ದಾಖಲೆ ಉಡೀಸ್
ಅನ್ಮೋಲ್ಪ್ರೀತ್ ಸಿಂಗ್
Follow us
ಪೃಥ್ವಿಶಂಕರ
|

Updated on: Dec 21, 2024 | 4:29 PM

ಭಾರತದ ದೇಶೀಯ ಟೂರ್ನಿ ವಿಜಯ್ ಹಜಾರೆ ಟ್ರೋಫಿ ಅಬ್ಬರದಿಂದ ಆರಂಭವಾಗಿದೆ. ಟೂರ್ನಿಯ ಮೊದಲ ದಿನವೇ ಹಲವು ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಅರುಣಾಚಲ ಪ್ರದೇಶ ಮತ್ತು ಪಂಜಾಬ್ ತಂಡಗಳ ನಡುವೆ ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ತಂಡದ ಸ್ಟಾರ್ ಬ್ಯಾಟ್ಸ್​ಮನ್ ಅನ್ಮೋಲ್ಪ್ರೀತ್ ಸಿಂಗ್ ಸಿಡಿಲಬ್ಬರದ ಶತಕ ಸಿಡಿಸಿ ಬರೋಬ್ಬರಿ 14 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಅರುಣಾಚಲ ಪ್ರದೇಶದ ವಿರುದ್ಧದ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ ಅನ್ಮೋಲ್ಪ್ರೀತ್ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ಅತಿವೇಗದ ಶತಕ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ಟೀಂ ಇಂಡಿಯಾದ ಮಾಜಿ ಆಟಗಾರ ಯೂಸುಫ್ ಪಠಾಣ್ ಹೆಸರಿನಲ್ಲಿತ್ತು.

45 ಎಸೆತಗಳಲ್ಲಿ 115 ರನ್

ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಅನ್ಮೋಲ್‌ಪ್ರೀತ್ ಸಿಂಗ್ 45 ಎಸೆತಗಳಲ್ಲಿ 115 ರನ್​ಗಳ ಅಜೇಯ ಇನ್ನಿಂಗ್ಸ್ ಆಡಿದರು. ಈ ವೇಳೆ ಅವರ ಬ್ಯಾಟ್‌ನಿಂದ 12 ಬೌಂಡರಿ ಮತ್ತು 9 ಭರ್ಜರಿ ಸಿಕ್ಸರ್‌ಗಳು ಸಿಡಿದವು. ಬರೋಬ್ಬರಿ 255.56 ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆಹಾಕಿದ ಅನ್ಮೋಲ್‌ಪ್ರೀತ್ ಏಕಪಕ್ಷೀಯ ರೀತಿಯಲ್ಲಿ ತಮ್ಮ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ಅನ್ಮೋಲ್‌ಪ್ರೀತ್‌ಗಿಂತ ಮೊದಲು ಯೂಸುಫ್ ಪಠಾಣ್ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ವೇಗದ ಶತಕ ದಾಖಲಿಸಿದ್ದರು. 2009-10ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಮಹಾರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಬರೋಡಾ ಪರ ಕಣಕ್ಕಿಳಿದಿದ್ದ ಯೂಸುಫ್ 40 ಎಸೆತಗಳಲ್ಲಿ ಅತಿ ವೇಗದ ಶತಕ ಬಾರಿಸಿದ್ದ ಸಾಧನೆ ಮಾಡಿದ್ದರು. ಇದೀಗ ಆ ದಾಖಲೆ ಅನ್ಮೋಲ್‌ಪ್ರೀತ್ ಪಾಲಾಗಿದೆ.

ಈ ಸಾಧನೆ ಮಾಡಿದ 3ನೇ ಬ್ಯಾಟ್ಸ್​ಮನ್

ಇದಲ್ಲದೆ ಅನ್ಮೋಲ್ಪ್ರೀತ್ ಸಿಂಗ್ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅತಿವೇಗದ ಶತಕ ಗಳಿಸಿದ ವಿಶ್ವದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಅವರಿಗಿಂತ ಮುಂದೆ ಆಸ್ಟ್ರೇಲಿಯಾದ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಮತ್ತು ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಮಾತ್ರ ಇದ್ದಾರೆ. ಜೇಕ್ ಫ್ರೇಸರ್-ಮೆಕ್‌ಗುರ್ಕ್ 29 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರೆ, ಡಿವಿಲಿಯರ್ಸ್ 2015 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 31 ಎಸೆತಗಳಲ್ಲಿ ಶತಕ ಗಳಿಸಿದ್ದರು.

ಪಂಜಾಬ್ ತಂಡಕ್ಕೆ ಸುಲಭ ಜಯ

ಉಭಯ ತಂಡಗಳ ನಡುವೆ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಅರುಣಾಚಲ ಪ್ರದೇಶ ತಂಡ ಕೇವಲ 48.4 ಓವರ್‌ಗಳಲ್ಲಿ 164 ರನ್ ಗಳಿಸಿ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕೇವಲ 12.3 ಓವರ್‌ಗಳಲ್ಲಿ ಜಯ ಸಾಧಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್