ಭಾರತ ಮತ್ತು ಪಾಕಿಸ್ತಾನ (IND vs PAK) ನಡುವಿನ ಹೈವೋಲ್ಟೇಜ್ ಕದನಕ್ಕಾಗಿ ಇಡೀ ವಿಶ್ವವೇ ಎದುರು ನೋಡುತ್ತಿದೆ. ಈ ಬದ್ಧವೈರಿಗಳ ಕಾಳಗಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದೆ. ಅಕ್ಟೋಬರ್ 14 ರಂದು ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ (Narendra Modi Stadium in Ahmedabad) ಈ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಕ್ರಿಕೆಟ್ ಲೋಕದಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವಿನ ಪಂದ್ಯವೆಂದರೇ ಅದಕ್ಕೆ ಬೇರೆಯದ್ದೇ ಆದ ವಿಶೇಷ ಸ್ಥಾನಮಾನವಿದೆ. ಅದರಲ್ಲೂ ವಿಶ್ವಕಪ್ (ICC World Cup 2023)ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಅಭಿಮಾನಿಗಳಿಗೆ ಹಬ್ಬವಾಗಿದೆ. ಹೀಗಾಗಿ ಈ ಪಂದ್ಯವನ್ನು ಮತ್ತಷ್ಟು ವಿಶೇಷಗೊಳಿಸುವ ನಿರ್ಧಾರಕ್ಕೆ ಬಂದಿರುವ ಬಿಸಿಸಿಐ (BCCI), ಈ ಪಂದ್ಯ ಆರಂಭವಾಗುವುದಕ್ಕೂ ಮುನ್ನ ದೇಶದ ಸ್ಟಾರ್ ಕಲಾವಿದರ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಿದೆ.
ಇದೀಗ ಬಿಸಿಸಿಐ ಈ ಪಂದ್ಯಕ್ಕೂ ಮುನ್ನ ನಡೆಯಲ್ಲಿರುವ ಸಮಾರಂಭದಲ್ಲಿ ಕಾರ್ಯಕ್ರಮ ನೀಡಲಿರುವ ಕಲಾವಿದರ ಹೆಸರನ್ನು ಸಹ ಅಧಿಕೃತವಾಗಿ ಬಹಿರಂಗಪಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಬಿಸಿಸಿಐ, ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೂ ಮುನ್ನ ವಿಶೇಷ ಪ್ರದರ್ಶನ ನೀಡಲಿದೆ ಎಂದು ಹೇಳಿದೆ. ಪಂದ್ಯ ಆರಂಭಕ್ಕೂ ಮುನ್ನ ನಡೆಯುವ ಈ ಕಾರ್ಯಕ್ರಮ ಮಧ್ಯಾಹ್ನ 12:30ಕ್ಕೆ ಆರಂಭವಾಗಲಿದೆ. ಮಧ್ಯಾಹ್ನ 1:30ಕ್ಕೆ ಟಾಸ್ ನಡೆಯಲಿದ್ದು, 2 ಗಂಟೆಗೆ ಪಂದ್ಯ ಆರಂಭವಾಗಲಿದೆ. ಈ ಪಂದ್ಯವನ್ನು ವೀಕ್ಷಿಸಲು ದೇಶದ ಹಲವು ದೊಡ್ಡ ಕಲಾವಿದರು, ರಾಜಕಾರಣಿಗಳೂ ಆಗಮಿಸಲಿದ್ದಾರೆ ಎಂದು ತಿಳಿಸಿದೆ.
ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಸಂಗೀತ ಸಮಾರಂಭ; ಸಚಿನ್, ರಜನಿಕಾಂತ್, ಅಮಿತಾಬ್ ಉಪಸ್ಥಿತಿ..!
ಪಂದ್ಯದ ಪೂರ್ವ ಶೋನಲ್ಲಿ ಅರಿಜಿತ್ ಸಿಂಗ್ ತಮ್ಮ ಹಾಡುಗಳ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಈ ವರ್ಷದ ಐಪಿಎಲ್‌ನ ಸಮಾರೋಪ ಸಮಾರಂಭದಲ್ಲಿಯೂ ಅರಿಜಿತ್ ಸಿಂಗ್ ಕೂಡ ಪ್ರದರ್ಶನ ನೀಡಿದ್ದರು. ಆ ಪ್ರದರ್ಶನವೂ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿಯೇ ನಡೆದಿತ್ತು. ಅರಿಜಿತ್ ಅವರ ಹೊರತಾಗಿ, ಶಂಕರ್ ಮಹಾದೇವನ್ ಮತ್ತು ಪಂಜಾಬಿ ಗಾಯಕ ಸುಖ್ವಿಂದರ್ ಸಿಂಗ್ ಕೂಡ ಈ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲಿದ್ದಾರೆ.
Kickstarting the much-awaited #INDvPAK clash with a special performance! 🎵
Brace yourselves for a mesmerising musical special ft. Arijit Singh at the largest cricket ground in the world- The Narendra Modi Stadium! 🏟️
Join the pre-match show on 14th October starting at 12:30… pic.twitter.com/K6MYer947D
— BCCI (@BCCI) October 12, 2023
🎶 Catch Shankar Mahadevan LIVE before the big match at The Narendra Modi Stadium in Ahmedabad, setting the stage for #INDvPAK like never before! 🙌
Experience the pre-match show at the largest cricket ground in the world on 14th October, starting at 12:30 PM!#CWC23 pic.twitter.com/WMYRx0mR08
— BCCI (@BCCI) October 12, 2023
Sukhwinder Singh is ready to make the occasion even more special! 🎵
Catch his sensational performance before the start of the #INDvPAK game on 14th October 🙌
Witness it LIVE at The Narendra Modi Stadium in Ahmedabad, starting at 12:30 PM 👌#CWC23 pic.twitter.com/beAHOMOfnZ
— BCCI (@BCCI) October 12, 2023
ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ಮೂರನೇ ಪಂದ್ಯ ಇದಾಗಿದೆ. ಉಭಯ ತಂಡಗಳು ಆಡಿದ ಎರಡೂ ಆರಂಭಿಕ ಪಂದ್ಯಗಳನ್ನು ಗೆದ್ದಿವೆ. ಪಾಕಿಸ್ತಾನ ತನ್ನ ಮೊದಲ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡವನ್ನು ಮಣಿಸಿದ್ದರೆ, ಎರಡನೇ ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸಿತ್ತು. ಇತ್ತ ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ, ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಸೋಲಿಸಿತು. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಪ್ರತಿಷ್ಠೆಯ ಕಣವಾಗಿದ್ದು, ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ತಮ್ಮ ಗೆಲುವಿನ ಸರಣಿಯನ್ನು ಮುಂದುವರೆಸಲು ಬಯಸಿವೆ.
Published On - 6:42 am, Fri, 13 October 23