ಸೌತ್ ಆಫ್ರಿಕಾ ತಂಡಕ್ಕೆ ಬಿಗ್ ಶಾಕ್: ವಿಶ್ವಕಪ್​ನಿಂದ ಇಬ್ಬರು ಆಟಗಾರರು ಔಟ್..!

| Updated By: ಝಾಹಿರ್ ಯೂಸುಫ್

Updated on: Sep 21, 2023 | 2:27 PM

World Cup 2023: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಸೌತ್ ಆಫ್ರಿಕಾ ತಂಡಕ್ಕೆ ಬಿಗ್ ಶಾಕ್: ವಿಶ್ವಕಪ್​ನಿಂದ ಇಬ್ಬರು ಆಟಗಾರರು ಔಟ್..!
South Africa Team
Follow us on

ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಶುರುವಾಗಲು ಇನ್ನು ಕೇವಲ ದಿನಗಳು ಮಾತ್ರ ಉಳಿದಿವೆ. ಆದರೆ ಅತ್ತ ಈಗಾಗಲೇ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದ ಸೌತ್ ಆಫ್ರಿಕಾಗೆ ಆಘಾತ ಎದುರಾಗಿದೆ. ತಂಡದ ಇಬ್ಬರು ಪ್ರಮುಖ ಬೌಲರ್​ಗಳಾದ ಅನ್ರಿಕ್ ನೋಕಿಯಾ ಹಾಗೂ ಸಿಸಂದ ಮಗಾಲಾ ಏಕದಿನ ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ.

ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಅನ್ರಿಕ್ ನೋಕಿಯಾ ಕಾಣಿಸಿಕೊಂಡಿದ್ದರು. ಆದರೆ 2ನೇ ಪಂದ್ಯದ ವೇಳೆ ಬೆನ್ನು ನೋವಿನ ಸಮಸ್ಯೆಯಿಂದ ಮೈದಾನ ತೊರೆದಿದ್ದ ನೋಕಿಯಾ ಆ ಬಳಿಕ ಕಣಕ್ಕಿಳಿದಿರಲಿಲ್ಲ. ಇದೀಗ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಬಲಗೈ ವೇಗಿ ಏಕದಿನ ವಿಶ್ವಕಪ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಮತ್ತೊಂದೆಡೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂರನೇ ಪಂದ್ಯದಲ್ಲಿ ಸಿಸಂದ ಮಗಾಲಾ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು. ಈ ಗಾಯದಿಂದ ಚೇತರಿಸಿಕೊಳ್ಳಲು ಕನಿಷ್ಠ 2 ತಿಂಗಳು ತೆಗೆದುಕೊಳ್ಳಲಿದ್ದಾರೆ ಎಂದು ವೈದ್ಯಕೀಯ ವರದಿಗಳು ಹೇಳಿವೆ. ಹೀಗಾಗಿ ಮಗಲಾ ಅವರನ್ನೂ ಕೂಡ ಸೌತ್ ಆಫ್ರಿಕಾ ವಿಶ್ವಕಪ್​ ತಂಡದಿಂದ ಕೈ ಬಿಡಲಾಗಿದೆ.

ಈ ಇಬ್ಬರು ವೇಗಿಗಳ ಬದಲಿ ಆಟಗಾರರಾಗಿ ಆಂಡಿಲೆ ಫೆಹ್ಲುಕ್ವಾಯೊ ಮತ್ತು ಲಿಝಾಡ್ ವಿಲಿಯಮ್ಸ್ ಸೌತ್ ಆಫ್ರಿಕಾ 15 ಸದಸ್ಯರ ವಿಶ್ವಕಪ್​ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಸೌತ್ ಆಫ್ರಿಕಾ ವಿಶ್ವಕಪ್​ ತಂಡ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಝಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್, ತಬ್ರೇಝ್ ಶಂಸಿ, ಕಗಿಸೊ ರಬಾಡ, ಆಂಡಿಲೆ ಫೆಹ್ಲುಕ್ವಾಯೊ ಮತ್ತು ಲಿಝಾಡ್ ವಿಲಿಯಮ್ಸ್.

ಇದನ್ನೂ ಓದಿ: ಏಕದಿನ ವಿಶ್ವಕಪ್ ಗೆಲ್ಲಬಲ್ಲ 5 ತಂಡಗಳನ್ನು ಹೆಸರಿಸಿದ ಸುರೇಶ್ ರೈನಾ

ಏಕದಿನ ವಿಶ್ವಕಪ್​ ಯಾವಾಗ?

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಏಕದಿನ ವಿಶ್ವಕಪ್​ನ ಸಂಪೂರ್ಣ ವೇಳಾಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.