AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SMAT 2025: W,W,W.. ಅರ್ಜುನ್ ಮಾರಕ ದಾಳಿಗೆ ತತ್ತರಿಸಿದ ಮಧ್ಯಪ್ರದೇಶ; ಗೋವಾಗೆ 2ನೇ ಜಯ

Arjun Tendulkar's 3-Wicket Haul: ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಗೋವಾ ತಂಡಕ್ಕೆ ಅದ್ಭುತ ಗೆಲುವು ತಂದುಕೊಟ್ಟಿದ್ದಾರೆ. ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ಮಾರಕ ಬೌಲಿಂಗ್ ದಾಳಿ ನಡೆಸಿದ ಅರ್ಜುನ್ ಮೂರು ವಿಕೆಟ್ ಕಬಳಿಸಿದರು. ಪವರ್‌ಪ್ಲೇನಲ್ಲಿಯೇ ಪ್ರಮುಖ ವಿಕೆಟ್ ಉರುಳಿಸಿ ಎದುರಾಳಿಯನ್ನು ಕಟ್ಟಿಹಾಕಿದರು. ಅರ್ಜುನ್ ಅವರ ಆಲ್‌ರೌಂಡ್ ಪ್ರದರ್ಶನದಿಂದ ಗೋವಾ 7 ವಿಕೆಟ್‌ಗಳಿಂದ ಜಯಭೇರಿ ಬಾರಿಸಿತು.

SMAT 2025: W,W,W.. ಅರ್ಜುನ್ ಮಾರಕ ದಾಳಿಗೆ ತತ್ತರಿಸಿದ ಮಧ್ಯಪ್ರದೇಶ; ಗೋವಾಗೆ 2ನೇ ಜಯ
Arjun Tendulkar
ಪೃಥ್ವಿಶಂಕರ
|

Updated on: Dec 02, 2025 | 5:57 PM

Share

ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar) ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ (Syed Mushtaq Ali Trophy) ಗೋವಾ ತಂಡಕ್ಕೆ ಅದ್ಭುತ ಗೆಲುವು ತಂದುಕೊಟ್ಟಿದ್ದಾರೆ. ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ಮಾರಕ ಬೌಲಿಂಗ್ ದಾಳಿ ನಡೆಸಿದ ಅರ್ಜುನ್ ಮೂರು ವಿಕೆಟ್ ಕಬಳಿಸಿದರು. ಪವರ್‌ಪ್ಲೇನಲ್ಲಿಯೇ ತಮ್ಮ ಬೌಲಿಂಗ್‌ ಮ್ಯಾಜಿಕ್ ತೋರಿದ ಅರ್ಜುನ್ ಎದುರಾಳಿ ತಂಡವನ್ನು ಕಟ್ಟಿಹಾಕಿದರು. ಇದರ ಫಲವಾಗಿ ಗೋವಾ ತಂಡ ಮಧ್ಯಪ್ರದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿ ತನ್ನ ಎರಡನೇ ಗೆಲುವುನ್ನು ದಾಖಲಿಸಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮಧ್ಯಪ್ರದೇಶ 170 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಗೋವಾ 18.3 ಓವರ್‌ಗಳಲ್ಲಿ ಜಯದ ನಗೆ ಬೀರಿತು. ತಂಡದ ಪರ ನಾಯಕ ಸುಯಾಶ್ ಪ್ರಭುದೇಸಾಯಿ ಅಜೇಯ 75 ರನ್ ಬಾರಿಸಿದರೆ, ಅಭಿನವ್ ತೇಜ್ರಾನಾ 55 ರನ್‌ಗಳ ಇನ್ನಿಂಗ್ಸ್ ಆಡಿದರು. ಇವರೊಂದಿಗೆ ಬೌಲಿಂಗ್​ನಲ್ಲಿ 3 ವಿಕೆಟ್ ಉರುಳಿಸಿದ ಅರ್ಜುನ್ ತೆಂಡೂಲ್ಕರ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಅರ್ಜುನ್ ಅದ್ಭುತ ಪ್ರದರ್ಶನ

ಗೋವಾ ಪರ ಮೊದಲ ಓವರ್ ಬೌಲ್ ಮಾಡಿದ ಅರ್ಜುನ್ ತೆಂಡೂಲ್ಕರ್ , ಐದನೇ ಎಸೆತದಲ್ಲಿ ಶಿವಾಂಗ್ ಕುಮಾರ್ ಅವರನ್ನು ಔಟ್ ಮಾಡಿದರು. ಶಿವಾಂಗ್ ತಮ್ಮ ಖಾತೆಯನ್ನು ತೆರೆಯಲೂ ವಿಫಲರಾದರು. ನಂತರ ಮುಂದಿನ ಓವರ್‌ನಲ್ಲಿ ಅಂಕುಶ್ ಸಿಂಗ್ ಅವರನ್ನು ಔಟ್ ಮಾಡಿದರು. ಡೆತ್ ಓವರ್‌ಗಳಲ್ಲಿ ಅರ್ಜುನ್ ಸ್ವಲ್ಪ ದುಬಾರಿಯಾದರೂ, ಪ್ರಮುಖ ಬ್ಯಾಟ್ಸ್‌ಮನ್ ವೆಂಕಟೇಶ್ ಅಯ್ಯರ್ ಅವರನ್ನು ಕೇವಲ 6 ರನ್‌ಗೆ ಪೆವಿಲಿಯನ್​ಗಟ್ಟಿದರು ಇದು ಅವರ ಮೂರನೇ ವಿಕೆಟ್ ಆಗಿತ್ತು. ಮಧ್ಯಪ್ರದೇಶ ಪರ ಹರ್‌ಪ್ರೀತ್ ಸಿಂಗ್ ಅಜೇಯ 80 ರನ್ ಬಾರಿಸಿದರೆ, ನಾಯಕ ರಜತ್ ಪತಿದಾರ್ ಕೇವಲ 29 ರನ್ ಗಳಿಸಿದರು. ಕೊನೆಯಲ್ಲಿ, ಅಂಕಿತ್ ವರ್ಮಾ ನಾಲ್ಕು ಸಿಕ್ಸರ್‌ಗಳನ್ನು ಒಳಗೊಂಡಂತೆ 34 ರನ್ ಸಿಡಿಸಿದರು.

ಬೌಲಿಂಗ್ ಜೊತೆಗೆ ಬ್ಯಾಟಿಂಗ್​ನಲ್ಲೂ ಕರ್ನಾಟಕವನ್ನು ಕಾಡಿದ ಅರ್ಜುನ್ ತೆಂಡೂಲ್ಕರ್

ಬ್ಯಾಟಿಂಗ್​ನಲ್ಲೂ ಅರ್ಜುನ್ ಕಮಾಲ್

ತಂಡದ ಪರ ಬೌಲಿಂಗ್ ಆರಂಭಿಸಿದ್ದ ಅರ್ಜುನ್ ತೆಂಡೂಲ್ಕರ್ ಬ್ಯಾಟಿಂಗ್​ನಲ್ಲೂ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಬಂದ ತಕ್ಷಣವೇ ಮೂರು ಬೌಂಡರಿ ಬಾರಿಸಿದ ಅರ್ಜುನ್ 16 ರನ್ ಗಳಿಸಿ ಔಟಾದರು. ನಂತರ ಜೊತೆಯಾದ ಅಭಿನವ್ ತಲ್ರೇಜಾ ಮತ್ತು ಸುಯೇದ್ ಪ್ರಭುದೇಸಾಯಿ ಇಬ್ಬರೂ 66 ಎಸೆತಗಳಲ್ಲಿ 89 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಲಲಿತ್ ಯಾದವ್ ಕೂಡ ಪ್ರಭುದೇಸಾಯಿ ಅವರೊಂದಿಗೆ ಕೇವಲ 27 ಎಸೆತಗಳಲ್ಲಿ 57 ರನ್‌ಗಳನ್ನು ಸೇರಿಸಿ ತಂಡದ ಗೆಲುವಿಗೆ ಸಹಾಯ ಮಾಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ