AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Tendulkar Engagement: ಅರ್ಜುನ್ ತೆಂಡೂಲ್ಕರ್ ಮದುವೆಯಾಗಲಿರುವ ಸಾನಿಯಾ ಚಂದೋಕ್ ಯಾರು?

Who is Saaniya Chandhok?: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಹಠಾತ್ತನೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಖಾಸಗಿ ಸಮಾರಂಭವೊಂದರಲ್ಲಿ, ಅವರು ಮುಂಬೈ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು ಸಾನಿಯಾ ಚಂದೋಕ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು. ಹಾಗಾದರೆ ಈ ಸಾನಿಯಾ ಚಂದೋಕ್ ಯಾರು?.

Arjun Tendulkar Engagement: ಅರ್ಜುನ್ ತೆಂಡೂಲ್ಕರ್ ಮದುವೆಯಾಗಲಿರುವ ಸಾನಿಯಾ ಚಂದೋಕ್ ಯಾರು?
Saaniya Chandhok Arjun Tendulkar
ಪ್ರೀತಿ ಭಟ್​, ಗುಣವಂತೆ
| Edited By: |

Updated on:Aug 14, 2025 | 9:57 AM

Share

ಬೆಂಗಳೂರು (ಆ. 14): ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅರ್ಜುನ್ ನಿಶ್ಚಿತಾರ್ಥ ಮಾಡಿಕೊಂಡಿರುವ ಹುಡುಗಿ ಸಾನಿಯಾ ಚಂದೋಕ್. ಮಾಧ್ಯಮ ವರದಿಗಳ ಪ್ರಕಾರ, ನಿಶ್ಚಿತಾರ್ಥವು ಖಾಸಗಿ ಆಗಿ ನಡೆದಿದೆ. ಇಲ್ಲಿ ಎರಡೂ ಕುಟುಂಬಗಳ ಪ್ರಮುಖ ವ್ಯಕ್ತಿಗಳು ಮಾತ್ರ ಹಾಜರಿದ್ದರು. 25 ವರ್ಷದ ಅರ್ಜುನ್ ತೆಂಡೂಲ್ಕರ್ ಇನ್ನೂ ಭಾರತ ಕ್ರಿಕೆಟ್ ತಂಡದ ಪರ ಆಡಲು ಅವಕಾಶ ಪಡೆದಿಲ್ಲ. ಆದರೆ ಅವರು ಐಪಿಎಲ್‌ನಲ್ಲಿ ಪಾದಾರ್ಪಣೆ ಮಾಡಿದ್ದಾರೆ.

ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿ, ಇಲ್ಲಿಯವರೆಗೆ 5 ಪಂದ್ಯಗಳನ್ನು ಆಡಿದ್ದಾರೆ, ಅದರಲ್ಲಿ ಅವರು 3 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದು ಅರ್ಜುನ್ ತೆಂಡೂಲ್ಕರ್ ಬಗ್ಗೆ, ಈಗ ನಾವು ಅವರ ವಧು ಸಾನಿಯಾ ಚಂದೋಕ್ ಯಾರು ಎಂಬುದನ್ನು ನೋಡುವುದಾದರೆ…

ಸಾನಿಯಾ ಚಾಂದೋಕ್ ಯಾರು?

ಸಾನಿಯಾ ಚಂದೋಕ್ ಮುಂಬೈ ಮೂಲದ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ರವಿ ಘಾಯ್ ಬ್ರೂಕ್ಲಿನ್ ಕ್ರೀಮರಿಯ ಮೂಲ ಕಂಪನಿಯಾದ ಗ್ರಾವಿಸ್ ಗ್ರೂಪ್‌ನ ಅಧ್ಯಕ್ಷರು. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ದಾಖಲೆಗಳ ಪ್ರಕಾರ, ಸಾನಿಯಾ ಮುಂಬೈ ಮೂಲದ ಮಿಸ್ಟರ್ ಪಾವ್ಸ್ ಪೆಟ್ ಸ್ಪಾ & ಸ್ಟೋರ್ ಎಲ್‌ಎಲ್‌ಪಿಯಲ್ಲಿ ನಿಯೋಜಿತ ಪಾಲುದಾರ ಮತ್ತು ನಿರ್ದೇಶಕಿಯೂ ಆಗಿದ್ದಾರೆ. ಇವರು ಅರ್ಜುನ್ ತೆಂಡೂಲ್ಕರ್ ಅವರ ಬಾಲ್ಯದ ಗೆಳತಿಕೂಡ ಹೌದು. ಸಾನಿಯಾ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಿಂದ ಪದವಿ ಪಡೆದಿದ್ದಾರೆ.

ಇದನ್ನೂ ಓದಿ
Image
ಸಾನಿಯಾ ಜೊತೆ ಅರ್ಜುನ್ ತೆಂಡೂಲ್ಕರ್ ನಿಶ್ಚಿತಾರ್ಥ
Image
ವೈರಲ್ ಫೋಟೋ ಬಗ್ಗೆ ಮೌನ ಮುರಿದ ಕರುಣ್ ನಾಯರ್
Image
ಆಸೀಸ್ ವಿರುದ್ಧ ಮೊದಲ ಏಕದಿನ ಪಂದ್ಯ ಗೆದ್ದ ಟೀಂ ಇಂಡಿಯಾ
Image
ಸಂಜುಗಾಗಿ ಈ ಮೂವರಲ್ಲಿ ಒಬ್ಬರನ್ನು ಕಳೆದುಕೊಳ್ಳುತ್ತಾ ಸಿಎಸ್​ಕೆ?

ಇಂಡಿಯಾ ಟುಡೇ ವರದಿಯ ಪ್ರಕಾರ, ಆತಿಥ್ಯ ಮತ್ತು ಆಹಾರ ವಲಯದಲ್ಲಿ ಪ್ರಸಿದ್ಧ ಹೆಸರಾಗಿರುವ ಘಾಯ್ ಕುಟುಂಬವು ಖಾಸಗಿಯಾಗಿ ನಿಶ್ಚಿತಾರ್ಥ ಸಮಾರಂಭವನ್ನು ನಡೆಸಿತು. ಕುಟುಂಬವು ಇಂಟರ್‌ಕಾಂಟಿನೆಂಟಲ್ ಹೋಟೆಲ್ ಮತ್ತು ಬ್ರೂಕ್ಲಿನ್ ಕ್ರೀಮರಿಯಂತಹ ವ್ಯವಹಾರಗಳನ್ನು ಹೊಂದಿದೆ. ಇದಲ್ಲದೆ, ಸಾನಿಯಾ ತನ್ನ ಸ್ಟೈಲಿಶ್ ಪರ್ಸನಾಲಿಟಿ, ಫ್ಯಾಷನ್ ಸೆನ್ಸ್​ನಿಂದ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಜನಪ್ರಿಯರಾಗಿದ್ದಾರೆ. ಟೂರ್, ಡಿಸೈನರ್ ಡ್ರೆಸ್ ಮತ್ತು ಸ್ಪೆಷಲ್ ಪಾರ್ಟಿಗಳು ಅವರ ಜೀವನದ ಪ್ರಮುಖ ಭಾಗವಾಗಿದೆ. ಸಮಯ ಸಿಕ್ಕಾಗಲೆಲ್ಲಾ ಅವರು ಪ್ರವಾಸಕ್ಕೆ ಹೋಗುತ್ತ ಇರುತ್ತಾರೆ.

IND vs ENG: ಅದು ನಕಲಿ; ವೈರಲ್ ಫೋಟೋ ಬಗ್ಗೆ ಮೌನ ಮುರಿದ ಕರುಣ್ ನಾಯರ್

ಅರ್ಜುನ್ ತೆಂಡೂಲ್ಕರ್ ಅವರ ವೃತ್ತಿಜೀವನ

25 ವರ್ಷದ ಅರ್ಜುನ್ ತೆಂಡೂಲ್ಕರ್ ತಮ್ಮ ದೇಶೀಯ ಕ್ರಿಕೆಟ್ ವೃತ್ತಿಜೀವನದಲ್ಲಿ ಇದುವರೆಗೆ 17 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರು 37 ವಿಕೆಟ್‌ಗಳನ್ನು ಪಡೆದಿದ್ದಾರೆ. ಸಚಿನ್ ಇದುವರೆಗೆ ಲಿಸ್ಟ್ ಎ ನಲ್ಲಿ 18 ಪಂದ್ಯಗಳನ್ನು ಆಡಿದ್ದಾರೆ ಮತ್ತು 25 ವಿಕೆಟ್‌ಗಳನ್ನು ಪಡೆದಿದ್ದಾರೆ. ಅದೇ ಸಮಯದಲ್ಲಿ, ಅವರು 24 ಟಿ20 ಪಂದ್ಯಗಳಲ್ಲಿ 27 ವಿಕೆಟ್‌ಗಳನ್ನು ಪಡೆದಿದ್ದಾರೆ.

ಅರ್ಜುನ್ ತೆಂಡೂಲ್ಕರ್ ಬ್ಯಾಟಿಂಗ್‌ನಲ್ಲಿಯೂ ಉತ್ತಮರು. ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 1 ಶತಕ ಮತ್ತು 2 ಅರ್ಧಶತಕಗಳನ್ನು ಹೊಂದಿದ್ದಾರೆ. ಅರ್ಜುನ್ ಈಗ ಗೋವಾ ಪರ ದೇಶೀಯ ಕ್ರಿಕೆಟ್ ಆಡುತ್ತಾರೆ. ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ಕೊನೆಯ ಪಂದ್ಯವನ್ನು (ಲಿಸ್ಟ್ ಎ) ಡಿಸೆಂಬರ್ 26, 2024 ರಂದು ಜೈಪುರ ವಿರುದ್ಧ ಆಡಿದ್ದರು. ಆ ಬಳಿಕ ಅವರು ಮೈದಾನದಲ್ಲಿ ಕಾಣಿಸಿಕೊಂಡಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:22 am, Thu, 14 August 25