AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಔಟಾದ ತಕ್ಷಣ ಸ್ಟೇಡಿಯಂನಲ್ಲಿದ್ದ ಅನುಷ್ಕಾ ಶರ್ಮಾ ಏನು ಮಾಡಿದ್ರು ಗೊತ್ತೇ?

RCB vs KKR, IPL 2023: ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಡುಪ್ಲೆಸಿಸ್ ಹಾಗೂ ಮ್ಯಾಕ್ಸ್​ವೆಲ್ ಬೇಗನೆ ಔಟಾಗಿ ಪೆವಿಲಿಯನ್ ಸೇರಿಕೊಂಡಿದ್ದರೂ ವಿರಾಟ್ ಕೊಹ್ಲಿ ಗೆಲುವಿಗಾಗಿ ಹೋರಾಡಿದರು. ಆದರೆ, ಈ ಹೋರಾಟ 13ನೇ ಓವರ್​ನಲ್ಲಿ ಅಂತ್ಯವಾಯಿತು.

Virat Kohli: ವಿರಾಟ್ ಕೊಹ್ಲಿ ಔಟಾದ ತಕ್ಷಣ ಸ್ಟೇಡಿಯಂನಲ್ಲಿದ್ದ ಅನುಷ್ಕಾ ಶರ್ಮಾ ಏನು ಮಾಡಿದ್ರು ಗೊತ್ತೇ?
Virat Kohli and Anushka Sharma
Vinay Bhat
|

Updated on:Apr 27, 2023 | 10:50 AM

Share

16ನೇ ಆವತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (RCB vs KKR) ನಡುವಣ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು. ಗೆಲ್ಲಬಹುದಾಗಿದ್ದ ಈ ಪಂದ್ಯದಲ್ಲಿ ಆರ್​ಸಿಬಿ ಸೋತರೆ ಕೆಕೆಆರ್ 21 ರನ್​ಗಳ ಜಯ ಸಾಧಿಸಿತು. ಬೌಲಿಂಗ್​ನಲ್ಲಿ ಆರ್​ಸಿಬಿ ಬೌಲರ್​ಗಳು ಸಂಪೂರ್ಣ ವೈಫಲ್ಯ ಅನುಭವಿಸಿದರು. ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಅರ್ಧಶತಕ ಸಿಡಿಸಿ ಹೋರಾಟ ನಡೆಸಿದ್ದು ಬಿಟ್ಟರೆ ಮತ್ಯಾರು ಸಾಥ್ ನೀಡಲಿಲ್ಲ. ಈ ಮೂಲಕ ಕೊಹ್ಲಿ, ಫಾಫ್ ಡುಪ್ಲೆಸಿಸ್ (Faf Duplessis), ಗ್ಲೆನ್ ಮ್ಯಾಕ್ಸ್​ವೆಲ್ ಆಡಿದರೆ ಮಾತ್ರ ಆರ್​ಸಿಬಿ ತಂಡಕ್ಕೆ ಜಯ, ಇಲ್ಲವಾದಲ್ಲಿ ಸೋಲು ಖಚಿತ ಎಂಬುದು ಮತ್ತೊಮ್ಮೆ ಸಾಭೀತಾಯಿತು.

ಡುಪ್ಲೆಸಿಸ್ ಹಾಗೂ ಮ್ಯಾಕ್ಸ್​ವೆಲ್ ಬೇಗನೆ ಔಟಾಗಿ ಪೆವಿಲಿಯನ್ ಸೇರಿಕೊಂಡಿದ್ದರೂ ಕೊಹ್ಲಿ ಗೆಲುವಿಗಾಗಿ ಹೋರಾಡಿದರು. ಆದರೆ, ಈ ಹೋರಾಟ 13ನೇ ಓವರ್​ನಲ್ಲಿ ಅಂತ್ಯವಾಯಿತು. ಆಂಡ್ರೆ ರಸೆಲ್ ಬೌಲಿಂಗ್​ನ ಮೊದಲ ಎಸೆತದಲ್ಲಿ ಕೊಹ್ಲಿ ಬಿಗ್ ಶಾಟ್ ಹೊಡೆಯಲು ಬ್ಯಾಟ್ ಬೀಸಿದರು. ಚೆಂಡು ಬೌಂಡರಿ ಗೆರೆ ದಾಟುವುದರಲ್ಲಿತ್ತು. ಆದರೆ, ವೆಂಕಟೇಶ್ ಅಯ್ಯರ್ ಹಿಡಿದ ರೋಚಕ ಕ್ಯಾಚ್​ನಿಂದ ಕೊಹ್ಲಿ ಔಟಾಗಬೇಕಾಯಿತು. ವಿರಾಟ್​ಗೆ ತಾನು ಔಟಾಗಿದ್ದನ್ನು ನಂಬಲು ಸಾಧ್ಯವಾಗಲಿಲ್ಲ. ಅತ್ತ ಪಂದ್ಯ ವೀಕ್ಷಿಸಲು ಬಂದಿದ್ದ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ಒಂದು ಕ್ಷಣ ಸ್ತಬ್ಧರಾದರು. ಬೇಸರದಿಂದ ಇರುವುದು ಕ್ಯಾಮೆರಾದಲ್ಲಿ ಸೆರೆ ಆಗಿದೆ.

ಇದನ್ನೂ ಓದಿ
Image
Delhi Capitals: ಡೆಲ್ಲಿ ಕ್ಯಾಪಿಟಲ್ಸ್ ಸ್ಟಾರ್ ಆಟಗಾರನಿಂದ ಮಹಿಳೆಯ ಜೊತೆ ಅನುಚಿತ ವರ್ತನೆ: ಫ್ರಾಂಚೈಸಿಯಿಂದ ಶಾಕಿಂಗ್ ನಿರ್ಧಾರ
Image
Virat Kohli: ಪಂದ್ಯ ಮುಗಿದ ಬಳಿಕ ತಾಳ್ಮೆ ಕಳೆದುಕೊಂಡ ವಿರಾಟ್ ಕೊಹ್ಲಿ: ಕೋಪದಲ್ಲಿ ಆಡಿದ ಮಾತುಗಳೇನು ನೋಡಿ
Image
RR vs CSK, IPL 2023: ಐಪಿಎಲ್​ನಲ್ಲಿಂದು ರಾಜಸ್ಥಾನ್- ಚೆನ್ನೈ ನಡುವೆ ಹೈವೋಲ್ಟೇಜ್ ಪಂದ್ಯ
Image
IPL 2023 Points Table: ಅಂಕಪಟ್ಟಿಯಲ್ಲಿ ಮೂರಕ್ಕೇರದ ಆರಕ್ಕಿಳಿಯದ RCB

IPL 2023 Orange and Purple Cap: ಈ ಸಲ ಕ್ಯಾಪ್ ನಮ್ದೆ..!

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಕೆಕೆಆರ್ ಪರವಾಗಿ ಜೇಸನ್ ರಾಯ್ (56) ಮತ್ತು ಎನ್. ಜಗದೀಶನ್ (27) ಮೊದಲ ವಿಕೆಟ್‌ಗೆ 83 ರನ್ ಗಳನ್ನು ಸೇರಿಸಿದರು. ನಾಯಕ ನಿತೀಶ್ ರಾಣ 21 ಎಸೆತಗಳಲ್ಲಿ 48 ರನ್ ಚಚ್ಚಿದರು. ವೆಂಕಟೇಶ್ ಅಯ್ಯರ್ 26 ಎಸೆತಗಳಲ್ಲಿ 31 ರನ್‌ಗಳನ್ನು ಗಳಿಸಿದರೆ, ರಿಂಕು ಸಿಂಗ್ 10 ಎಸೆತಗಳಲ್ಲಿ 18 ರನ್‌ ಗಳನ್ನು ದಾಖಲಿಸಿ ಅಜೇಯರಾಗಿ ಉಳಿದರು. ಇನಿಂಗ್ಸ್‌ನ ಕೊನೆಯಲ್ಲಿ ಡೇವಿಡ್ ವೈಸ್ 3 ಎಸೆತಗಳಲ್ಲಿ 2 ಸಿಕ್ಸರ್ ಬಾರಿಸಿದ ಪರಿಣಾಮ ಕೋಲ್ಕತ್ತಾ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್ ಕಲೆಹಾಕಿತು. ಆರ್​ಸಿಬಿ ಪರ ಹಸರಂಗ ಹಾಗೂ ವಿಜಯಕುಮಾರ್ ವೈಶಾಖ್ ತಲಾ 2 ವಿಕೆಟ್ ಪಡೆದರು.

ಕಠಿಣ ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ಆರಂಭದಲ್ಲೇ ನೆಲಕಚ್ಚಿತು. ಫಾಫ್ ಡುಪ್ಲೆಸಿಸ್ 17 ರನ್​ಗೆ ನಿರ್ಗಮಿಸಿದರು. ನಂತರ ಬಂದ ಶಹಬಾಜ್ ಅಹ್ಮದ್ (2) ಬಂದಷ್ಟೆ ವೇಗದಲ್ಲಿ ಪೆವಿಲಿಯನ್ ಸೇರಿದರು. ಗ್ಲೆನ್​ ಮ್ಯಾಕ್ಸ್‌ವೆಲ್ (5) ಆಟ ಈ ಬಾರಿ ನಡೆಯಲಿಲ್ಲ. ಈ ನಡುವೆ ಕ್ರೀಸ್​ಗೆ ಬಂದ ಮಹಿಪಾಲ್ ಲೊಮ್ರೋರ್ 34 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ಮತ್ತೊಂದೆಡೆ, 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದ ಕೊಹ್ಲಿ (54) ರಸೆಲ್ ಎಸೆತದಲ್ಲಿ ಕ್ಯಾಚಿತ್ತರು. ನಂತರ ಬಂದ ಬ್ಯಾಟರ್​ಗಳು ಯಾರು ಹೆಚ್ಚುಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. ಆರ್​ಸಿಬಿ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತಷ್ಟೆ. ಕೋಲ್ಕತ್ತಾ ಪರ ವರುಣ್ ಚಕ್ರವರ್ತಿ ಮೂರು ವಿಕೆಟ್ ಪಡೆದರೆ, ಸುಯಶ್ ಶರ್ಮಾ ಮತ್ತು ಆಂಡ್ರೆ ರಸೆಲ್ ತಲಾ ಎರಡು ವಿಕೆಟ್ ತಮ್ಮದಾಗಿಸಿಕೊಂಡರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:50 am, Thu, 27 April 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ