
ಕಳೆದ ಆಗಸ್ಟ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡು ತನ್ನ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar ) ಇದೀಗ ತಮ್ಮ ವೃತ್ತಿಜೀವನದತ್ತ ಗಮನ ಹರಿಸಿದ್ದಾರೆ. ನಿಶ್ಚಿತಾರ್ಥದ ಬಳಿಕ ಮೊದಲ ಬಾರಿಗೆ ಮೈದಾನದಲ್ಲಿ ಕಾಣಿಸಿಕೊಂಡಿರುವ ಅರ್ಜುನ್ ತೆಂಡೂಲ್ಕರ್ ತಮ್ಮ ಮಾರಕ ಬೌಲಿಂಗ್ ಮೂಲಕ 5 ವಿಕೆಟ್ಗಳ ಗೊಂಚಲು ಪಡೆದಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಕೆ. ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೋವಾ ಹಾಗೂ ಮಹಾರಾಷ್ಟ್ರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಗೋವಾ ಪರ ಆಡುತ್ತಿರುವ ಅರ್ಜುನ್ ಬೌಲಿಂಗ್ನಲ್ಲಿ ಮಿಂಚಿನ ಪ್ರದರ್ಶನ ನೀಡಿದ್ದಾರೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮಹಾರಾಷ್ಟ್ರ ತಂಡವು ಅರ್ಜುನ್ ಅವರ ಮಾರಕ ದಾಳಿಗೆ ನಲುಗಿ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 136 ರನ್ಗಳಿಗೆ ಆಲೌಟ್ ಆಗಿದೆ. ಗೋವಾ ಪರ ಅರ್ಜುನ್ ತೆಂಡೂಲ್ಕರ್ ಅತ್ಯಧಿಕ 5 ವಿಕೆಟ್ ಪಡೆದರು. ಆ ಬಳಿಕ ಬ್ಯಾಟಿಂಗ್ ಆರಂಭಿಸಿರುವ ಗೋವಾ ತಂಡ ಅಭಿನವ್ ತೇಜ್ರಾನ ಅವರ ಅರ್ಧಶತಕದ ಸಹಾಯದಿಂದ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿದೆ.
ಅರ್ಜುನ್ ತೆಂಡೂಲ್ಕರ್ ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಪ್ರಸಿದ್ಧ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು ಸಾನಿಯಾ ಚಾಂದೋಕ್ ಅವರನ್ನು ಅರ್ಜುನ್ ಮದುವೆಯಾಗಲಿದ್ದಾರೆ. ಇಬ್ಬರೂ ಆಗಸ್ಟ್ 13 ರಂದು ನಿಶ್ಚಿತಾರ್ಥ ಮಾಡಿಕೊಂಡರು. ಸಾನಿಯಾ ಚಾಂದೋಕ್ ಅವರ ಕುಟುಂಬವು ಹೋಟೆಲ್, ಆರೋಗ್ಯ-ಆಹಾರ ಮತ್ತು ಐಸ್ ಕ್ರೀಮ್ ವ್ಯವಹಾರವನ್ನು ನಡೆಸುತ್ತಿದೆ.
ನಿಶ್ಚಿತಾರ್ಥದ ಬಳಿಕ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡ ಅರ್ಜುನ್- ಸಾನಿಯಾ; ಫೋಟೋ ಹಂಚಿಕೊಂಡ ಸಚಿನ್
ಅರ್ಜುನ್ ತೆಂಡೂಲ್ಕರ್ ಇದುವರೆಗೆ 17 ಪ್ರಥಮ ದರ್ಜೆ ಪಂದ್ಯಗಳಲ್ಲಿ 37 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೆ, ಅವರು ಲಿಸ್ಟ್ ಎ ನಲ್ಲಿ 18 ಪಂದ್ಯಗಳಲ್ಲಿ 25 ವಿಕೆಟ್‌ಗಳನ್ನು ಪಡೆದಿದ್ದಾರೆ. ಹಾಗೆಯೇ ಟಿ20ಯಲ್ಲಿ 27 ವಿಕೆಟ್‌ಗಳನ್ನು ಹೊಂದಿದ್ದಾರೆ. ಬ್ಯಾಟಿಂಗ್‌ನಲ್ಲಿ, ಅವರು ಪ್ರಥಮ ದರ್ಜೆ ಪಂದ್ಯದಲ್ಲಿ ಶತಕ ಕೂಡ ಬಾರಿಸಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:47 pm, Wed, 10 September 25