AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಶ್ಚಿತಾರ್ಥದ ಬಳಿಕ ಆಡಿದ ಮೊದಲ ಪಂದ್ಯದಲ್ಲೇ ಅಬ್ಬರಿಸಿದ ಅರ್ಜುನ್ ತೆಂಡೂಲ್ಕರ್

Arjun Tendulkar's 5-Wicket Haul: ಅರ್ಜುನ್ ತೆಂಡೂಲ್ಕರ್ ಅವರು ಆಗಸ್ಟ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ನಂತರ ಮೊದಲ ಬಾರಿಗೆ ಕ್ರಿಕೆಟ್ ಪಂದ್ಯದಲ್ಲಿ ಭಾಗವಹಿಸಿ ಐದು ವಿಕೆಟ್‌ಗಳನ್ನು ಪಡೆದಿದ್ದಾರೆ. ಕರ್ನಾಟಕದಲ್ಲಿ ನಡೆದ ಕೆ. ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೋವಾ ಪರ ಆಡಿದ ಅವರು ಮಹಾರಾಷ್ಟ್ರ ವಿರುದ್ಧ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ.

ನಿಶ್ಚಿತಾರ್ಥದ ಬಳಿಕ ಆಡಿದ ಮೊದಲ ಪಂದ್ಯದಲ್ಲೇ ಅಬ್ಬರಿಸಿದ ಅರ್ಜುನ್ ತೆಂಡೂಲ್ಕರ್
Arjun Tendulkar
ಪೃಥ್ವಿಶಂಕರ
|

Updated on:Sep 10, 2025 | 8:52 PM

Share

ಕಳೆದ ಆಗಸ್ಟ್​​ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡು ತನ್ನ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar ) ಇದೀಗ ತಮ್ಮ ವೃತ್ತಿಜೀವನದತ್ತ ಗಮನ ಹರಿಸಿದ್ದಾರೆ. ನಿಶ್ಚಿತಾರ್ಥದ ಬಳಿಕ ಮೊದಲ ಬಾರಿಗೆ ಮೈದಾನದಲ್ಲಿ ಕಾಣಿಸಿಕೊಂಡಿರುವ ಅರ್ಜುನ್ ತೆಂಡೂಲ್ಕರ್ ತಮ್ಮ ಮಾರಕ ಬೌಲಿಂಗ್ ಮೂಲಕ 5 ವಿಕೆಟ್​ಗಳ ಗೊಂಚಲು ಪಡೆದಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಕೆ. ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೋವಾ ಹಾಗೂ ಮಹಾರಾಷ್ಟ್ರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಗೋವಾ ಪರ ಆಡುತ್ತಿರುವ ಅರ್ಜುನ್ ಬೌಲಿಂಗ್​ನಲ್ಲಿ ಮಿಂಚಿನ ಪ್ರದರ್ಶನ ನೀಡಿದ್ದಾರೆ.

5 ವಿಕೆಟ್‌ ಪಡೆದ ಅರ್ಜುನ್

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮಹಾರಾಷ್ಟ್ರ ತಂಡವು ಅರ್ಜುನ್ ಅವರ ಮಾರಕ ದಾಳಿಗೆ ನಲುಗಿ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 136 ರನ್​ಗಳಿಗೆ ಆಲೌಟ್ ಆಗಿದೆ. ಗೋವಾ ಪರ ಅರ್ಜುನ್ ತೆಂಡೂಲ್ಕರ್ ಅತ್ಯಧಿಕ 5 ವಿಕೆಟ್ ಪಡೆದರು. ಆ ಬಳಿಕ ಬ್ಯಾಟಿಂಗ್ ಆರಂಭಿಸಿರುವ ಗೋವಾ ತಂಡ ಅಭಿನವ್ ತೇಜ್ರಾನ ಅವರ ಅರ್ಧಶತಕದ ಸಹಾಯದಿಂದ ದಿನದಂತ್ಯಕ್ಕೆ 5 ವಿಕೆಟ್‌ ಕಳೆದುಕೊಂಡು 158 ರನ್‌ ಕಲೆಹಾಕಿದೆ.

ಆಗಸ್ಟ್​ನಲ್ಲಿ ನಿಶ್ಚಿತಾರ್ಥ

ಅರ್ಜುನ್ ತೆಂಡೂಲ್ಕರ್ ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಪ್ರಸಿದ್ಧ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು ಸಾನಿಯಾ ಚಾಂದೋಕ್ ಅವರನ್ನು ಅರ್ಜುನ್ ಮದುವೆಯಾಗಲಿದ್ದಾರೆ. ಇಬ್ಬರೂ ಆಗಸ್ಟ್ 13 ರಂದು ನಿಶ್ಚಿತಾರ್ಥ ಮಾಡಿಕೊಂಡರು. ಸಾನಿಯಾ ಚಾಂದೋಕ್ ಅವರ ಕುಟುಂಬವು ಹೋಟೆಲ್, ಆರೋಗ್ಯ-ಆಹಾರ ಮತ್ತು ಐಸ್ ಕ್ರೀಮ್ ವ್ಯವಹಾರವನ್ನು ನಡೆಸುತ್ತಿದೆ.

ನಿಶ್ಚಿತಾರ್ಥದ ಬಳಿಕ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡ ಅರ್ಜುನ್- ಸಾನಿಯಾ; ಫೋಟೋ ಹಂಚಿಕೊಂಡ ಸಚಿನ್

ಅರ್ಜುನ್ ವೃತ್ತಿಜೀವನ

ಅರ್ಜುನ್ ತೆಂಡೂಲ್ಕರ್ ಇದುವರೆಗೆ 17 ಪ್ರಥಮ ದರ್ಜೆ ಪಂದ್ಯಗಳಲ್ಲಿ 37 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೆ, ಅವರು ಲಿಸ್ಟ್ ಎ ನಲ್ಲಿ 18 ಪಂದ್ಯಗಳಲ್ಲಿ 25 ವಿಕೆಟ್‌ಗಳನ್ನು ಪಡೆದಿದ್ದಾರೆ. ಹಾಗೆಯೇ ಟಿ20ಯಲ್ಲಿ 27 ವಿಕೆಟ್‌ಗಳನ್ನು ಹೊಂದಿದ್ದಾರೆ. ಬ್ಯಾಟಿಂಗ್‌ನಲ್ಲಿ, ಅವರು ಪ್ರಥಮ ದರ್ಜೆ ಪಂದ್ಯದಲ್ಲಿ ಶತಕ ಕೂಡ ಬಾರಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 pm, Wed, 10 September 25

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ