AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಲಕ್ಷ ರೂ.ಗೆ ಹೊಸ ತಂಡ ಸೇರಿದ ಅರ್ಜುನ್ ತೆಂಡೂಲ್ಕರ್

Arjun Tendulkar Mumbai T20 League: ಐಪಿಎಲ್ 2026 ರಲ್ಲಿ ಆಡುವ ಅವಕಾಶ ಸಿಗದ ಅರ್ಜುನ್ ತೆಂಡೂಲ್ಕರ್, ಮುಂಬೈ T20 ಲೀಗ್ ಹರಾಜಿನಲ್ಲಿ ₹10 ಲಕ್ಷಕ್ಕೆ ARCS ಅಂಧೇರಿ ತಂಡಕ್ಕೆ ಸೇಲ್ ಆಗಿದ್ದಾರೆ. ಮೇ 2 ರಂದು ನಡೆದ ಈ ಹರಾಜಿನಲ್ಲಿ, ಮೂಲ ಬೆಲೆಯ 5 ಪಟ್ಟು ಹೆಚ್ಚು ಮೊತ್ತಕ್ಕೆ ಅವರನ್ನು ಖರೀದಿ ಮಾಡಲಾಗಿದೆ. ಗೋವಾ ಪರ ಆಡುವ ಅರ್ಜುನ್‌ಗೆ ಮುಂಬೈ ಲೀಗ್‌ನಲ್ಲಿ ಆಡಲು ವಿಶೇಷ ಅನುಮತಿ ಸಿಕ್ಕಿದ್ದು, ಹೊಸ ಅಖಾಡದಲ್ಲಿ ಮಿಂಚಲು ಸಿದ್ಧರಾಗಿದ್ದಾರೆ.

10 ಲಕ್ಷ ರೂ.ಗೆ ಹೊಸ ತಂಡ ಸೇರಿದ ಅರ್ಜುನ್ ತೆಂಡೂಲ್ಕರ್
Arjun Tendulkar
ಪೃಥ್ವಿಶಂಕರ
|

Updated on:May 02, 2026 | 8:28 PM

Share

ಲೆಜೆಂಡರಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್​ಗೆ (Arjun Tendulkar) ಈ ಬಾರಿಯ ಐಪಿಎಲ್‌ನಲ್ಲಿ (IPL 2026) ಇದುವರೆಗೆ ಆಡುವ ಅವಕಾಶ ಸಿಕ್ಕಿಲ್ಲ. ಪ್ರಸ್ತುತ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಭಾಗವಾಗಿರುವ ಅರ್ಜುನ್ ತೆಂಡೂಲ್ಕರ್ ಮೊದಲ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಅರ್ಜುನ್ ತೆಂಡೂಲ್ಕರ್ ಹೊಸ ತಂಡವನ್ನು ಕೂಡಿಕೊಂಡಿದ್ದಾರೆ. ವಾಸ್ತವವಾಗಿ ಮುಂಬರುವ ದಿನಗಳಲ್ಲಿ ಮುಂಬೈನಲ್ಲಿ ಮುಂಬೈ ಟಿ20 ಲೀಗ್ ನಡೆಯಲಿದ್ದು, ಈ ಲೀಗ್​ಗೆ ನಡೆದ ಹರಾಜಿನಲ್ಲಿ ಅರ್ಜುನ್ ಅವರನ್ನು 10 ಲಕ್ಷ ರೂಗಳಿಗೆ ಖರೀದಿ ಮಾಡಲಾಗಿದೆ.

ಮೇ 2 ರ ಶನಿವಾರದಂದು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಟಿ20 ಲೀಗ್‌ಗಾಗಿ ಆಟಗಾರರ ಹರಾಜು ನಡೆಸಿತು. ಈ ಹರಾಜಿನಲ್ಲಿ ಅರ್ಜುನ್ ತೆಂಡೂಲ್ಕರ್ ಪ್ರಮುಖ ಗಮನ ಸೆಳೆದಿದ್ದರು. ಏಕೆಂದರೆ ಅರ್ಜುನ್ ದೇಶೀಯ ಸರ್ಕ್ಯೂಟ್‌ನಲ್ಲಿ ಗೋವಾ ತಂಡಕ್ಕಾಗಿ ಆಡುತ್ತಾರೆ. ಆದರೆ ಟಿ20 ಮುಂಬೈ ಲೀಗ್ MCA ಯ ಭಾಗವಾಗಿರುವ ಆಟಗಾರರಿಗೆ ಮಾತ್ರ ಅವಕಾಶ ನೀಡುತ್ತದೆ. ಆದಾಗ್ಯೂ ಅರ್ಜುನ್​ಗೆ ಲೀಗ್‌ನಲ್ಲಿ ಆಡಲು ಅನುಮೋದನೆ ನೀಡಲಾಗಿದೆ.

10 ಲಕ್ಷಕ್ಕೆ ಅರ್ಜುನ್ ಮಾರಾಟ

26 ವರ್ಷದ ಅರ್ಜುನ್ ತೆಂಡೂಲ್ಕರ್ ಲೀಗ್‌ನಲ್ಲಿ ಆಡಲು ಅವಕಾಶ ಪಡೆದಿದ್ದಲ್ಲದೆ, ಹರಾಜಿನಲ್ಲಿ ARCS ಅಂಧೇರಿ ತಂಡವನ್ನುಕೂಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅರ್ಜುನ್ ಅವರನ್ನು ಈ ತಂಡ 10 ಲಕ್ಷ ರೂ.ಗೆ ಬಿಡ್ ಮಾಡಿ ತನ್ನ ತೆಕ್ಕೆಗೆ ಹಾಕಿಕೊಂಡಿತು. ವಾಸ್ತವವಾಗಿ 2 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದ ಅರ್ಜುನ್ ಅವರನ್ನು 5 ಪಟ್ಟು ಹೆಚ್ಚು ಮೊತ್ತ ನೀಡಿ ಖರೀದಿ ಮಾಡಲಾಗಿದೆ. ಅರ್ಜುನ್ ತೆಂಡೂಲ್ಕರ್ ಜೊತೆಗೆ, ARCS ಅಂಧೇರಿ ಯುವ ಸ್ಟಾರ್ ಬ್ಯಾಟ್ಸ್‌ಮನ್ ಮುಶೀರ್ ಖಾನ್ ಅವರನ್ನು 11 ಲಕ್ಷ ರೂ.ಗೆ ಖರೀದಿಸಿತು.

5 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದ ಅರ್ಜುನ್ ತೆಂಡೂಲ್ಕರ್

ಐಪಿಎಲ್​ನಲ್ಲಿ ಆಡುವ ಅವಕಾಶ ಸಿಕ್ಕಿಲ್ಲ

ಕಳೆದ ಕೆಲವು ತಿಂಗಳುಗಳು ಅರ್ಜುನ್‌ಗೆ ಏರಿಳಿತಗಳಿಂದ ತುಂಬಿವೆ. ಕಳೆದ ವರ್ಷ, ಅವರನ್ನು ಮೊದಲ ಬಾರಿಗೆ ಮುಂಬೈ ಇಂಡಿಯನ್ಸ್ ಬಿಡುಗಡೆ ಮಾಡಿತು ಆದರೆ ಮರುಖರೀದಿ ಮಾಡಲಿಲ್ಲ. ಹರಾಜಿನಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ಅವರನ್ನು 30 ಲಕ್ಷ ರೂ. ಮೂಲ ಬೆಲೆಗೆ ಖರೀದಿಸಿತು. ಆದಾಗ್ಯೂ, ಅವರು ಐಪಿಎಲ್ 19 ರಲ್ಲಿ ಇನ್ನೂ ಒಂದೇ ಒಂದು ಪಂದ್ಯವನ್ನು ಆಡಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:27 pm, Sat, 2 May 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ