ದಕ್ಷಿಣ ಆಫ್ರಿಕಾದಲ್ಲಿ ನಡೆದ ಚೊಚ್ಚಲ 19 ವರ್ಷದೊಳಗಿನವರ ಟಿ20 ವಿಶ್ವಕಪ್ (Under 19W T20 World Cup) ಅನ್ನು ಭಾರತ ಮಹಿಳಾ ತಂಡ ಗೆದ್ದು ಬೀಗಿದೆ. ಇಂಗ್ಲೆಂಡ್ ಎದುರು ನಡೆದ ಫೈನಲ್ ಕಾದಾಟದಲ್ಲಿ ಪ್ರಬಲ ಬ್ಯಾಟಿಂಗ್ ಮತ್ತು ಬೌಲಿಂಗ್ ಪ್ರದರ್ಶನ ನೀಡಿದ 19 ವರ್ಷದೊಳಗಿನ ವನಿತೆಯರು ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಐಸಿಸಿಯಿಂದ ಮೊದಲ ಬಾರಿಗೆ ಆಯೋಜನೆಗೊಂಡ 19 ವರ್ಷದೊಳಗಿನವರ ವನಿತೆಯರ ವಿಶ್ವಕಪ್ನಲ್ಲಿ ಭಾರತದ ವುಮೆನ್ ಇನ್ ಬ್ಲೂ ತಂಡ ಜಯ ಸಾಧಿಸಿದೆ. ಶಫಾಲಿ ವರ್ಮಾ (Shafali Verma) ನಾಯಕತ್ವದ ಭಾರತ ಲೋ ಸ್ಕೋರ್ ಗೇಮ್ನಲ್ಲಿ 7 ವಿಕೆಟ್ ಅಂತರದಿಂದ ಗೆಲುವು ಕಂಡಿತು. ಭಾರತ ತಂಡ ಬ್ಯಾಟಿಂಗ್, ಬೌಲಿಂಗ್ ಜೊತೆಗೆ ಫೀಲ್ಡಿಂಗ್ನಲ್ಲೂ ಅಮೋಘ ಪ್ರದರ್ಶನ ತೋರಿತು. ಅದರಲ್ಲೂ ಅರ್ಚನಾ ದೇವಿ (Archana Devi) ಹಿಡಿದ ಒಂದು ಕ್ಯಾಚ್ ಪಂದ್ಯದ ಗತಿಯನ್ನು ಬದಲಾಯಿಸಿತು ಎಂದರೆ ತಪ್ಪಗಲಾರದು.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ಇಂಗ್ಲೆಂಡ್ ಅಂಡರ್ 19 ತಂಡ ಮೊದಲ ಓವರ್ನಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. 50 ರನ್ಗೂ ಮೊದಲೇ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. 68 ರನ್ಗೆ ಸರ್ವಪತನ ಕಂಡಿತು. ತಂಡದ ಪರ ರಯಾನಾ ಮ್ಯಾಕ್ಡೊನಾಲ್ಡ್ ಗೇ 19 ರನ್ ಗಳಿಸಿದ್ದೇ ಗರಿಷ್ಠ ಸ್ಕೋರ್ ಆಗಿತ್ತು. ಈ ಮುಖ್ಯ ವಿಕೆಟ್ ಕೀಳಲು ಸಹಕಾರಿ ಆಗಿದ್ದು ಅರ್ಚನಾ ಹಿಡಿದ ಅದ್ಭುತ ಕ್ಯಾಚ್. 12ನೇ ಓವರ್ನ ಪರ್ಶವಿ ಚೋಪ್ರಾ ಬೌಲಿಂಗ್ನಲ್ಲಿ ಅರ್ಚನಾ ಅವರು ಡೈವ್ ಬಿದ್ದು ರೋಚಕ ಕ್ಯಾಚ್ ಹಿಡಿದರು. ಈ ಕ್ಯಾಚ್ ಪಂದ್ಯದ ಗತಿಯನ್ನೇ ಬದಲಾಯಿಸಿತು. ಮುಂದಿನ 25 ರನ್ಗಳಲ್ಲಿ ಇಂಗ್ಲೆಂಡ್ ಆಲೌಟ್ ಆಯಿತು. ಭಾರತ ಪರ ಟಿಟಾಸ್ ಸಧು, ಅರ್ಚನಾ ದೇವಿ ಹಾಗೂ ಪರ್ಶವಿ ಚೋಪ್ರಾ ತಲಾ 2 ವಿಕೆಟ್ ಪಡೆದರು.
Archana Devi takes a splendid one-handed blinder with a full length dive to dismiss Ryana. The fielding has been top class by Team India.
Watch #INDvENGFinalOnFanCode https://t.co/T4vX72TcLA
.
.#U19T20WorldCup #TeamIndia #INDvENG pic.twitter.com/nUPQxopaAx— FanCode (@FanCode) January 29, 2023
Novak Djokovic: ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ನೋವಾಕ್ ಜೊಕೊವಿಕ್
69 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತದ ವನಿತೆಯರು ಆರಂಭಿಕ ನಷ್ಟ ಅನುಭವಿಸಿದರು. ಉತ್ತಮ ಫಾರ್ಮ್ನಲ್ಲಿದ್ದು ಸೆಮಿಸ್ನಲ್ಲಿ ತಂಡಕ್ಕೆ ಆಸರೆ ಆಗಿದ್ದ ಶ್ವೇತಾ ಸೆಹ್ರಾವತ್ 5 ರನ್ಗೆ ಔಟಾಗಿ ನಿರಾಸೆ ಮೂಡಿಸಿದರು. ನಂತರ ಬಂದ ಸೌಮ್ಯ ತಿವಾರಿ ಮತ್ತು ಆರಂಭಿಕರಾಗಿ ಬಂದಿದ್ದ ನಾಯಕಿ ಶೆಫಾಲಿ ವರ್ಮಾ ಅವರ ಜೊತೆ ಇನ್ನಿಂಗ್ಸ್ ಕಟ್ಟಿದರು. ತಂಡದ ಮೊತ್ತ 20 ರನ್ ಆಗಿದ್ದಾಗ ನಾಯಕಿ ಕ್ಯಾಚ್ ಔಟ್ ಆಗಿ ಪೆವಿಲಿಯನ್ಗೆ ಮರಳಿರು. ನಂತರ ಗೊಂಗಡಿ ತ್ರಿಶಾ ಮತ್ತು ತಿವಾರಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯದರು. ಗೆಲುವಿಗೆ ಎರಡು ರನ್ ಬಾಕಿ ಇರುವಾಗ ತ್ರಿಶಾ (24) ವಿಕೆಟ್ ಕಳೆದುಕೊಂಡರು. ಸೌಮ್ಯ (24) ಅವರು ಅಜೇಯರಾಗಿ ತಂಡಕ್ಕೆ ಗೆಲುವು ತಂದಿತ್ತರು. ಭಾರತ 14 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿ ಜಯ ಸಾಧಿಸಿತು.
ಟಿ20 ವಿಶ್ವಕಪ್ ಫೈನಲ್‌ನಲ್ಲಿ ಶಫಾಲಿ ವರ್ಮಾ ನಾಯಕತ್ವದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಇತಿಹಾಸ ರಚಿಸಿದ ಬೆನ್ನಲ್ಲೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು 19 ವರ್ಷದೊಳಗಿನ ಮಹಿಳೆಯರ ತಂಡ ಮತ್ತು ಸಹಾಯಕ ಸಿಬ್ಬಂದಿಗೆ 5 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶಾ, ”ಭಾರತೀಯ ಮಹಿಳಾ ಕ್ರಿಕೆಟ್ ಮುನ್ನುಗ್ಗುತ್ತಿದೆ. ಈ ವಿಶ್ವಕಪ್ ವಿಜಯೋತ್ಸವವು ಮಹಿಳಾ ಕ್ರಿಕೆಟ್‌ನ ಸ್ಥಾನಮಾನವನ್ನು ಮತ್ತಷ್ಟು ಎತ್ತರಕ್ಕೇರಿಸಿದೆ. ಈ ಸಂತೋಷದ ಘಳಿಗೆಯಲ್ಲಿ ಇಡೀ ತಂಡ ಮತ್ತು ಸಹಾಯಕ ಸಿಬ್ಬಂದಿಗೆ 5 ಕೋಟಿಯನ್ನು ಘೋಷಿಸುತ್ತಿರುವುದು ಸಂತೋಷದಾಯಕ ವಿಷಯ ಎಂದು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ವಿಶ್ವಕಪ್ ವಿಜೇತ ತಂಡವನ್ನು ಭಾರತ-ನ್ಯೂಜಿಲೆಂಡ್ ನಡುವಣ 3ನೇ ಟಿ20 ಪಂದ್ಯದ ವೇಳೆ ಗೌರವಿಸಲಾಗುವುದು,” ಎಂದು ತಿಳಿಸಿದ್ದಾರೆ.
Women’s Cricket in India is on the upswing and the World Cup triumph has taken the stature of women’s cricket several notches higher. I am delighted to announce INR 5 crore for the entire team and support staff as prize money. This is surely a path-breaking year.
— Jay Shah (@JayShah) January 29, 2023
ಚೊಚ್ಚಲ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ”ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವಿಶೇಷ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಅಭಿನಂದನೆಗಳು. ನಮ್ಮ ಆಟಗಾರ್ತಿಯರು ಅತ್ಯುತ್ತಮ ಆಟವಾಡಿದ್ದಾರೆ. ಇವರ ಯಶಸ್ಸು ಮುಂಬರುವ ಆಟಗಾರ್ತಿಯರಿಗೆ ಸ್ಫೂರ್ತಿ ನೀಡುತ್ತದೆ. ತಂಡದ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು,” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ