AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,6: ಅನ್ವಯ್ ದ್ರಾವಿಡ್ ಸ್ಫೋಟಕ ಹಾಫ್ ಸೆಂಚುರಿ

ಭಾರತೀಯ ಕ್ರಿಕೆಟ್‌ನ ದಿಗ್ಗಜರಾದ ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಅವರ ಪುತ್ರರು ಜೂನಿಯರ್ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗುತ್ತಿದ್ದಾರೆ. ಇತ್ತೀಚಿನ ವಿನೂ ಮಂಕಡ್ ಟ್ರೋಫಿ ಪಂದ್ಯದಲ್ಲಿ ದ್ರಾವಿಡ್ ಸುಪುತ್ರ ಅನ್ವಯ್ ದ್ರಾವಿಡ್ ಮತ್ತು ಸೆಹ್ವಾಗ್ ಪುತ್ರ ಆರ್ಯವೀರ್ ಮುಖಾಮುಖಿಯಾಗಿದ್ದು, ಉಭಯ ಆಟಗಾರರು ತಮ್ಮ ಸ್ಫೋಟಕ ಆಟದ ಮೂಲಕ ಆಯ್ಕೆಗಾರರ ಗಮನ ಸೆಳೆದಿದ್ದಾರೆ. 

6,6,6,6,6: ಅನ್ವಯ್ ದ್ರಾವಿಡ್ ಸ್ಫೋಟಕ ಹಾಫ್ ಸೆಂಚುರಿ
Anvay DravidImage Credit source: BCCI
TV9 Web
| Edited By: |

Updated on: Oct 13, 2026 | 12:11 PM

Share

ವಿನೂ ಮಂಕಡ್ ಟ್ರೋಫಿ ಅಂಡರ್-19 ಟೂರ್ನಿಯಲ್ಲಿ ಕರ್ನಾಟಕ ತಂಡದ ನಾಯಕ ಅನ್ವಯ್ ದ್ರಾವಿಡ್ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ವಿಶಾಖಪಟ್ಟಣದಲ್ಲಿರುವ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ದೆಹಲಿ ಹಾಗೂ ಕರ್ನಾಟಕ ತಂಡಗಳು ಮುಖಾಮುಖಿಯಾಗಿದ್ದವು.

ವಿಶೇಷ ಎಂದರೆ ದೆಹಲಿ ತಂಡವನ್ನು ವೀರೇಂದ್ರ ಸೆಹ್ವಾಗ್ ಪುತ್ರ ಆರ್ಯವೀರ್ ಸೆಹ್ವಾಗ್ ಮುನ್ನಡೆಸಿದರೆ, ಕರ್ನಾಟಕ ತಂಡಕ್ಕೆ ರಾಹುಲ್ ದ್ರಾವಿಡ್ ಅವರ ಪುತ್ರ ಅನ್ವಯ್ ದ್ರಾವಿಡ್ ಸಾರಥ್ಯವಹಿಸಿದ್ದರು. ಹೀಗಾಗಿಯೇ ಈ ಪಂದ್ಯವು ಎಲ್ಲರ ಗಮನ ಸೆಳೆದಿತ್ತು.

ಅನ್ವಯ್ ಸಿಡಿಲಬ್ಬರ:

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ರೋಹಿತ್ ರೆಡ್ಡಿ (70) ಹಾಗೂ ನಿತೀಶ್ ಆರ್ಯ (111) ಭರ್ಜರಿ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ಧ್ರುವ್ ಕಿಶನ್ 103 ರನ್​ಗಳ​ ಇನಿಂಗ್ಸ್​ನೊಂದಿಗೆ ರನ್ ವೇಗವನ್ನು ಹೆಚ್ಚಿಸಿದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅನ್ವಯ್ ದ್ರಾವಿಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 41 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 7 ಫೋರ್​ಗಳೊಂದಿಗೆ ಅನ್ವಯ್ ಅಜೇಯ 85 ರನ್ ಸಿಡಿಸಿದರು. ಈ ವಿಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಕರ್ನಾಟಕ ತಂಡ ನಿಗದಿತ 49 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 418 ರನ್ ಕಲೆಹಾಕಿತು.

198 ರನ್​ಗಳ ಭರ್ಜರಿ ಜಯ:

419 ರನ್​ಗಳ ಕಠಿಣ ಗುರಿ ಪಡೆದ ದೆಹಲಿ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅದರಲ್ಲೂ ನಾಯಕ ಆರ್ಯವೀರ್ ಸೆಹ್ವಾಗ್ ಕೇವಲ 32 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಇತ್ತ ಶಿಸ್ತುಬದ್ಧ ದಾಳಿ ಸಂಘಟಿಸಿದ ಕರ್ನಾಟಕ ಬೌಲರ್​ಗಳು 41.1 ಓವರ್​ಗಳಲ್ಲಿ ದೆಹಲಿ ತಂಡವನ್ನು 220 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಈ ಮೂಲಕ ಕರ್ನಾಟಕ ತಂಡ 198 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಇದನ್ನೂ ಓದಿ: 2 ವರ್ಷಗಳ ಒಪ್ಪಂದ: ಸಚಿನ್ ವಿಶ್ವ ದಾಖಲೆ ಮುರಿಯಲು ರೂಟ್​ಗೆ ರಹದಾರಿ

ಭವಿಷ್ಯದ ತಾರೆಗಳು:

ಇತ್ತೀಚೆಗಷ್ಟೇ ಭಾರತದ ಅಂಡರ್-19 ತಂಡಕ್ಕೆ ಪಾದಾರ್ಪಣೆ ಮಾಡಿರುವ ಅನ್ವಯ್ ದ್ರಾವಿಡ್ ಪ್ರಸಕ್ತ ಸರಣಿಯಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಇದಕ್ಕೂ ಮುನ್ನ ಅವರು ಚಂಡೀಗಢ್ ವಿರುದ್ಧ ಕೇವಲ 62 ಎಸೆತಗಳಲ್ಲಿ 104 ರನ್ ಸಿಡಿಸಿದ್ದರು. ದೇಶಿ ಕ್ರಿಕೆಟ್‌ನಲ್ಲಿ ಸದ್ದು ಮಾಡುತ್ತಿರುವ ಅನ್ವಯ್ ಮತ್ತು ಆರ್ಯವೀರ್ ಇಬ್ಬರೂ ಮುಂಬರುವ ನವೆಂಬರ್‌ನಲ್ಲಿ ನಡೆಯಲಿರುವ ಅಂಡರ್-19 ಏಷ್ಯಾ ಕಪ್‌ಗಾಗಿ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಬಲವಾದ ನಿರೀಕ್ಷೆಯಲ್ಲಿದ್ದಾರೆ.

Follow Us
TV9 Web
TV9 Web

TV9 Kannada

Read More
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ